Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

Dhrishya News by Dhrishya News
20/06/2026
in ಸುದ್ದಿಗಳು
0
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!
0
SHARES
6
VIEWS
Share on FacebookShare on Twitter

ಕಾರ್ಕಳ, : ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ರಚನೆ ವಿಚಾರದಲ್ಲಿ ಪಾರದರ್ಶಕತೆ ಕಾಪಾಡಬೇಕು ಹಾಗೂ ದಲಿತ ಸಮುದಾಯದ ಎಲ್ಲ ವರ್ಗಗಳಿಗೂ ನ್ಯಾಯಯುತ ಪ್ರಾತಿನಿಧ್ಯ ನೀಡಬೇಕು ಎಂದು ಕಾರ್ಕಳ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಶ್ರೀನಿವಾಸ್ ಕಾರ್ಲಾ ಆಗ್ರಹಿಸಿದ್ದಾರೆ.

ಪತ್ರಿಕಾ ಪ್ರಕಟಣೆಯಲ್ಲಿ ಮಾತನಾಡಿದ ಅವರು, ಅಣ್ಣಪ್ಪ ನಕ್ರೆ ಹಾಗೂ ಪ್ರತಿಮಾ ರಾಣೆ ಅವರ ಹೇಳಿಕೆಗಳನ್ನು ಗಮನಿಸಿದಾಗ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯು ದಲಿತ ಸಮುದಾಯದ ಹಿತಾಸಕ್ತಿಗಿಂತ ರಾಜಕೀಯ ಉದ್ದೇಶಗಳಿಗೆ ಹೆಚ್ಚು ಒತ್ತು ನೀಡುತ್ತಿರುವುದು ಸ್ಪಷ್ಟವಾಗುತ್ತಿದೆ ಎಂದು ಆರೋಪಿಸಿದರು.

ಅಂಬೇಡ್ಕರ್ ಭವನದ ಆವರಣ ಗೋಡೆ, ನೀರಿನ ವ್ಯವಸ್ಥೆ ಹಾಗೂ ಆಸನ ವ್ಯವಸ್ಥೆ ಸೇರಿದಂತೆ ಹಲವು ಮೂಲಭೂತ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ. ಇಂತಹ ಸಂದರ್ಭದಲ್ಲಿ ಭವನದ ಅಭಿವೃದ್ಧಿಗಿಂತ ರಾಜಕೀಯ ಪ್ರಾಬಲ್ಯ ಸಾಧಿಸುವ ಪ್ರಯತ್ನಗಳು ನಡೆಯುತ್ತಿರುವುದು ವಿಷಾದನೀಯ ಎಂದು ಅವರು ಹೇಳಿದರು.

ಸಮಿತಿ ರಚನೆ ವೇಳೆ ದಲಿತ ಸಮುದಾಯದ ಹಿರಿಯರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ನಿಯಮಾನುಸಾರ ಎಲ್ಲ ದಲಿತ ಸಮುದಾಯಗಳಿಂದ ತಲಾ ಒಬ್ಬ ಪ್ರತಿನಿಧಿಯನ್ನು ಆಯ್ಕೆ ಮಾಡುವ ಬದಲು ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ಮೂವರನ್ನು ಸಮಿತಿಗೆ ಸೇರಿಸಲಾಗಿದೆ ಎಂದು ಆರೋಪಿಸಿದರು. ಈ ಪೈಕಿ ಇಬ್ಬರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು, ಸಮಿತಿ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದರು.

ಅಂಬೇಡ್ಕರ್ ಭವನ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ್ದಲ್ಲ; ಅದು ದಲಿತ ಸಮುದಾಯದ ಸ್ವಾಭಿಮಾನದ ಸಂಕೇತವಾಗಿದೆ. ತಮ್ಮ ಪ್ರಶ್ನೆಗಳು ಹಾಗೂ ಒತ್ತಾಯಗಳು ರಾಜಕೀಯ ಉದ್ದೇಶದಿಂದಲ್ಲ, ಪಾರದರ್ಶಕ ಆಡಳಿತಕ್ಕಾಗಿ ಎಂದು ಅವರು ಸ್ಪಷ್ಟಪಡಿಸಿದರು.

ಸಮಿತಿ ರಚನೆಗೆ ಸಂಬಂಧಿಸಿದ ಸರ್ಕಾರಿ ಆದೇಶವನ್ನು ಸಾರ್ವಜನಿಕರ ಮುಂದಿಡಬೇಕು, ಆಯ್ಕೆಗೆ ಅನುಸರಿಸಿದ ಮಾನದಂಡಗಳನ್ನು ಬಹಿರಂಗಪಡಿಸಬೇಕು ಹಾಗೂ ಭವನದ ನಿರ್ವಹಣೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು ಎಂದು ಒತ್ತಾಯಿಸಿದರು.

ಇದಲ್ಲದೆ, ಹೊಸ ಸಮಿತಿ ರಚಿಸುವಾಗ ಭವನದ ನಿರ್ಮಾಣ ಹಾಗೂ ಅಭಿವೃದ್ಧಿಗೆ ಶ್ರಮಿಸಿದ ಮೂಲ ದಲಿತ ಮುಖಂಡರು ಮತ್ತು ಸಮಾಜದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ರಾಜಕೀಯ ರಹಿತವಾಗಿ ನಿಯಮಾನುಸಾರ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದರು. ದಲಿತ ಸಮಾಜದ ಎಲ್ಲ ಬಣಗಳಿಗೂ ಸಮಿತಿಯಲ್ಲಿ ಪ್ರಾತಿನಿಧ್ಯ ನೀಡಬೇಕು ಹಾಗೂ ಭವನದ ಲೆಕ್ಕಪತ್ರಗಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದರು.

ಆರೋಪ-ಪ್ರತ್ಯಾರೋಪಗಳನ್ನು ಬದಿಗಿಟ್ಟು ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳಿಗೆ ಬದ್ಧವಾಗಿ ಸರ್ವಾನುಮತದ ಸಮಿತಿ ರಚನೆಗೆ ಎಲ್ಲರೂ ಮುಂದಾಗಬೇಕು ಎಂದು ಶ್ರೀನಿವಾಸ್ ಕಾರ್ಲಾ ಕರೆ ನೀಡಿದರು.

Previous Post

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

Next Post

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News