Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.

Dhrishya News by Dhrishya News
23/06/2026
in ಸುದ್ದಿಗಳು
0
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆರೂವರೆ ಲಕ್ಷ ಮೊತ್ತದ ವಿದ್ಯಾರ್ಥಿವೇತನ ವಿತರಣೆ.
0
SHARES
13
VIEWS
Share on FacebookShare on Twitter

ಕಾರ್ಕಳದ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ), ಜೆಸಿಐ ಕಾರ್ಕಳ ಮತ್ತು ಇತರ ದಾನಿಗಳ ನೆರವಿನಿಂದ ಕಾರ್ಕಳ ತಾಲೂಕಿನ ಸರಕಾರಿ ಶಾಲೆಗಳಲ್ಲಿ ಓದುತ್ತಿರುವ 90% ಅಂಕಗಳನ್ನು ಪಡೆದ ಎಸ್ ಎಸ್ ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಈ ವರ್ಷ 25 ಲಕ್ಷ ರೂಪಾಯಿ ಮೊತ್ತದ ವಿದ್ಯಾರ್ಥಿವೇತನಗಳನ್ನು ವಿತರಿಸುವ ಯೋಜನೆ ಇದ್ದು ಅದರ ಉದ್ಘಾಟನಾ ಕಾರ್ಯಕ್ರಮವು ಬೈಲೂರು ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾಕ್ಟರ್ ಮೋಹನ್ ಆಳ್ವಾ ಅವರು ಶಿಕ್ಷಣವು ಮಾನವನ ಮೂಲಭೂತ ಆವಶ್ಯಕತೆ ಆಗಿದೆ. ಇಂದಿನ ದಿನಗಳಲ್ಲಿ ಶಿಕ್ಷಣರಂಗವು ಸ್ಪರ್ಧಾತ್ಮಕವಾಗಿ ಬೆಳೆಯುತ್ತಿದೆ. ಸಿಇಟಿ ಮೊದಲಾದ ಪರೀಕ್ಷೆಗಳಲ್ಲಿ ಇಂದು ಗ್ರಾಮೀಣ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆಯುತ್ತಿದ್ದು ಅವರಿಗೆ ಸಮಾಜದ ನೆರವು ಅಗತ್ಯ ಇದೆ. ಅಮ್ಮನ ನೆರವು ಸಂಸ್ಥೆಯ ಮೂಲಕ ಅವಿನಾಶ್ ಜಿ ಶೆಟ್ಟಿ ಅವರು ಈ ಸಮಾಜಕ್ಕೆ ಉತ್ತಮ ಮೇಲ್ಪಂಕ್ತಿಯನ್ನು ಹಾಕಿಕೊಡುತ್ತಿದ್ದಾರೆ. ಅವರಿಗೆ ಮತ್ತು ಅವರ ನೆರವಿಗೆ ನಿಂತ ಎಲ್ಲಾ ದಾನಿಗಳನ್ನೂ ನಾನು ಅಭಿನಂದಿಸುತ್ತೇನೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾಡಿದ ಕಾರ್ಕಳದ ಶಾಸಕರಾದ ವಿ ಸುನೀಲ್ ಕುಮಾರ್ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ನೆರವು ಆರೋಗ್ಯಪೂರ್ಣ ಸಮಾಜದ ನಿರ್ಮಾಣವನ್ನು ಮಾಡುತ್ತದೆ ಎಂದರು. ಈ ಕಾರ್ಯಕ್ರಮದಲ್ಲಿ ಆರೂವರೆ ಲಕ್ಷ ರೂಪಾಯಿ ಮೊತ್ತದ ವಿದ್ಯಾರ್ಥಿವೇತನಗಳನ್ನು ಅತಿಥಿಗಳು ಹಸ್ತಾಂತರ ಮಾಡಿದರು.

ತುಳು ಸಿನಿಮಾದ ಪ್ರಸಿದ್ಧ ನಟರಾದ ಅರ್ಜುನ್ ಕಾಪಿಕಾಡ್ ಅವರು ಶುಭಾಶಂಸನೆ ಮಾಡಿ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯು ಒಬ್ಬ ಕಲಾವಿದ ಇರುತ್ತಾನೆ. ಕಲೆಯನ್ನು ನಂಬಿ ಬದುಕುವವರನ್ನು ಕಲೆಯು ಎಂದಿಗೂ ಕೈ ಬಿಡುವುದಿಲ್ಲ ಎಂದರು.

ಇದೇ ಸಂದರ್ಭದಲ್ಲಿ ಬೈಲೂರು ಸರಕಾರಿ ಕಾಲೇಜಿನ ಟಾಪರ್ ವಿದ್ಯಾರ್ಥಿಗಳಿಗೆ ನೀಡಲಾಗುವ ದೇಶಾ ಫೌಂಡೇಶನ್ ಸಂಸ್ಥೆಯ 1,05,000 ಮೊತ್ತದ ಆರು ವಿದ್ಯಾರ್ಥಿವೇತನಗಳನ್ನು ಡಾಕ್ಟರ್ ಮೋಹನ್ ಆಳ್ವ ಮತ್ತು ವಿ ಸುನೀಲ್ ಕುಮಾರ್ ಅವರು ಹಸ್ತಾಂತರ ಮಾಡಿ ಅಭಿನಂದಿಸಿದರು. ಪ್ರಾಂಶುಪಾಲರು ದೇಶಾ ಟ್ರಸ್ಟಿನ ನೆರವನ್ನು ಸ್ಮರಿಸಿದರು.

ಕಾರ್ಕಳ ಕ್ರಿಯೇಟಿವ್ ಕಾಲೇಜಿನ ಸ್ಥಾಪಕರಲ್ಲಿ ಒಬ್ಬರಾದ ಡಾಕ್ಟರ್ ಗಣನಾಥ ಶೆಟ್ಟಿ, ತುಳು ಸಿನೆಮಾ ವಿತರಕರಾದ ಸಚಿನ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸಂತೋಷ್ ವಾಗ್ಲೆ, ಸಮಾಜ ಸೇವಕರಾದ ಸುಮಿತ್ ಬೈಲೂರು, ಕಾಲೇಜಿನ ಪ್ರಾಚಾರ್ಯರಾದ ಸೀತಾರಾಮ, ಉಪಪ್ರಾಚಾರ್ಯರಾದ ನಾಗರಾಜ್, ಎಸ್ ಡಿ ಎಂ ಸಿ ಅಧ್ಯಕ್ಷರಾದ ಸ್ಟೀವನ್ ಡಿಸೋಜಾ ಕಾರ್ಯಕ್ರಮದ ಅತಿಥಿಗಳಾಗಿ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.

ಅಮ್ಮನ ನೆರವು ಫೌಂಡೇಶನ್ ಇದರ ಪ್ರವರ್ತಕರಾದ ಅವಿನಾಶ್ ಜಿ ಶೆಟ್ಟಿ ಅವರು ಎಲ್ಲರ ನೆರವನ್ನು ಸ್ಮರಿಸಿದರು. ಫೌಂಡೇಶನ್ ಮಾರ್ಗದರ್ಶಕರಾದ ವಸಂತ್ ಎಂ ಅವರು ಸ್ವಾಗತಿಸಿದರು. ಶಿಕ್ಷಕ ರಾಜೇಂದ್ರ ಭಟ್ ಕೆ ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Previous Post

ಕಾರ್ಕಳ ಯಕ್ಷರಂಗಾಯಣ ಮೂಲ ಹೆಸರಿನಲ್ಲೇ ಉಳಿಯಲಿ : ಶ್ರೀಮತಿ ರಮಿತಾ ಸೂರ್ಯವಂಶಿ

Next Post

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಗುಡುಗು ಸಿಡಿಲು ಬಡಿದು ಮನೆಗೆ ಹಾನಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

21/09/2026
ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

21/09/2026
ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

21/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026

Recent News

imunify-bot-check