Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

Dhrishya News by Dhrishya News
24/06/2026
in मौसम
0
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ
0
SHARES
1
VIEWS
Share on FacebookShare on Twitter

ಬೈಲೂರು ಜೂನ್ 23:- ಆಧುನಿಕ ಜೀವನ ಶೈಲಿಯಿಂದ ಮತ್ತು ಆಹಾರದ ವ್ಯವಸ್ಥೆಯಿಂದ ಹದಿ ಹರೆಯದ ಮಕ್ಕಳಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕಾರ್ಕಳ ಮಹಿಳಾ ಮೋರ್ಚಾದ ವತಿಯಿಂದ ದಿನಾಂಕ 23.06.2026 ರಂದು ಬೈಲೂರು ಪದವಿ ಪೂರ್ವ ಕಾಲೇಜಿನಲ್ಲಿ “ಆರೋಗ್ಯ ಪೂರ್ಣ ಆಹಾರ ಪದ್ಧತಿ“ ಬಗ್ಗೆ ಕಾರ್ಯಾಗಾರ ನಡೆಸಲಾಯಿತು. ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥನೆ ಮಾಡುವ ಮೂಲಕ ಕಾರ್ಯಾಗಾರ ಆರಂಭಿಸಲಾಯಿತು. ಸಮುದಾಯ ಕೇಂದ್ರದ ಆರೋಗ್ಯಾಧಿಕಾರಿ ತೇಜಸ್ವಿನಿ ಯವರು ಹಿಂದಿನ ಸಾಂಪ್ರದಾಯಿಕ ಆಹಾರ ಪದ್ಧತಿ ಮತ್ತು ಈಗಿನ ಆಹಾರ ಪದ್ಧತಿಯ ಬಗ್ಗೆ ಮತ್ತು ಸಮತೋಲಿತ ಆಹಾರ ಸೇವನೆ ಬಗ್ಗೆ ವಿವರವಾದ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸಂಧ್ಯಾ ರಮೇಶ್ ಮಾತನಾಡಿ ಕೊಬ್ಬುಯುಕ್ತವಾದ ಅತಿಯಾದ ಎಣ್ಣೆ ಪದಾರ್ಥಗಳ ಬಳಕೆಗಿಂತ ಸೊಪ್ಪು ತರಕಾರಿ, ಮೊಳಕೆಕಾಳುಗಳಂತಹ ಆಹಾರಗಳ ಮಿತ ಬಳಕೆಯಿಂದ ಇಂಧನ ಉಳಿತಾಯ ಮತ್ತು ಆರೋಗ್ಯ ವರ್ಧನೆ ಮಾಡಿಕೊಳ್ಳಬಹುದಾಗಿದೆ. ಪ್ರಧಾನಿಯವರ ಆತ್ಮ ನಿರ್ಭರ ಪರಿಕಲ್ಪನೆಯಡಿಯಲ್ಲಿ ಸ್ಥಳೀಯ ಆಹಾರ ಪದಾರ್ಥಗಳ ಬಳಕೆಯ ಬಗ್ಗೆ ಉಲ್ಲೇಖವಿದೆ ಎಂದರು. ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಸೀತಾರಾಮ್ ಭಟ್ ಮಾತನಾಡಿ ಕಾರ್ಯಾಗಾರದಲ್ಲಿ ಪಡೆದ ಮಾಹಿತಿಯನ್ನು ನಮ್ಮ ಮನೆಗಳಲ್ಲಿ ಮತ್ತು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಆರೋಗ್ಯವಂತ ಜೀವನ ನಡೆಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ರವೀಂದ್ರ ಕುಮಾರ್ ರವರು ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಮಾಲಿನಿ ಜೆ ಶೆಟ್ಟಿ, ಕಾರ್ಕಳ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರಾದ ವಿನಯ ಡಿ ಬಂಗೇರಾ, ಜಿಲ್ಲಾ ಕಾರ್ಯದರ್ಶಿ ಶೋಭಾ ಭಾಸ್ಕರ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಉಷಾ ಜಯಪ್ರಕಾಶ್, ಲಕ್ಷ್ಮೀ ಮಂಜುನಾಥ್, ಕಾರ್ಯದರ್ಶಿ ಜ್ಯೋತಿ ರಮೇಶ್, ತಾಲೂಕು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನುತಾ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ಉಪನ್ಯಾಸಕರಾದ ರತ್ನಾಕರ ಪೂಜಾರಿ ಸ್ವಾಗತಿಸಿ ವಿನಯ ಡಿ ಬಂಗೇರ ವಂದಿಸಿದರು. ತಾಲೂಕು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಮಾ ರವಿಕಾಂತ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಗಾರ ನಡೆಸಿಕೊಟ್ಟ ಆರೋಗ್ಯಾಧಿಕಾರಿ ತೇಜಸ್ವಿನಿಯವರನ್ನು ಫಲ ಪುಷ್ಪ ನೀಡಿ ಗೌರವಿಸಲಾಯಿತು.

Previous Post

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

Next Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026
ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

24/06/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026
ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

ಉಡುಪಿ: ಜುಲೈ 05ರಂದು ಚಿತ್ರಕಲಾ ಸ್ಪರ್ಧೆ ಆಯೋಜನೆ..!

24/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved