Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

Dhrishya News by Dhrishya News
25/06/2026
in ಸುದ್ದಿಗಳು
0
ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್
0
SHARES
2
VIEWS
Share on FacebookShare on Twitter

ಇಪ್ಪತೈದು ವರ್ಷಗಳಿಗೊಮ್ಮೆ ನಡೆಯುವ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ಈ ಬಾರಿ ಜೂ.30ರಿಂದ ನಡೆಯಲಿದೆ. ಬಿಎಲ್ಒಗಳು 2025ರ ಮತದಾರ ಪಟ್ಟಿಯಲ್ಲಿರುವ ಎಲ್ಲ ಮತದಾರರಿಗೆ ನೀಡುವ ನಿಗದಿತ ಮುದ್ರಿತ ನಮೂನೆಯನ್ನು ಅರ್ಹ ಮತದಾರರು ಪರಿಶೀಲಿಸಿ, ಸಹಿ ಮಾಡಿ, ಇತ್ತೀಚೆಗಿನ ಭಾವಚಿತ್ರ ಸಹಿತ ಅಗತ್ಯವಿರುವ ಸೂಕ್ತ ದಾಖಲೆಯೊಂದಿಗೆ ಕಡ್ಡಾಯವಾಗಿ ಬಿಎಲ್ಒಗಳಿಗೆ ಸಲ್ಲಿಸಬೇಕಾಗಿದೆ. ಈ ಪ್ರಕ್ರಿಯೆಯಲ್ಲಿ ಪಕ್ಷದಿಂದ ನೇಮಕಗೊಂಡಿರುವ ಬಿಎಲ್ಎ2ಗಳು ಸಕ್ರಿಯವಾಗಿ ಪಾಲ್ಗೊಂಡು ಎಸ್.ಐ.ಆರ್. ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್ ತಿಳಿಸಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಅರ್ಹ ಮತದಾರರ ಹೆಸರು ಮತದಾರ ಪಟ್ಟಿಯಲ್ಲಿ ಬಿಟ್ಟು ಹೋಗದಂತೆ ಹಾಗೂ ಅನರ್ಹರ ಹೆಸರು ಸೇರ್ಪಡೆಗೊಳ್ಳದಂತೆ ಜಿಲ್ಲೆಯಾದ್ಯಂತ ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ನಿಗಾ ವಹಿಸುವ ಜೊತೆಗೆ ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸಿ ಸದೃಢ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಅವರು ಕರೆ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಜಿಲ್ಲೆಯ ಎಲ್ಲಾ ಮಂಡಲಗಳಲ್ಲಿ ಶಕ್ತಿ ಕೇಂದ್ರಗಳ ಸಭೆ ಆಯೋಜನೆ, ಮಹಾಶಕ್ತಿ ಕೇಂದ್ರಗಳ ಪುನರ್ ರಚನೆ ಹಾಗೂ ಪಕ್ಷದ ಸಂಘಟನಾತ್ಮಕ ವಿಚಾರಗಳ ಕುರಿತು ವಿಸ್ತ್ರತ ಮಾಹಿತಿ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಮಾತನಾಡಿ, ‘ಮನ್ ಕೀ ಬಾತ್’ ವೀಕ್ಷಣೆಯಲ್ಲಿ ಉಡುಪಿ ಜಿಲ್ಲೆ ಬಿಜೆಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಸತತವಾಗಿ 100% ಸಾಧನೆಯನ್ನು ದಾಖಲಿಸಿ ರಾಜ್ಯದಲ್ಲಿ ಮುಂಚೂಣಿ ಸ್ಥಾನವನ್ನು ಪಡೆದಿದ್ದು, ಜೂ.28ರ ಸಹಿತ ಮುಂದಿನ ಎಲ್ಲಾ ತಿಂಗಳ ‘ಮನ್ ಕೀ ಬಾತ್’ ವೀಕ್ಷಣೆ ಮತ್ತು ವರದಿ, ಫೋಟೋ ಅಪ್ಲೋಡ್ ಪ್ರಕ್ರಿಯೆಯಲ್ಲಿ ಜಿಲ್ಲೆಯ ಎಲ್ಲಾ ಮಂಡಲಗಳು ನಿರಂತರ 100% ಸಾಧನೆಯನ್ನು ಕಾಯ್ದುಕೊಳ್ಳುವ ಜೊತೆಗೆ ಎಲ್ಲಾ ಬೂತ್ ಗಳು ‘ಮನ್ ಕೀ ಬಾತ್’ ವೀಕ್ಷಣೆಯೊಂದಿಗೆ ಬೂತ್ ಸಭೆಯನ್ನು ಆಯೋಜಿಸುವಂತೆ ಕರೆ ನೀಡಿದರು.

ಮಂಡಲಾಧ್ಯಕ್ಷರು ಮಂಡಲವಾರು ಚಟುವಟಿಕೆಗಳ ವರದಿ ಮಂಡಿಸಿದರು.

ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ವರ್ಗದ ಅವಲೋಕನ ನಡೆಯಿತು. ಪ್ರಶಿಕ್ಷಣಾರ್ಥಿಗಳು ವರ್ಗದ ಮಾದರಿ ಆಯೋಜನೆ ಕುರಿತು ಅನಿಸಿಕೆ ಹಂಚಿಕೊಂಡರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮರ್ಜುನ ಹೆಗ್ಡೆ ಸಹಿತ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು, ಜಿಲ್ಲಾ ವಿವಿಧ ಪ್ರಕೋಷ್ಠಗಳ ಸಂಚಾಲಕರು, ಸಹ ಸಂಚಾಲಕರು ಉಪಸ್ಥಿತರಿದ್ದರು.

ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಗೀತೆ ಹಾಡಿದರು. ಜಿಲ್ಲಾ ಉಪಾಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಸ್ವಾಗತಿಸಿ, ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ ಕೊಡವೂರು ವಂದಿಸಿದರು.

Previous Post

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

Next Post

ತಡರಾತ್ರಿವರೆಗೆ ಪುರಸಭೆ ಮಹಿಳಾ ಸಿಬ್ಬಂದಿಗಳಿಗೆ ಸಭೆ ನಡೆಸಿದ ಯೋಜನಾ ನಿರ್ದೇಶಕ…

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ತಡರಾತ್ರಿವರೆಗೆ ಪುರಸಭೆ ಮಹಿಳಾ ಸಿಬ್ಬಂದಿಗಳಿಗೆ ಸಭೆ ನಡೆಸಿದ ಯೋಜನಾ ನಿರ್ದೇಶಕ…

ತಡರಾತ್ರಿವರೆಗೆ ಪುರಸಭೆ ಮಹಿಳಾ ಸಿಬ್ಬಂದಿಗಳಿಗೆ ಸಭೆ ನಡೆಸಿದ ಯೋಜನಾ ನಿರ್ದೇಶಕ...

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News