Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ

Dhrishya News by Dhrishya News
01/07/2026
in ಸುದ್ದಿಗಳು
0
ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ
0
SHARES
6
VIEWS
Share on FacebookShare on Twitter

ಕೇವಲ ಚುನಾವಣೆ ಗೆಲ್ಲುವುದೇ ಬಿಜೆಪಿ ಗುರಿ ಅಲ್ಲ. ವಿಚಾರದ ಅಡಿಯಲ್ಲಿ ಚುನಾವಣೆ ಎದುರಿಸಿ ಉತ್ತಮ ಗೆಲುವು ಸಾಧಿಸುವುದು, ರಾಷ್ಟ್ರೀಯ ವಿಚಾರಧಾರೆಯ ಮೂಲಕ ದೇಶ ಮೊದಲು ಎಂಬ ಚಿಂತನೆಯೊಂದಿಗೆ, ಭಯ ಮುಕ್ತ ರಾಷ್ಟ್ರ ನಿರ್ಮಾಣ, ವಿಕಸಿತ ಭಾರತ ಪರಿಕಲ್ಪನೆಯೊಂದಿಗೆ ವಿಶ್ವ ಗುರು ಭಾರತ ಬಿಜೆಪಿ ಗುರಿಯಾದೆ. ಈ ನಿಟ್ಟಿನಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಪದಾಧಿಕಾರಿಗಳು ಮತ್ತು ಸದಸ್ಯರು ಪ್ರಧಾನಿ ನರೇಂದ್ರ ಮೋದಿ ಅವರ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್’ ತತ್ವಗಳಡಿಯಲ್ಲಿ ಸಾಕಾರಗೊಂಡಿರುವ ಕೇಂದ್ರ ಸರಕಾರದ 12 ವರ್ಷಗಳ ಐತಿಹಾಸಿಕ ಸಾಧನೆಗಳು ಮತ್ತು ಜನಪರ ಯೋಜನೆಗಳನ್ನು ಸಮಾಜದಲ್ಲಿ ಪ್ರಚಲಿತಗೊಳಿಸುವ ಜೊತೆಗೆ ಸದೃಢ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜಾ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣವನ್ನು ನೆರವೇರಿಸಿ, ನಿಯುಕ್ತಿ ಪತ್ರವನ್ನು ವಿತರಿಸಿ ಮಾತನಾಡಿದರು.

ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ನೇತೃತ್ವದಲ್ಲಿ ಧರ್ಮ ಗುರುಗಳು, ಧರ್ಮ ಭಗಿನಿಯರು ಮತ್ತು ಸಮುದಾಯದ ಪ್ರಮುಖರ ಸಮಾಗಮದೊಂದಿಗೆ ಆಯೋಜಿಸಿರುವ ‘ಮನ್ ಕೀ ಬಾತ್’ ರಾಜ್ಯ ಮಟ್ಟದ ನೇರ ಪ್ರಸಾರ ವೀಕ್ಷಣೆ ಕಾರ್ಯಕ್ರಮವು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮೆಚ್ಚುಗೆ ಪಡೆದಿದೆ. ಇಂತಹ ಮಾದರಿ ಕಾರ್ಯಕ್ರಮಗಳು ನಿರಂತರ ನಡೆಯುವ ಮೂಲಕ ರಾಷ್ಟ್ರೀಯ ವಿಚಾರಗಳು ಎಲ್ಲೆಡೆ ಪಸರಿಸುವಂತಾಗಬೇಕು ಎಂದು ಕುತ್ಯಾರು ತಿಳಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪಕ್ಷದ ಸಭೆಗಳು, ಪದಾಧಿಕಾರಿಗಳ ಜವಾಬ್ದಾರಿ ಮತ್ತು ಸಂಘಟನಾತ್ಮಕ ವಿಚಾರಗಳ ಕುರಿತು ವಿಸ್ತ್ರತ ಮಾಹಿತಿ ನೀಡಿ ಮಾತನಾಡಿ, ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಾವಧಿಯಲ್ಲಿ ಬಿಜೆಪಿ ಕಾರ್ಯಕರ್ತರಾಗಿ ಜನ ಸೇವೆಯಲ್ಲಿ ತೊಡಗಿಸಿ ಕೊಂಡಿರುವುದು ಹೆಮ್ಮೆಯ ವಿಚಾರ ಎಂದರು.

ಅಲ್ಪಸಂಖ್ಯಾತ ಮೋರ್ಚಾದ ಮಾಜಿ ರಾಜ್ಯ ಕಾರ್ಯದರ್ಶಿ ಸಲೀಂ ಅಂಬಾಗಿಲು ಮಾತನಾಡಿ ಬಿಜೆಪಿ ಆಡಳಿತದ ಅವಧಿಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಬಹಳಷ್ಟು ಸೌಲಭ್ಯಗಳು ಹಾಗೂ ಸ್ಥಾನಮಾನಗಳು ದೊರೆತಿವೆ. ಅಲ್ಪಸಂಖ್ಯಾತ ಸಮುದಾಯ ಬಿಜೆಪಿಯ ಅಭಿವೃದ್ಧಿ ಪರ ಚಿಂತನೆಗೆ ಕೈಜೋಡಿಸಬೇಕು ಎಂದರು.

ಮೋರ್ಚಾದ ಪದಾಧಿಕಾರಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶೇಕ್ ಆಸಿಫ್ ಕಟಪಾಡಿ, ಮಹಮ್ಮದ್ ಅಪ್ಸರ್ ಉಚ್ಚಿಲ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಗೀತೆ ಹಾಡಿದರು. ಮೋರ್ಚಾದ ಉಪಾಧ್ಯಕ್ಷ ಚಿರಂಜೀವಿ ಜೈನ್ ಸ್ವಾಗತಿಸಿದರು. ಕೋಶಾಧಿಕಾರಿ ಗ್ಲೆನ್ ಮೋನಿಸ್ ಕಾರ್ಯಕ್ರಮ ನಿರೂಪಿಸಿ, ಉಪಾಧ್ಯಕ್ಷ ಮೈಕಲ್ ಡಿಸೋಜ ವಂದಿಸಿದರು.

Previous Post

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿಎ ಗುಜ್ಜಾಡಿ ಪ್ರಭಾಕರ್ ನಾಯಕ್.

Next Post

ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026

Recent News