Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹೆರೂರಿನಲ್ಲಿ ಜುಲೈ ೪ರಂದು ‘ಸಹಕಾರದಿಂದ ಸಮೃದ್ಧಿ’ ವಿಶೇಷ ಕಾರ್ಯಕ್ರಮ

Dhrishya News by Dhrishya News
03/07/2026
in ಸುದ್ದಿಗಳು
0
ಹೆರೂರಿನಲ್ಲಿ ಜುಲೈ ೪ರಂದು ‘ಸಹಕಾರದಿಂದ ಸಮೃದ್ಧಿ’ ವಿಶೇಷ ಕಾರ್ಯಕ್ರಮ
0
SHARES
13
VIEWS
Share on FacebookShare on Twitter

ಉಡುಪಿ : ಕೇಂದ್ರ ಸಹಕಾರ ಸಚಿವಾಲಯವು ತನ್ನ ಸ್ಥಾಪನೆಯ ಐದು ವರ್ಷಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ, ಜೂನ್ ೨೯ರಿಂದ ಜುಲೈ ೬, ೨೦೨೬ರವರೆಗೆ ದೇಶಾದ್ಯಂತ ‘ಸಹಕಾರ ಸಪ್ತಾಹ’ ವನ್ನು ಆಚರಿಸಲಾಗುತ್ತಿದೆ. ಈ ಅಂಗವಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು ವತಿಯಿಂದ ‘ಸಹಕಾರದಿಂದ ಸಮೃದ್ಧಿ’ ಎಂಬ ವಿಶೇಷ ಕಾರ್ಯಕ್ರಮವನ್ನು ಜುಲೈ ೪, ರಂದು ಬೆಳಿಗ್ಗೆ ೧೦.೦೦ ಗಂಟೆಗೆ ಬ್ರಹ್ಮಾವರ ತಾಲೂಕಿನ ಹೆರೂರಿನ ದೇವಕಿ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಲಾಗಿದೆ.
‘ಸಹಕಾರದಿಂದ ಸಮೃದ್ಧಿ’ ಎಂಬ ಧ್ಯೇಯದೊಂದಿಗೆ ಸಹಕಾರ ಕ್ಷೇತ್ರವು ಸಮಾಜದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳು, ಸಾಧನೆಗಳು ಹಾಗೂ ಕೈಗೊಂಡಿರುವ ವಿವಿಧ ಜನಪರ ಉಪಕ್ರಮಗಳನ್ನು ಸಾರ್ವಜನಿಕರಿಗೆ ಪರಿಚಯಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಶ್ರೀ ಮಂಜುನಾಥ ಎಸ್. ಕೆ. ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಯಶ್‌ಪಾಲ್ ಎ. ಸುವರ್ಣ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಶ್ರೀಮತಿ ಭಾರತಿ ಜಿ. ಭಟ್, ವೃತ್ತಿಪರ ನಿರ್ದೇಶಕರಾದ ಶ್ರೀ ಮಹದೇವ ಸ್ವಾಮಿ, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಶರಣಗೌಡ ಜಿ. ಪಾಟೀಲ, ಉಡುಪಿಯ ಟೀಚರ‍್ಸ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ಶ್ರೀ ದಿನಕರ ಶೆಟ್ಟಿ, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಅಂಪಾರು ಜಗನ್ನಾಥ ಶೆಟ್ಟಿ ಹಾಗೂ ಶ್ರೀ ರಜಿತ್ ಟಿ.ಕೆ. ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಸಹಕಾರ ಕ್ಷೇತ್ರದ ಬೆಳವಣಿಗೆ ಮತ್ತು ಭವಿಷ್ಯದ ಅವಕಾಶಗಳ ಕುರಿತು ವಿಶೇಷ ಉಪನ್ಯಾಸ ನಡೆಯಲಿದ್ದು, ಜಿಲ್ಲೆಯ ಹಿರಿಯ ಸಹಕಾರಿ ಧುರೀಣರೊಂದಿಗೆ ‘ಸಹಕಾರ ಚಳುವಳಿಯ ಪ್ರಸಕ್ತ ಬೆಳವಣಿಗೆ’ ಕುರಿತು ಸಂವಾದ ಕಾರ್ಯಕ್ರಮವೂ ಆಯೋಜಿಸಲಾಗಿದೆ. ಉಡುಪಿ ಜಿಲ್ಲೆಯ ೧೫೫ ಸೌಹಾರ್ದ ಸಹಕಾರಿ ಸಂಸ್ಥೆಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ,ಬೆಂಗಳೂರು ಇದರ ನಿರ್ದೇಶಕರಾದ ಶ್ರೀ ಮಂಜುನಾಥ್ ಎಸ್.ಕೆ ರವರು ಪ್ರಕಟಣೆ ತಿಳಿಸಿದ್ದಾರೆ.

Previous Post

ಮಾಹೆಯ ನರ್ಸಿಂಗ್‌ ಸಾಧಕರಿಗೆ ಅಂತಾರಾಷ್ಟ್ರೀಯ ಗೌರವ

Next Post

ಡಾ| ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣೆ : ಕುತ್ಯಾರು ನವೀನ್ ಶೆಟ್ಟಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಡಾ| ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣೆ : ಕುತ್ಯಾರು ನವೀನ್ ಶೆಟ್ಟಿ

ಡಾ| ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಸದಾ ಪ್ರೇರಣೆ : ಕುತ್ಯಾರು ನವೀನ್ ಶೆಟ್ಟಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

23/08/2026
ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

23/08/2026
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026

Recent News