Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್, ರೈಟ್ ಟ್ಯಾಕ್ಸ್ ಮೇಟ್ ಇಂಡಿಯಾ (ಪ್ರೈ) ಲಿಮಿಟೆಡ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ

Dhrishya News by Dhrishya News
06/07/2026
in ಸುದ್ದಿಗಳು
0
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್, ರೈಟ್ ಟ್ಯಾಕ್ಸ್ ಮೇಟ್ ಇಂಡಿಯಾ (ಪ್ರೈ) ಲಿಮಿಟೆಡ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ
0
SHARES
6
VIEWS
Share on FacebookShare on Twitter

ರೈಟ್ ಟ್ಯಾಕ್ಸ್ ಮೇಟ್ ಇಂಡಿಯಾ ( ಪ್ರೈ) ಲಿಮಿಟೆಡ್ ಇದರ ಪ್ರಾಯೋಜಕತ್ವದಲ್ಲಿ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್, ಮೂಲಕ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ಶೇಕಡ 90 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮ ಸರಕಾರಿ ಪದವಿ ಪೂರ್ವ ಕಾಲೇಜು, ಕಾರ್ಕಳ ಇಲ್ಲಿ ನಡೆಯಿತು. ದ್ವಿತೀಯ ಪಿಯುಸಿ ವಿಭಾಗದ 12 ಹಾಗೂ ಎಸ್ ಎಸ್ ಎಲ್ ಸಿ ಯ 12 ವಿದ್ಯಾರ್ಥಿಗಳಿಗೆ ಅನುಕ್ರಮವಾಗಿ ತಲಾ ರೂ.10,000/- ಹಾಗೂ 5,000 ದಂತೆ ವಿದ್ಯಾರ್ಥಿ ವೇತನವನ್ನು ನೀಡಿ ಪುರಸ್ಕರಿಸಲಾಯಿತು.

ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ರಾಜೇಶ್ವರಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ದೇವಿ ಪ್ರಸಾದ್ ಶೆಟ್ಟಿ ಅವರು ಆರ್ಥಿಕ ಸಮಸ್ಯೆಯಿಂದ ಯಾವುದೇ ವಿದ್ಯಾರ್ಥಿಗಳು ಶಿಕ್ಷಣ ವಂಚಿತರಾಗಬಾರದು. ಶಿಕ್ಷಣಕ್ಕೆ ಸಹಾಯ ಮಾಡುವ ದಾನಿಗಳು ಸಾಕಷ್ಟು ಇದ್ದಾರೆ. ಅದನ್ನು ಬಳಸಿಕೊಂಡು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಿ ಎಂದರು. ಸರಕಾರಿ ಶಾಲೆಗಳಲ್ಲಿ ಉತ್ತಮ ಅರ್ಹತೆ ಇರುವ ಶಿಕ್ಷಕರಿದ್ದು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವುದು ಶ್ಲಾಘನೀಯ ಎಂದರು.

ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ರೈಟ್ ಟ್ಯಾಕ್ಸ್ ಮೇಟ್ ಇಂಡಿಯಾ ಪ್ರೈ ಲಿಮಿಟೆಡ್ ಇದರ ಪಾಲುದಾರರೂ, ವಿದ್ಯಾರ್ಥಿ ವೇತನದ ಸಂಪೂರ್ಣ ಮೊತ್ತ ರೂ.1 ಲಕ್ಷ 80 ಸಾವಿರ ನೀಡಿದ ಸಿ.ಎ. ಹರೀಶ್ ಕಾರ್ಕಳ ತನ್ನ ವಿದ್ಯಾರ್ಥಿ ಜೀವನದ ಅನುಭವಗಳನ್ನು ಮೆಲುಕು ಹಾಕುತ್ತಾ ವಿದ್ಯಾರ್ಥಿಗಳ ಪರಿಶ್ರಮ ಸತತ ಪ್ರಯತ್ನ ಹಾಗೂ ಶಿಕ್ಷಕರ ಪ್ರೇರಣೆಯಿದ್ದರೆ ಶಿಕ್ಷಣದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲೆ ಅನ್ನಪೂರ್ಣ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೌಢ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಗೌರವಾಧ್ಯಕ್ಷ ವಿಜಯ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿಯ ಕೋಶಾಧಿಕಾರಿ ನಿತ್ಯಾನಂದ ಪೈ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆರ್ಮುಂಡೆ ಇಲ್ಲಿನ ಶಿಕ್ಷಕ ಸಂತೋಷ್ ಶೆಟ್ಟಿ, ಹಾಗೂ ಕುಕ್ಕುಂದೂರು ಗ್ರಾಮ ಪಂಚಾಯತ್ ನಿಕಟ ಪೂರ್ವ ಸದಸ್ಯ ಯೋಗೀಶ್ ಸಾಲ್ಯಾನ್ , ಕಾಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಯ ಮಾಜಿ ಅಧ್ಯಕ್ಷ ವೈಕುಂಠ ಶೆಣೈ ಹಾಗೂ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅವಿನಾಶ್ ಜಿ ಶೆಟ್ಟಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಪಿ ಪ್ರಾರ್ಥಿಸಿದರು. ವಸಂತ್ ಎಂ. ನಿರೂಪಿಸಿ ಸ್ವಾಗತಿಸಿದರು. ಉಪನ್ಯಾಸಕ ಸದಾನಂದ ವಂದಿಸಿದರು.

Previous Post

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಅಪರೂಪದ ಸಂಕೀರ್ಣ ಶಸ್ತ್ರಚಿಕಿತ್ಸೆ ಯಶಸ್ವಿ

Next Post

ಆಂಧ್ರಪ್ರದೇಶದಲ್ಲಿ 3200+ ಕೋಟಿ ರೂ. ಹೂಡಿಕೆ ಘೋಷಿಸಿದ ಹೀರೋ ಮೋಟೋಕಾರ್ಪ್

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆಂಧ್ರಪ್ರದೇಶದಲ್ಲಿ 3200+ ಕೋಟಿ ರೂ. ಹೂಡಿಕೆ ಘೋಷಿಸಿದ ಹೀರೋ ಮೋಟೋಕಾರ್ಪ್

ಆಂಧ್ರಪ್ರದೇಶದಲ್ಲಿ 3200+ ಕೋಟಿ ರೂ. ಹೂಡಿಕೆ ಘೋಷಿಸಿದ ಹೀರೋ ಮೋಟೋಕಾರ್ಪ್

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

23/08/2026
ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

23/08/2026
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026

Recent News