Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಜೂ. 5ರಿಂದ ಅಕ್ಟೋಬರ್‌ 15ರ ವರೆಗೆ ನಾನ್‌ ಸಿಆರ್‌ಝಡ್‌ ಮರಳುಗಾರಿಕೆ ನಿಷೇಧ..!!

Dhrishya News by Dhrishya News
03/06/2023
in मौसम
0
0
SHARES
11
VIEWS
Share on FacebookShare on Twitter

ಉಡುಪಿ: ಜಿಲ್ಲೆಯಲ್ಲಿ ಮಳೆಗಾಲ ಅವಧಿ ಮೀನು ಮರಿ ಉತ್ಪಾದನೆ ಕಾರಣಕ್ಕೆ ಜೂ. 5ರಿಂದ ಅಕ್ಟೋಬರ್‌ 15ರ ವರೆಗೆ ನಾನ್‌ ಸಿಆರ್‌ಝಡ್‌ ಮರಳುಗಾರಿಕೆಗೆ ನಿಷೇಧ ಇರಲಿದೆ. ಸಿಆರ್‌ಝಡ್‌ ವಲಯದ ಮರಳುಗಾರಿಕೆ ಜೂನ್‌, ಜುಲೈ ಎರಡು ತಿಂಗಳು ನಿರ್ಬಂಧ ಇರಲಿದೆ. ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ಪದ್ಧತಿಯಲ್ಲಿ ಮರಳು ತೆಗೆಯಲು ಸುಪ್ರೀಂ ಕೋರ್ಟ್‌ ಆದೇಶವಾದರೂ ಮಳೆಗಾಲ ಮುಗಿಯುವವರೆಗೆ ಕಾಯಬೇಕಿದೆ.

ಸಿಆರ್‌ಝಡ್‌ ಮರಳು ದಿಬ್ಬ ತೆರವಿಗೆ ನಿಷೇಧ ಹೇರಿದ್ದ ರಾಷ್ಟ್ರೀಯ ಹಸುರು ಪ್ರಾಧಿಕಾರದ (ಎನ್‌ಜಿಟಿ) ಆದೇಶದ ವಿರುದ್ಧ ರಾಜ್ಯ ಸರಕಾರ ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿದ್ದು, ಮಧ್ಯಾಂತರ ಆದೇಶದ ಮೂಲಕ ಸದ್ಯಕ್ಕೆ ಸಾಂಪ್ರದಾಯಿಕ ಮರಳು ತೆರವಿಗೆ ಅವಕಾಶ ಕಲ್ಪಿಸಲಾಗಿದೆ. ಕೋರ್ಟ್‌ ಆದೇಶವಿದ್ದರೂ ಮರಳು ದಿಬ್ಬ ತೆರವಿಗೆ ನೀಡಿದ ಎಲ್ಲ ಪರವಾನಗಿ ಅವಧಿ 2022ರಲ್ಲಿ ಮುಗಿದಿದೆ. ಇದೀಗ ಮಳೆಗಾಲ ಅವಧಿಯು ಬಂದಿರುವುದರಿಂದ ಸದ್ಯಕ್ಕೆ ಎಲ್ಲ ಬಗೆಯ ಮರಳುಗಾರಿಕೆ ಸ್ಥಗಿತವಾಗಲಿದೆ. ಮಳೆಗಾಲ ಅನಂತರ ಸಿಆರ್‌ಝಡ್‌ ವ್ಯಾಪ್ತಿ ಸಾಂಪ್ರದಾಯಿಕ ಮರಳು ತೆರವಿಗೆ ಪರವಾನಿಗೆ ನೀಡುವ ಪ್ರಕ್ರಿಯೆ ಹೊಸದಾಗಿ ನಡೆಯಬೇಕಾಗಿದೆ.

ಮೀನುಗಾರರು ದೋಣಿಗಳ ಸರಾಗ ಸಂಚಾರಕ್ಕೆ ಅಡಚಣೆಯಾಗುವ ಮರಳು ದಿಬ್ಬ ತೆರವಿಗೆ ಮೀನುಗಾರಿಕೆ ಇಲಾಖೆಗೆ ಮನವಿ ನೀಡಿದ ಬಳಿಕ ಸಿಆರ್‌ಝಡ್‌ ಇಲಾಖೆಗೆ ವರದಿ ಸಲ್ಲಿಸಬೇಕು. ಅನಂತರ ಮರಳು ದಿಬ್ಬಗಳನ್ನು ಗುರುತಿಸಿ ಜಿಲ್ಲಾಧಿಕಾರಿ ನೇತೃತ್ವದ ಏಳು ಸದಸ್ಯರ ಸಮಿತಿಯು ಪ್ರಸ್ತಾವನೆಯನ್ನು ಕರ್ನಾಟಕ ಕರಾವಳಿ ವಲಯ ನಿಯಂತ್ರಣ ಪ್ರಾಧಿಕಾರಕ್ಕೆ (ಕೆಸಿಎಂಝಡ್‌) ಸಲ್ಲಿಸಬೇಕು. ಇಲ್ಲಿ ಅನುಮೋದನೆ ಸಿಕ್ಕ ಅನಂತರ ಡಿಸಿ ನೇತೃತ್ವದ 7 ಸದಸ್ಯರ ಸಮಿತಿ ಪರವಾನಿಗೆ ನೀಡುವ ಮೂಲಕ ಮರಳು ದಿಬ್ಬ ತೆರವಿಗೆ ಚಾಲನೆ ನೀಡಲಾಗುತ್ತದೆ.

2022-23ನೇ ಸಾಲಿನಲ್ಲಿ 122 ಪರವಾನಗಿ, 19 ಮರಳು ದಿಬ್ಬದಲ್ಲಿ 1.92 ಲಕ್ಷ ಮೆಟ್ರಿಕ್‌ ಟನ್‌ ಮರಳು ತೆರವು ಮಾಡಲಾಗಿದೆ. 5.97 ಲಕ್ಷ ಮೆ.ಟನ್‌ ಮರಳು ಉಳಿಕೆಯಾಗಿದೆ. ನಾನ್‌ ಸಿಆರ್‌ಝಡ್‌ನ‌ಲ್ಲಿ 1.09 ಲಕ್ಷ ಮೆ. ಟನ್‌ ಮರಳು ತೆರವು ಮಾಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ನಾನ್‌ ಸಿಆರ್‌ಝಡ್‌ ಮರಳುಗಾರಿಕೆ ಜೂ. 5ರಿಂದ ಅಕ್ಟೋಬರ್‌ವರೆಗೆ, ಸಿಆರ್‌ಝಡ್‌ ವ್ಯಾಪ್ತಿ ಜೂನ್‌, ಜುಲೈ ಎರಡು ತಿಂಗಳು ನಿಷೇಧ ಇರಲಿದೆ. ಸಿಆರ್‌ಝಡ್‌ ವ್ಯಾಪ್ತಿ ಮರಳು ತೆರವು ಬಗ್ಗೆ ಕೋರ್ಟ್‌ ಮಧ್ಯಾಂತರ ಆದೇಶ ನೀಡಿರುವುದರಿಂದ ಸಾಂಪ್ರದಾಯಿಕ ನೆಲೆಯಲ್ಲಿ ಮರಳು ದಿಬ್ಬ ತೆರವುಗೊಳಿಸುವ ಬಗ್ಗೆ ಜಿಲ್ಲಾಧಿಕಾರಿ ಅವರ ನೇತೃತ್ವದ 7 ಮಂದಿ ಸದಸ್ಯರ ಸಮಿತಿ, ಕೆಸಿಎಂಝಡ್‌ ನಿಂದ ಅನುಮೋದನೆ ಆಗಬೇಕು ಈಗಾಗಲೆ ಪ್ರಕ್ರಿಯೆ ಆರಂಭಿಸಿದ್ದೇವೆ.

Previous Post

ಐದು ಗ್ಯಾರೆಂಟಿ ಪಡೆಯಲು ಏನು ಮಾಡಬೇಕು? ಯಾರಿಗೆಲ್ಲ ಸಿಗಲಿದೆ ಉಚಿತ ಯೋಜನೆ!

Next Post

ಉಡುಪಿ,ಜಿಲ್ಲಾ ಗೃಹ ರಕ್ಷಕ ದಳ,ಕಾರ್ಕಳ ಘಟಕದ ಸುವರ್ಣ ಮಹೋತ್ಸವ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ,ಜಿಲ್ಲಾ ಗೃಹ ರಕ್ಷಕ ದಳ,ಕಾರ್ಕಳ ಘಟಕದ ಸುವರ್ಣ ಮಹೋತ್ಸವ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

31 ವರ್ಷಗಳಿಂದ ನಾಟಕ ಕ್ಷೇತ್ರದಲ್ಲಿ ಸೇವೆ: ಕಲಾವಿದ ಅನಿಲ್ ಕಾಬೆಟ್ಟು ಅವರಿಗೆ ಸನ್ಮಾನ

22/09/2026
ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

ಬೈಂದೂರು: ಪರವಾನಿಗೆ ಇಲ್ಲದೆ ಮದ್ಯ ಸೇವನೆ, ಇಬ್ಬರು ಪರಾರಿ

22/09/2026
ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

ಕಡಿಯಾಳಿ ಗಣೇಶೋತ್ಸವ: ಉಡುಪಿ ರಥಬೀದಿಯಲ್ಲಿ ವಿಸರ್ಜನಾ ಮೆರವಣಿಗೆ

22/09/2026
ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

₹96,000 ಸೈಬರ್ ವಂಚನೆ: ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು

22/09/2026

Recent News

imunify-bot-check