Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಕ್ರೈಸ್ಟ್‌ಕಿಂಗ್‌ನಲ್ಲಿ ಪತ್ರಿಕಾ ದಿನಾಚರಣೆ: ಪತ್ರಕರ್ತರಿಗೆ ಸನ್ಮಾನ

Dhrishya News by Dhrishya News
11/07/2026
in ಸುದ್ದಿಗಳು
0
ಕಾರ್ಕಳ ಕ್ರೈಸ್ಟ್‌ಕಿಂಗ್‌ನಲ್ಲಿ ಪತ್ರಿಕಾ ದಿನಾಚರಣೆ: ಪತ್ರಕರ್ತರಿಗೆ ಸನ್ಮಾನ
0
SHARES
8
VIEWS
Share on FacebookShare on Twitter

ಕಾರ್ಕಳ : ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ಅದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಆಳ್ವಾಸ್‌ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್‌ ಶೆಟ್ಟಿ ಹೇಳಿದರು.

ಅವರು ಜು. 9ರಂದು ಕಾರ್ಕಳ ಕ್ರೈಸ್ಟ್‌ಕಿಂಗ್‌ನಲ್ಲಿ ನಡೆದ ಪತ್ರಿಕಾ ದಿನಾಚರಣೆ – ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪ್ರತಿನಿತ್ಯ ಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಓದು ನಿಮ್ಮ ಭವಿಷ್ಯಕ್ಕೆ ಹೊಸ ದಾರಿ ತೋರಲಿದೆ ಎಂದರು.

ಮಾಧ್ಯಮ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ಕ್ರೈಸ್ಟ್‌ಕಿಂಗ್‌ ಎಜ್ಯುಕೇಶನ್‌ ಟ್ರಸ್ಟ್‌ ವತಿಯಿಂದ ನ್ಯೂಸ್‌ ಕಾರ್ಕಳ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರ ಬರೆಪ್ಪಾಡಿ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದ ಕ್ರೈಸ್ಟ್‌ಕಿಂಗ್‌ ಕಾಲೇಜಿನಲ್ಲಿ ಅರ್ಥಪೂರ್ಣವಾಗಿ ಪತ್ರಿಕಾ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ವೈದ್ಯರು, ಶಿಕ್ಷಕರು, ಪತ್ರಕರ್ತರ ವೃತ್ತಿಯಲ್ಲಿ ಇಂದಿಗೂ ಸೇವೆಯನ್ನು ಕಾಣಬಹುದಾಗಿದೆ ಎಂದರು.
ವಿದ್ಯಾರ್ಥಿಗಳು ಪ್ರಚಲಿತ ವಿದ್ಯಮಾನಗಳ ಕುರಿತು ಅರಿವು ಹೊಂದುವುದು ಅವಶ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಎಳವೆಯಿಂದಲೇ ಓದಿನ ಹವ್ಯಾಸ ಬೆಳೆಸಿಕೊಳ್ಳಬೇಕು. ಓದು ಪರೀಕ್ಷೆಯ ಭಯವನ್ನು ದೂರಗೊಳಿಸಿ ಬದುಕಿನಲ್ಲಿ ಭರವಸೆ ತುಂಬಲಿದೆ ಎಂದ ಅವರು ಎಸ್ಸೆಸೆಲ್ಸಿ, ಪಿಯುಸಿ ಫಲಿತಾಂಶದಲ್ಲಿ ಸತತವಾಗಿ ಶೇ. 100 ಫಲಿತಾಂಶ ದಾಖಲಿಸುವ ಕಾರ್ಕಳದ ಕ್ರೈಸ್ಟ್‌ಕಿಂಗ್‌ನ ಶೈಕ್ಷಣಿಕ ಸಾಧನೆ ಹೀಗೆಯೇ ಮುಂದುವರಿಯಲಿ ಎಂದು ಆಶಿಸಿದರು.

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಧ್ಯಮಬಿಂಬ ಪತ್ರಿಕೆಯ ಸಂಪಾದಕ ವಸಂತ ಕುಮಾರ್ ಮಾತನಾಡಿ, ಸಮಾಜವನ್ನು ಜಾಗೃತಗೊಳಿಸುವ ಪತ್ರಕರ್ತರು ಸದಾ ಎಚ್ಚರಿಕೆಯಿಂದ ಇರಬೇಕು ಎಂದರು.
ಕಾರ್ಕಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಮ್ಮದ್‌ ಶರೀಫ್‌ ಮಾತನಾಡಿ, ಯುವಜನತೆ ಸುದ್ದಿ ಮಾಧ್ಯಮ, ಪತ್ರಿಕೋದ್ಯಮಗಳ ಕಡೆ ಆಕರ್ಷಿತರಾಗಬೇಕು. ಪತ್ರಿಕೋದ್ಯಮ ಎನ್ನುವುದು ಅಪಾರ ಜೀವನಾನುಭವ ನೀಡುವ ಕ್ಷೇತ್ರವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್‌ಕಿಂಗ್‌ ಎಜ್ಯುಕೇಶನ್‌ ಟ್ರಸ್ಟ್‌ ಸದಸ್ಯ ಡಾ. ಪೀಟರ್ ಫೆರ್ನಾಂಡಿಸ್ ಮಾತನಾಡಿ, ಸಮಾಜದಲ್ಲಿ ಧ್ವನಿಯಿಲ್ಲದವರ ಧ್ವನಿಯಾಗಿರುವ ಪತ್ರಕರ್ತರಿಗೆ ಹೆಚ್ಚಿನ ಗೌರವವಿದೆ. ಪತ್ರಕರ್ತರು ಸಮಾಜದ ತಪ್ಪು ಒಪ್ಪುಗಳನ್ನು ತಿದ್ದುವ ಮೂಲಕ ಸುಸ್ಥಿರ ಸಮಾಜ ನಿರ್ಮಿಸಲು ಪ್ರಯತ್ನಿಸುತ್ತಿದ್ದು ಇಂತವರು ನಿಜವಾಗಿಯೂ ಅಭಿನಂದನಾರ್ಹರು ಎಂದರು. ಪತ್ರಕರ್ತರು, ವರದಿಗಾರರು, ಛಾಯಾಗ್ರಾಹಕರನ್ನು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಸಂಸ್ಥೆಯ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್ ಅವರು ಪ್ರಸ್ತಾವನೆಗೈದರು. ಉಪಪ್ರಾಚಾರ್ಯ ಡಾ. ಪ್ರಕಾಶ್ ಭಟ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜೋಸ್ನಾ ಸ್ನೇಹಲತಾ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಐ. ಕ್ರಿಸ್ಟೋಫರ್ ಕೋಟ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ವಾಣಿಜ್ಯಶಾಸ್ತ್ರ ಉಪನ್ಯಾಸಕ ದೀಪಕ್ ಸ್ವಾಗತಿಸಿ, ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Previous Post

ನೆಕ್ಲಾಜೆ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Next Post

ಮಹೇಶ್ ಆಸ್ಪತ್ರೆಯಲ್ಲಿ ಜುಲೈ 19ರಂದು ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಹೇಶ್ ಆಸ್ಪತ್ರೆಯಲ್ಲಿ ಜುಲೈ 19ರಂದು ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ..!

ಮಹೇಶ್ ಆಸ್ಪತ್ರೆಯಲ್ಲಿ ಜುಲೈ 19ರಂದು ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

28/08/2026
ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

28/08/2026
ಭಾರತ–ಯುಕೆ ಹೆಲ್ತ್‌ಟೆಕ್ ಆಕ್ಸಿಲರೇಟರ್ 2026 : ಆರು ಭಾರತೀಯ ನವೋದ್ಯಮಗಳಿಗೆ ಮನ್ನಣೆ

ಭಾರತ–ಯುಕೆ ಹೆಲ್ತ್‌ಟೆಕ್ ಆಕ್ಸಿಲರೇಟರ್ 2026 : ಆರು ಭಾರತೀಯ ನವೋದ್ಯಮಗಳಿಗೆ ಮನ್ನಣೆ

28/08/2026
ಮುನಿಯಾಲಿನಲ್ಲಿ 36ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಆಚರಣೆ

ಮುನಿಯಾಲಿನಲ್ಲಿ 36ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಆಚರಣೆ

28/08/2026

Recent News