ಬೈಂದೂರು ಜು 11 : ಕೇರಳದ ಮುಖ್ಯಮಂತ್ರಿ ವಿ. ಡಿ ಸತೀಶನ್ ಶನಿವಾರ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
Z-ಪ್ಲಸ್ ಭದ್ರತೆಯಲ್ಲಿ ಅವರು ದೇವಸ್ಥಾನಕ್ಕೆ ಅವರು ಸಿಎಂ ಆದ ನಂತರ ಮೊದಲ ಬಾರಿಗೆ ಆಗಮಿಸಿದ್ದರು. ಮುಂಜಾನೆಯೇ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ದೇವಾಲಯದ ಹಿರಿಯ ಅರ್ಚಕರಾದ ಎನ್.ನರಸಿಂಹ ಅಡಿಗ ಹಾಗೂ ಸುಬ್ರಮಣ್ಯ ಅಡಿಗ ನೇತೃತ್ವದಲ್ಲಿ ಪೂಜೆ ಬಳಿಕ ದೇವಾಲಯದ ಆಡಳಿತ ಮಂಡಳಿಯ ವತಿಯಿಂದ ಮುಖ್ಯಮಂತ್ರಿಗಳಿಗೆ ದೇವಿಯ ಪ್ರಸಾದ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಗ್ಗರ್ಸೆ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಭಿಲಾಷ್ ಪಿ.ವಿ., ರಾಜೇಶ್ ಕಾರಂತ್, ರಘುರಾಮ್ ದೇವಾಡಿಗ, ಸುರೇಂದ್ರ ಶೆಟ್ಟಿ, ಸುಧಾ ಕೆ., ಧನಾಕ್ಷಿ ಪೂಜಾರಿ, ಮಹಾಲಿಂಗ ನಾಯ್ಕ್, ಬೈಂದೂರು ಮಾಜಿ ಶಾಸಕ ಕೆ ಗೋಪಾಲ ಪೂಜಾರಿ ಹಾಗೂ ಮೊದಲಾದವರು ಇದ್ದರು.








