Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನೆಕ್ಲಾಜೆ ಕಾಳಿಕಾಂಬಾ ವಿಶ್ವಕರ್ಮ ಅಸೋಸಿಯೇಷನ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

Dhrishya News by Dhrishya News
15/07/2026
in ಸುದ್ದಿಗಳು
0
ನೆಕ್ಲಾಜೆ ಕಾಳಿಕಾಂಬಾ ವಿಶ್ವಕರ್ಮ ಅಸೋಸಿಯೇಷನ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ
0
SHARES
19
VIEWS
Share on FacebookShare on Twitter

ಕಾರ್ಕಳ, ಜು. 15: ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಶ್ರೀ ಕಾಳಿಕಾಂಬಾ ವಿಶ್ವಕರ್ಮ ಅಸೋಸಿಯೇಷನ್ (ರಿ.) ಹಾಗೂ ಶ್ರೀ ಕಾಳಿಕಾಂಬಾ ವಿಶ್ವಕರ್ಮ ಫೈನಾನ್ಸ್ ಕಾರ್ಪೋರೇಶನ್ (ರಿ.), ಕಾರ್ಕಳ ಇದರ 2025–26ನೇ ಸಾಲಿನ ವಾರ್ಷಿಕ ಮಹಾಸಭೆ, ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ದೇವಸ್ಥಾನದ ಆಡಳಿತ ಮುಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ನಡೆದ ಚುನಾವಣೆಯಲ್ಲಿ ಕೆ. ಸುಧಾಕರ ಆಚಾರ್ಯ (ಸಾಲ್ಮರ) ಅಧ್ಯಕ್ಷರಾಗಿ ಹಾಗೂ ಕೆ. ಸುರೇಶ್ ಆಚಾರ್ಯ (ನಿಟ್ಟೆ) ಕಾರ್ಯದರ್ಶಿಯಾಗಿ ಆಯ್ಕೆಯಾದರು.

ಪಿ. ವಸಂತ ಆಚಾರ್ಯ ಕೋಶಾಧ್ಯಕ್ಷರಾಗಿ, ಕೆ. ದಿನೇಶ್ ಆಚಾರ್ಯ ಗೌರವ ಅಧ್ಯಕ್ಷರಾಗಿ, ಕೆ. ದಿವಾಕರ ಆಚಾರ್ಯ (ನಿಟ್ಟೆ) ಉಪಾಧ್ಯಕ್ಷರಾಗಿ ಹಾಗೂ ಪಿ. ರವಿ ಆಚಾರ್ಯ (ಪೆರ್ವಾಜೆ) ಗೌರವ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ಮುಖ್ಯ ಅತಿಥಿಯಾಗಿ ಕಾರ್ಕಳ ವಕೀಲರ ಸಂಘದ ಅಧ್ಯಕ್ಷ ಹಾಗೂ ನ್ಯಾಯವಾದಿ ಪ್ರಕಾಶ್ ಆಚಾರ್ ಭಾಗವಹಿಸಿದ್ದರು. ವೇದಿಕೆಯಲ್ಲಿ ಕ್ಷೇತ್ರದ ಜೊತೆ ಮುಕ್ತೇಸರರಾದ ಪಿ. ರವಿ ಆಚಾರ್ಯ, ಪಿ. ವಸಂತ ಆಚಾರ್ಯ, ಕೆ. ದಿನೇಶ್ ಆಚಾರ್ಯ, ಭಜನಾ ಸೇವಾ ಸಮಿತಿಯ ಅಧ್ಯಕ್ಷ ಕೆ. ದಿನೇಶ್ ಆಚಾರ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಅಸೋಸಿಯೇಷನ್ ವತಿಯಿಂದ ಶ್ರೀ ಕಾಳಿಕಾಂಬ ಭಜನಾ ಸೇವಾ ಸಮಿತಿಗೆ ₹15,000 ಸಹಾಯಧನ ನೀಡಲಾಯಿತು. ಅಲ್ಲದೆ, 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 13 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ 95 ಶೇಕಡಕ್ಕಿಂತ ಹೆಚ್ಚು ಅಂಕಗಳಿಸಿದ 19 ವಿದ್ಯಾರ್ಥಿಗಳಿಗೆ ನಗದು ನೀಡಿ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಶಿಲ್ಪಿ ರಾಮಚಂದ್ರ ಆಚಾರ್ಯ, ಕೆ. ರತ್ನಾಕರ ಆಚಾರ್ಯ (ಕಟ್ಟಿಮಾರ್), ಎಂ. ರಮೇಶ್ ಆಚಾರ್ಯ (ಪರಪು), ಪ್ರಶಾಂತ್ ಆಚಾರ್ಯ, ಸತೀಶ್ ಆಚಾರ್ಯ, ಅಶೋಕ್ ಆಚಾರ್ಯ (ಅಂಡಾರ್), ಎಸ್. ಪ್ರವೀಣ್ ಆಚಾರ್ಯ, ವೈ.ಟಿ. ಪ್ರಕಾಶ್ ಆಚಾರ್ಯ ಹಾಗೂ ಕೆ. ಕರುಣಾಕರ ಆಚಾರ್ಯ ಆಯ್ಕೆಯಾದರು.
ಅಸೋಸಿಯೇಷನ್ ಅಧ್ಯಕ್ಷ ಕೆ. ಸುಧಾಕರ ಆಚಾರ್ಯ ಸ್ವಾಗತಿಸಿದರು. ಎಂ. ರಮೇಶ್ ಆಚಾರ್ಯ (ಪರಪು) ಕಾರ್ಯಕ್ರಮ ನಿರೂಪಿಸಿ, ರಮೇಶ್ ಆಚಾರ್ಯ (ಬಂಗ್ಲಗುಡ್ಡೆ) ವಂದಿಸಿದರು.

Previous Post

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್(ರಿ)ಕಾರ್ಕಳ ತಾಲೂಕು; ಶೌರ್ಯ ವಿಪತ್ತು ನಿರ್ವಹನ ಸ್ವಯಂ ಸೇವಕರಿಗೆ ತರಬೇತಿ ಕಾರ್ಯಗಾರ..!

Next Post

ಲಯನ್ಸ್‌ ಕ್ಲಬ್‌ ಕಾರ್ಕಳ ಸಿಟಿಯ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಲಯನ್ಸ್‌ ಕ್ಲಬ್‌ ಕಾರ್ಕಳ ಸಿಟಿಯ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಲಯನ್ಸ್‌ ಕ್ಲಬ್‌ ಕಾರ್ಕಳ ಸಿಟಿಯ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

11/09/2026
ಬ್ರಹ್ಮಾವರ ಎಸ್‌ಎಂಎಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಉದ್ಘಾಟನೆ

ಬ್ರಹ್ಮಾವರ ಎಸ್‌ಎಂಎಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಉದ್ಘಾಟನೆ

11/09/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

11/09/2026
ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು..!

ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು..!

11/09/2026

Recent News

imunify-bot-check