Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ–ಕಳಸ ರಸ್ತೆ ಅಭಿವೃದ್ಧಿಗೆ ಟೆಂಡರ್ ಪೂರ್ಣ; ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ: ಸತೀಶ್ ಜಾರಕಿಹೊಳಿ

Dhrishya News by Dhrishya News
15/07/2026
in ಸುದ್ದಿಗಳು
0
ಕಾರ್ಕಳ–ಕಳಸ ರಸ್ತೆ ಅಭಿವೃದ್ಧಿಗೆ ಟೆಂಡರ್ ಪೂರ್ಣ; ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ: ಸತೀಶ್ ಜಾರಕಿಹೊಳಿ
0
SHARES
17
VIEWS
Share on FacebookShare on Twitter

ಕಾರ್ಕಳ : ಕಾರ್ಕಳ ಎಸ್‌ಕೆ ಬಾರ್ಡರ್‌ ಆಗಿ ಕಳಸ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಲೋಕೋಪಯೋಗಿ ಇಲಾಖಾ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ಅವರು ಜು. 15ರಂದು ತೀರ್ಥಹಳ್ಳಿ ಉಡುಪಿ ರಾಜ್ಯ ಹೆದ್ದಾರಿ 27ರ ಆಗುಂಬೆ ಘಾಟಿ ವೀಕ್ಷಣೆಗೆ ಆಗಮಿಸಿದ್ದ ವೇಳೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾರ್ಕಳದಿಂದ ಮಾಳ ಎಸ್.‌ಕೆ. ಬಾರ್ಡರ್‌, ಮೂಡಿಗೆರೆಯಾಗಿ ಕಳಸಕ್ಕೆ ಸಂಪರ್ಕಿಸುವ ರಸ್ತೆ ದುರಸ್ತಿ ಕುರಿತು ಮಾತನಾಡಿ, ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ದೊರೆಯಲಿದೆ ಎಂದರು.

ಬಿಜೆಪಿ ಶಾಸಕರಿರುವ ಕ್ಷೇತ್ರಕ್ಕೆ ಕಡಿಮೆ ಅನುದಾನ;
ಕಾರ್ಕಳ ತಾಲೂಕು ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸರಕಾರ ಅನುದಾನ ನೀಡುತ್ತಿಲ್ಲ ಎಂಬ ಶಾಸಕರ ಆರೋಪವಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಅನುದಾನವಿಲ್ಲದೇ ಕಾಯಿ ಒಡೆದು‌ ಗುದ್ದಲಿ ಪೂಜೆ ನಡೆದದ್ದೇ ? ಅದೆಲ್ಲಾ ರಾಜಕೀಯಕ್ಕಾಗಿ ಅವರು ಹೇಳುತ್ತಾರೆ. ನಮ್ಮ ಶಾಸಕರಿರುವ ಕಡೆಗೆ ಹೆಚ್ಚಿನ ಅನುದಾನ, ಬಿಜೆಪಿ ಶಾಸಕರಿರುವ ಕಡೆ ಕಡಿಮೆ ಅನುದಾನ ನೀಡಲಾಗಿದೆ. ನಾವು ಶಾಸಕರಿದ್ದಾಗ ನಮಗೂ ಅವರು ಅನುದಾನ ನೀಡಿರಲಿಲ್ಲ ಎಂದರು.

ಮಹಾಮಸ್ತಕಾಭಿಷೇಕಕ್ಕೆ ಅನುದಾನ
2027ರಲ್ಲಿ ನಡೆಯಲಿರುವ ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕದ ಬಗ್ಗೆ ಮಾತನಾಡಿ, ಇದು ಸರಕಾರಿ ಕಾರ್ಯಕ್ರಮ. ಹೀಗಾಗಿ ಸರಕಾರ ಅನುದಾನ ಕೊಟ್ಟೆ ಕೊಡುತ್ತದೆ ಎಂದರು. ಹಿಂದಿನ ಸರಕಾರಗಳು ಈ ಮಹಾಮಸ್ತಕಾಭಿಷೇಕ ನಡೆಸಿದೆ, ನಮ್ಮ ಸರಕಾರವೂ ನಡೆಸುತ್ತದೆ ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷೆ; ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ ಅವರು ಯಾರಾದರೇನೂ ನಮ್ಮವರೇ ಆಗಿದ್ದಾರೆ. ಅದು ಕೂಡ ಕರಾವಳಿ ಭಾಗದವರು ಆಗಿದ್ದಾರೆ. ಅವರಾದರೂ ಒಂದೇ, ನಾವಾದರೂ ಒಂದೇ. ಎಲ್ಲರೂ ಒಟ್ಟು ಸೇರಿ ಕಾರ್ಯನಿರ್ವಹಿಸುತ್ತೇವೆ ಎಂದರು. ಇನ್ನು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುತ್ತಾ ಆದಷ್ಟು ಬೇಗನೇ ಆಗಬೇಕೆಂದು ನಮಗೂ ಇದೆ. ಇನ್ನೇನು ಎರಡು ಮೂರು ದಿನದಲ್ಲಿ ಆಗಬಹುದು ಎಂದು ಹೇಳಿದರು.

ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ಕಾಂಗ್ರೆಸ್ ಮುಖಂಡರಾದ ರಕ್ಷಿತ್‌ ಶಿವರಾಂ, ಉದಯ ಶೆಟ್ಟಿ ಮುನಿಯಾಲು, ಕಾರ್ಕಳ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಶುಭದ ರಾವ್, ಹೆಬ್ರಿ ಬ್ಲಾಕ್ ಅಧ್ಯಕ್ಷ ಗೋಪಿನಾಥ್ ಭಟ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ಉಡುಪಿ ಜಿಲ್ಲಾ ಕಾಂಗ್ರೆಸ್‌ ವಕ್ತಾರ ಬಿಪಿನ್‌ ಚಂದ್ರಪಾಲ್‌ ನಕ್ರೆ, ಪುರಸಭಾ ಮಾಜಿ ಅಧ್ಯಕ್ಷರಾದ ಸುಭಿತ್‌ ಎನ್.ಆರ್.‌, ಪ್ರತಿಮಾ ರಾಣೆ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಭಾನುಭಾಸ್ಕರ್‌, ಮಾಲಿನಿ ರೈ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು. ಬಳಿಕ ಇಲಾಖಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಸಚಿವರು ಸಭೆ ನಡೆಸಿದರು.

Previous Post

ಗಾಣಿಗ ಯುವಸಂಘಟ‌ನೆ ಕೋಟ ಆಶ್ರಯದಲ್ಲಿ ಹಾರಾಡಿ ಮಹಾಬಲ ಗಾಣಿಗ ಪ್ರಶಸ್ತಿ ಪ್ರದಾನ; ಸಾಧಕರಿಗೆ ಸನ್ಮಾನ

Next Post

ಬೈಂದೂರು : ಅಳಿವೆಕೋಡಿಯ ಹೊಂಡಗುಂಡಿ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬೈಂದೂರು : ಅಳಿವೆಕೋಡಿಯ ಹೊಂಡಗುಂಡಿ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ

ಬೈಂದೂರು : ಅಳಿವೆಕೋಡಿಯ ಹೊಂಡಗುಂಡಿ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

11/09/2026
ಬ್ರಹ್ಮಾವರ ಎಸ್‌ಎಂಎಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಉದ್ಘಾಟನೆ

ಬ್ರಹ್ಮಾವರ ಎಸ್‌ಎಂಎಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಉದ್ಘಾಟನೆ

11/09/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

11/09/2026
ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು..!

ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು..!

11/09/2026

Recent News

imunify-bot-check