Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆಯ ಮೇಲೆ ಬಲಪ್ರಯೋಗ ಖಂಡನೀಯ: ಉದಯ ಶೆಟ್ಟಿ ಮುನಿಯಾಲು

Dhrishya News by Dhrishya News
20/07/2026
in ಸುದ್ದಿಗಳು
0
ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆಯ ಮೇಲೆ ಬಲಪ್ರಯೋಗ ಖಂಡನೀಯ: ಉದಯ ಶೆಟ್ಟಿ ಮುನಿಯಾಲು
0
SHARES
62
VIEWS
Share on FacebookShare on Twitter

NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಸಂತ್ರಸ್ತರಾದ ವಿದ್ಯಾರ್ಥಿಗಳು ತಮ್ಮ ಭವಿಷ್ಯಕ್ಕೆ ನ್ಯಾಯ ಕೋರಿ ಕೇಂದ್ರ ಸರ್ಕಾರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ವಿರುದ್ಧ ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಆಡಳಿತವು ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸಿರುವುದು ಅತ್ಯಂತ ಖಂಡನೀಯ ಮತ್ತು ಅಘಾತಕಾರಿ ಬೆಳವಣಿಗೆಯಾಗಿದೆ.

ವಿದ್ಯಾರ್ಥಿಗಳು ದೇಶದ ಭವಿಷ್ಯದ ಆಶಾಕಿರಣಗಳಾಗಿದ್ದಾರೆ. ಅವರು ಯಾವುದೇ ರಾಜಕೀಯ ಅಧಿಕಾರವನ್ನು ಕೇಳುತ್ತಿಲ್ಲ; ತಮ್ಮ ಶಿಕ್ಷಣ, ಪರಿಶ್ರಮ ಮತ್ತು ಭವಿಷ್ಯಕ್ಕೆ ನ್ಯಾಯ ದೊರಕಬೇಕು ಎಂಬ ನ್ಯಾಯಸಮ್ಮತ ಬೇಡಿಕೆಯನ್ನು ಮಾತ್ರ ಮುಂದಿಟ್ಟಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಧ್ವನಿಯನ್ನು ಆಲಿಸುವ ಬದಲು ಬಲಪ್ರಯೋಗಕ್ಕೆ ಮುಂದಾಗಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ.

ಆಡಳಿತವು ಜನರ ಭಾವನೆಗಳಿಗೆ ಸ್ಪಂದಿಸುವ ವಿಶಾಲ ಮನೋಭಾವವನ್ನು ಹೊಂದಿರಬೇಕು. ಆಡಳಿತದ ವೈಫಲ್ಯಗಳ ವಿರುದ್ಧ ಧ್ವನಿ ಎತ್ತುವ ಪ್ರತಿಯೊಬ್ಬರನ್ನೂ ದೇಶದ್ರೋಹಿಗಳೆಂದು ಬಿಂಬಿಸುವ ಪ್ರವೃತ್ತಿ ಅತ್ಯಂತ ಖಂಡನೀಯ. ಮುಗ್ಧ ವಿದ್ಯಾರ್ಥಿಗಳನ್ನು ರಾಜಕೀಯ ಕಾರಣಗಳಿಗಾಗಿ ದೇಶದ್ರೋಹಿಗಳೆಂದು ಕರೆಯುವುದು ದೇಶದ ಸಾಮಾಜಿಕ ಸೌಹಾರ್ದತೆ ಮತ್ತು ಪ್ರಜಾಪ್ರಭುತ್ವದ ದೃಷ್ಟಿಯಿಂದ ಅಪಾಯಕಾರಿ ಬೆಳವಣಿಗೆಯಾಗಿದೆ. ಇಂದಿನ ವಿದ್ಯಾರ್ಥಿಗಳೇ ಮುಂದಿನ ಪ್ರಜೆಗಳು ಎಂಬುದನ್ನು ಕೇಂದ್ರ ಸರ್ಕಾರ ಮರೆಯಬಾರದು.

ಭಾರತವು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ತನ್ನ ಹಕ್ಕುಗಳಿಗಾಗಿ ಶಾಂತಿಯುತವಾಗಿ ಧ್ವನಿ ಎತ್ತುವ ಹಕ್ಕನ್ನು ನೀಡಿದೆ. ಆದ್ದರಿಂದ ಶಾಂತಿಯುತ ಪ್ರತಿಭಟನೆಯ ಮೇಲೆ ಬಲಪ್ರಯೋಗ ನಡೆಸುವುದು ಯಾವುದೇ ರೀತಿಯಲ್ಲೂ ಸಮರ್ಥನೀಯವಲ್ಲ.

ಕೇಂದ್ರ ಸರ್ಕಾರವು ತನ್ನ ಹಠವನ್ನು ಬದಿಗೊತ್ತಿ, ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಿ, ಅವರ ಭವಿಷ್ಯದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ನಾನು ಈ ಮೂಲಕ ಆಗ್ರಹಿಸುತ್ತೇನೆ.

– ಉದಯ ಶೆಟ್ಟಿ ಮುನಿಯಾಲು
ಕಾಂಗ್ರೆಸ್ ನಾಯಕರು
ಕಾರ್ಕಳ ವಿಧಾನಸಭಾ ಕ್ಷೇತ್ರ.

Previous Post

ಉಡುಪಿ ಜಿಲ್ಲಾ ಆಸ್ಪತ್ರೆಯ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ಗೆ ನೂತನ ಫಿಜಿಯೋಥೆರಪಿ ಕಿಟ್‌ ಹಸ್ತಾಂತರ

Next Post

ಲಕ್ಷ್ಮೀವರ ತೀರ್ಥರ 8ನೇ ಆರಾಧನೆ: ಶ್ರೀಕೃಷ್ಣ ಮಠದಲ್ಲಿ ದೇವತಾ ಪ್ರಾರ್ಥನೆ, ತರಕಾರಿ ಮುಹೂರ್ತ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಲಕ್ಷ್ಮೀವರ ತೀರ್ಥರ 8ನೇ ಆರಾಧನೆ: ಶ್ರೀಕೃಷ್ಣ ಮಠದಲ್ಲಿ ದೇವತಾ ಪ್ರಾರ್ಥನೆ, ತರಕಾರಿ ಮುಹೂರ್ತ..!

ಲಕ್ಷ್ಮೀವರ ತೀರ್ಥರ 8ನೇ ಆರಾಧನೆ: ಶ್ರೀಕೃಷ್ಣ ಮಠದಲ್ಲಿ ದೇವತಾ ಪ್ರಾರ್ಥನೆ, ತರಕಾರಿ ಮುಹೂರ್ತ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಂದಾಪುರ: ನಂದಿನಿ ಹಾಲಿನ ಅಂಗಡಿಯ ಮಾಡಿನ ತಗಡು ಒಡೆದು ₹1.10 ಲಕ್ಷ ಕಳವು..!

ಕುಂದಾಪುರ: ನಂದಿನಿ ಹಾಲಿನ ಅಂಗಡಿಯ ಮಾಡಿನ ತಗಡು ಒಡೆದು ₹1.10 ಲಕ್ಷ ಕಳವು..!

08/09/2026
ಕುಂದಾಪುರದಲ್ಲಿ ಮನೆಯ ಗೋಡ್ರೆಜ್‌ನಲ್ಲಿದ್ದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!

ಕುಂದಾಪುರದಲ್ಲಿ ಮನೆಯ ಗೋಡ್ರೆಜ್‌ನಲ್ಲಿದ್ದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!

08/09/2026
ಇಸ್ರೋ ಖಾಸಗೀಕರಣವನ್ನು ತಕ್ಷಣ ನಿಲ್ಲಿಸಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹ

ಇಸ್ರೋ ಖಾಸಗೀಕರಣವನ್ನು ತಕ್ಷಣ ನಿಲ್ಲಿಸಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹ

08/09/2026
ಶಾಲಾ ಮಕ್ಕಳಿಗೆ ಸೈಕಲ್ ಮತ್ತು ಛತ್ರಿ ವಿತರಣಾ ಕಾರ್ಯಕ್ರಮ

ಶಾಲಾ ಮಕ್ಕಳಿಗೆ ಸೈಕಲ್ ಮತ್ತು ಛತ್ರಿ ವಿತರಣಾ ಕಾರ್ಯಕ್ರಮ

08/09/2026

Recent News