Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಪತ್ರಿಕಾ ಭವನದಲ್ಲಿ ಪೊಲೀಸ್ ಇಲಾಖೆ ಸಂವಾದ ಕಾರ್ಯಕ್ರಮ..!

Dhrishya News by Dhrishya News
26/07/2026
in ಸುದ್ದಿಗಳು
0
ಕಾರ್ಕಳ ಪತ್ರಿಕಾ ಭವನದಲ್ಲಿ ಪೊಲೀಸ್ ಇಲಾಖೆ ಸಂವಾದ ಕಾರ್ಯಕ್ರಮ..!
0
SHARES
7
VIEWS
Share on FacebookShare on Twitter

ಕಾರ್ಕಳ : ಸೈಬರ್ ಅಪರಾಧ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಸಾರ್ವಜನಿಕರ ಜಾಗೃತಿ ಅತ್ಯಂತ ಮುಖ್ಯವಾಗಿದೆ. ಎಪಿಕೆ ಫೈಲ್‌ಗಳು, ಅನುಮಾನಾಸ್ಪದ ಲಿಂಕ್‌ಗಳು ಹಾಗೂ ಅಪರಿಚಿತ ಮೊಬೈಲ್‌ ಅಪ್ಲಿಕೇಷನ್ ಯಾವುದೇ ಕಾರಣಕ್ಕೂ ಡೌನ್‌ಲೋಡ್ ಮಾಡಬಾರದು ಎಂದು ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯ ಪಿಎಸ್‌ಐ ಪ್ರಸನ್ನ ಸಲಹೆ ನೀಡಿದರು.

ಪತ್ರಿಕಾ ಭವನದಲ್ಲಿ ನಡೆದ ಪೊಲೀಸ್ ಇಲಾಖೆ ಸಂವಾದ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು.

ಹಿಂದಿನ ಅವಧಿಗೆ ಹೋಲಿಸಿದರೆ ಸೈಬರ್ ಅಪರಾಧ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿವೆ. ದಾಖಲಾದ ಪ್ರಕರಣಗಳಲ್ಲಿ ಸುಮಾರು ಶೇ.80ರಷ್ಟು ಪತ್ತೆ ಕಾರ್ಯ ಯಶಸ್ವಿಯಾಗಿ ನಡೆಸಲಾಗಿದೆ. ಆದರೂ ಸಾರ್ವಜನಿಕರು ಎಚ್ಚರಿಕೆಯಿಂದ ವರ್ತಿಸುವುದು ಅಗತ್ಯ ಅಪರಿಚಿತರು ಕಳುಹಿಸುವ ಎಪಿಕೆ ಫೈಲ್‌ಗಳನ್ನು ಕ್ಲಿಕ್ ಮಾಡುವುದರಿಂದ ಮೊಬೈಲ್‌ನಲ್ಲಿರುವ ವೈಯಕ್ತಿಕ ಮಾಹಿತಿ, ಬ್ಯಾಂಕ್ ಖಾತೆ ವಿವರಗಳು ಹಾಗೂ ಒಟಿಪಿ ಮಾಹಿತಿಗಳು ದುರುಪಯೋಗವಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿ ಅಥವಾ ಮಾಹಿತಿಯನ್ನು ಅದರ ಸತ್ಯಾಸತ್ಯತೆ ಪರಿಶೀಲಿಸದೆ ಹಂಚಿಕೊಳ್ಳಬಾರದು. ಆಧಾರ ರಹಿತ, ಸುಳ್ಳು ಸುದ್ದಿ, ವ್ಯಕ್ತಿಯ ತೇಜೋವಧೆ ಮಾಡುವ ಅಥವಾ ಸಮಾಜದಲ್ಲಿ ಅಶಾಂತಿ ಉಂಟುಮಾಡುವ ರೀತಿಯ ಪೋಸ್ಟ್‌ಗಳು ಮತ್ತು ಸಂದೇಶಗಳನ್ನು ಪ್ರಸಾರ ಮಾಡಿದರೆ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪೋಕ್ಸ್‌ ಪ್ರಕರಣಗಳಲ್ಲಿ ಸಂತ್ರಸ್ತ ಮಕ್ಕಳ ಗುರುತು ಬಹಿರಂಗಪಡಿಸುವುದು ಕಾನೂನುಬಾಹಿರವಾಗಿದೆ. ಸಂತ್ರಸ್ತರ ಹೆಸರು, ವಿಳಾಸ, ಛಾಯಾಚಿತ್ರ ಅಥವಾ ಗುರುತು ಪತ್ತೆಯಾಗುವ ಯಾವುದೇ ಮಾಹಿತಿಯನ್ನು ಪ್ರಕಟಿಸಬಾರದು. ಈ ಕುರಿತು ಸುಪ್ರೀಂ ಕೋರ್ಟ್ ಹಾಗೂ ನ್ಯಾಯಾಲಯಗಳು ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಿದ್ದು, ಮಾಧ್ಯಮಗಳು ಹಾಗೂ ಸಾರ್ವಜನಿಕರು ಅವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಸೈಬ‌ರ್ ವಂಚನೆಗೆ ಒಳಗಾದರೆ ವಿಳಂಬ ಮಾಡದೆ ತಕ್ಷಣ  ಪೊಲೀಸ್‌ ಠಾಣೆಯನ್ನು ಸಂಪರ್ಕಿಸಿ ದೂರು ದಾಖಲಿಸಬೇಕು. ಆರಂಭಿಕ ಹಂತದಲ್ಲಿಯೇ ದೂರು ನೀಡಿದರೆ ಹಣ ಮರುಪಡೆಯುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಪಿಎಸ್‌ಐ ಪ್ರಸನ್ನ ಹೇಳಿದರು.

ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್, ಮೂಡುಬಿದಿರೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನವೀನ್ ಸಾಲ್ಯಾನ್, ಹೆಬ್ರಿ ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಸುಕುಮಾ‌ರ್, ಸಂಘದ ಪದಾಧಿಕಾರಿಗಳಾದ ಉದಯ ಮುಂಡೂರು, ಹರೀಶ್‌ ಸಚ್ಚರಿಪೇಟೆ, ಸತೀಶ್‌ ಶೆಟ್ಟಿ ಉಪಸ್ಥಿತರಿದ್ದರು.

Previous Post

ನಿಟ್ಟೆ ಬ್ರಹ್ಮಾ ಕುಮಾರೀಸ್ ವೃಂದಾವನ ಧ್ಯಾನ ಕೇಂದ್ರದಲ್ಲಿ ಯೋಗ ತಪಸ್ಯ ಹಾಗು ಆಷಾಡದ ಸ್ನೇಹ ಮಿಲನ ಕಾರ್ಯಕ್ರಮ..!

Next Post

ಖ್ಯಾತ ಚಿತ್ರ ನಟ ಹಾಗೂ ಹಾಸ್ಯ ನಟ ಶರಣ್ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಖ್ಯಾತ ಚಿತ್ರ ನಟ ಹಾಗೂ ಹಾಸ್ಯ ನಟ ಶರಣ್ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ..!

ಖ್ಯಾತ ಚಿತ್ರ ನಟ ಹಾಗೂ ಹಾಸ್ಯ ನಟ ಶರಣ್ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಸ್ಕೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ..!

ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಸ್ಕೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ..!

26/07/2026
ನಾಡದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಸರ್ಕಾರದ ಪ್ರೋತ್ಸಾಹ ಅಗತ್ಯ : ಯಶ್ ಪಾಲ್ ಸುವರ್ಣ

ನಾಡದೋಣಿಗಳಿಗೆ ಎಲ್. ಪಿ. ಜಿ ಆಧಾರಿತ ಔಟ್ ಬೋರ್ಡ್ ಇಂಜಿನ್ ಬಳಕೆಗೆ ಸರ್ಕಾರದ ಪ್ರೋತ್ಸಾಹ ಅಗತ್ಯ : ಯಶ್ ಪಾಲ್ ಸುವರ್ಣ

26/07/2026
ಕಟ್ಟಡ ಕಾರ್ಮಿಕರ ಪಿಂಚಣಿ ತಿಂಗಳಿಗೆ 10 ಸಾವಿರ – ಪಿಂಚಣಿದಾರರ ಜಿಲ್ಲಾ ಸಮಾವೇಶದಲ್ಲಿ ಒತ್ತಾಯ

ಕಟ್ಟಡ ಕಾರ್ಮಿಕರ ಪಿಂಚಣಿ ತಿಂಗಳಿಗೆ 10 ಸಾವಿರ – ಪಿಂಚಣಿದಾರರ ಜಿಲ್ಲಾ ಸಮಾವೇಶದಲ್ಲಿ ಒತ್ತಾಯ

26/07/2026
ನಿಟ್ಟೆ ಗ್ರಾಮ ಪಂಚಾಯತ್ ಗೆ ಪ್ರಜಾಪಿತ ಬ್ರಹ್ಮಕುಮಾರಿಸ್ ನ ವರಂದಾವನ ಧ್ಯಾನ ಕೇಂದ್ರದಿಂದ ಕಸ ಸಂಗ್ರಹಣೆ ವಾಹನ ಕೊಡುಗೆ..!

ನಿಟ್ಟೆ ಗ್ರಾಮ ಪಂಚಾಯತ್ ಗೆ ಪ್ರಜಾಪಿತ ಬ್ರಹ್ಮಕುಮಾರಿಸ್ ನ ವರಂದಾವನ ಧ್ಯಾನ ಕೇಂದ್ರದಿಂದ ಕಸ ಸಂಗ್ರಹಣೆ ವಾಹನ ಕೊಡುಗೆ..!

26/07/2026

Recent News