Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ವದ್ದು: ಎಸ್.ಆರ್. ಸತೀಶ್ ಚಂದ್ರ

Dhrishya News by Dhrishya News
28/07/2026
in ಸುದ್ದಿಗಳು
0
ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ವದ್ದು: ಎಸ್.ಆರ್. ಸತೀಶ್ ಚಂದ್ರ
0
SHARES
7
VIEWS
Share on FacebookShare on Twitter

ಶಿರ್ವ, ಜುಲೈ 28: ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ವಿಶೇಷವಾಗಿ ಗ್ರಾಮೀಣ ಆರ್ಥಿಕತೆಯನ್ನು ಸದೃಢಗೊಳಿಸುವಲ್ಲಿ ಸಹಕಾರಿ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಪ್ರಮುಖರಾದ ಶ್ರೀ ಎಸ್.ಆರ್. ಸತೀಶ್ ಚಂದ್ರ ಹೇಳಿದರು.

ಅವರು ಮಂಗಳವಾರ ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆದ ಸಹಕಾರ ಭಾರತಿ ಮೈಸೂರು ವಿಭಾಗದ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಸಹಕಾರಿ ಸಂಸ್ಥೆಗಳು ಹೆಚ್ಚಿನ ವೃತ್ತಿಪರತೆ, ಪಾರದರ್ಶಕತೆ ಹಾಗೂ ತಂತ್ರಜ್ಞಾನದ ಪರಿಣಾಮಕಾರಿ ಬಳಕೆಗೆ ಒತ್ತು ನೀಡಬೇಕಿದ್ದು, ಸದಸ್ಯ ಕೇಂದ್ರಿತ ಸೇವೆಗಳ ಮೂಲಕ ಸಹಕಾರಿ ಚಳವಳಿಯನ್ನು ಮತ್ತಷ್ಟು ಬಲಪಡಿಸಬೇಕೆಂದು ಅವರು ಕರೆ ನೀಡಿದರು. ಸಹಕಾರ ಭಾರತಿ ದೇಶದ ಏಕೈಕ ಸಹಕಾರ ಕ್ಷೇತ್ರದ ಸ್ವಯಂಸೇವಾ ಸಂಘಟನೆಯಾಗಿದ್ದು, ಇನ್ನೆರಡು ವರ್ಷಗಳಲ್ಲಿ ತನ್ನ ಸುವರ್ಣ ಮಹೋತ್ಸವವನ್ನು ಆಚರಿಸಲಿರುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ತಳಮಟ್ಟದಿಂದ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಇನ್ನಷ್ಟು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

ಸಭೆಯ ಅಧ್ಯಕ್ಷತೆಯನ್ನು ಸಹಕಾರ ಭಾರತಿ ರಾಜ್ಯ ಉಪಾಧ್ಯಕ್ಷ ಶ್ರೀ ಸುಬ್ರಹ್ಮಣ್ಯ ಎಡಗೆರೆ ವಹಿಸಿದ್ದರು.
ವೇದಿಕೆಯಲ್ಲಿ ರಾಜ್ಯ ಮಹಿಳಾ ಪ್ರಮುಖ್ ಶ್ರೀಮತಿ ವಿದ್ಯಾಪೈ, ರಾಷ್ಟ್ರೀಯ ಗ್ರಾಹಕ ಭಂಡಾರ ಪ್ರಮುಖ ಶ್ರೀಮತಿ ಭಾರತಿ ಭಟ್, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾದ ಶ್ರೀ ಮಂಜುನಾಥ ಎಸ್ಕೆ ಯವರು ಉಪಸ್ಥಿತರಿದ್ದರು.

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಮಾತನಾಡಿ, ಪ್ರತಿ ಜಿಲ್ಲೆಯಲ್ಲಿ ನಿಗದಿತ ದಿನಾಂಕದಂದು ನಿಯಮಿತ ಜಿಲ್ಲಾ ಕಾರ್ಯಕಾರಿಣಿ ಸಭೆಗಳನ್ನು ನಡೆಸುವ ಜೊತೆಗೆ, ಪ್ರತಿ ತಿಂಗಳು ವಿವಿಧ ತಾಲೂಕುಗಳಲ್ಲಿ ಸಭೆಗಳನ್ನು ಆಯೋಜಿಸುವ ಮೂಲಕ ತಾಲೂಕು ಮಟ್ಟದಲ್ಲಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕೆಂದು ಜಿಲ್ಲಾ ಪ್ರಮುಖರಿಗೆ ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ಮೈಸೂರು ವಿಭಾಗದ ಮೈಸೂರು ನಗರ, ಮೈಸೂರು ಗ್ರಾಮಾಂತರ, ಹಾಸನ, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಮಂಗಳೂರು ಮಹಾನಗರ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಪ್ರಮುಖರು ತಮ್ಮ ಜಿಲ್ಲೆಗಳ ಕಾರ್ಯಚಟುವಟಿಕೆಗಳ ವರದಿಯನ್ನು ಮಂಡಿಸಿದರು.

ರಾಜ್ಯ ಕಾರ್ಯದರ್ಶಿ ಶ್ರೀ ಮಾಧುಸ್ವಾಮಿ ಮಾತನಾಡಿ, ನವೆಂಬರ್‌ನಲ್ಲಿ ಮೈಸೂರು ನಗರದ ಹೊರವಲಯದ ಬನ್ನೂರಿನಲ್ಲಿ ಮೈಸೂರು ವಿಭಾಗದ ಹೈನುಗಾರ ಪ್ರಕೋಷ್ಟದ ಸಮಾವೇಶ ಆಯೋಜಿಸಲಾಗುವುದು ಎಂದು ತಿಳಿಸಿದರು.

ಸಹಕಾರ ಭಾರತಿ ಕೊಡಗು ಜಿಲ್ಲಾಧ್ಯಕ್ಷ ಶ್ರೀ ಅಜಯ್ ಕುಮಾರ್ ರವರು, ಡಿಸೆಂಬರ್‌ನಲ್ಲಿ ಮಡಿಕೇರಿಯಲ್ಲಿ ಮೈಸೂರು ವಿಭಾಗದ ಒಂದು ದಿನದ ಪ್ಯಾಕ್ಸ್ ಪ್ರಕೋಷ್ಟದ ಅಭ್ಯಾಸ ವರ್ಗ ಆಯೋಜಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಬೃಹತ್ ಹೈನುಗಾರರ ಸಮಾವೇಶ, ಮಂಗಳೂರು ಮಹಾನಗರದಲ್ಲಿ ಕ್ರೆಡಿಟ್ ಸಹಕಾರಿ ಸಮಾವೇಶ ಹಾಗೂ ಚಿಕ್ಕಮಗಳೂರಿನಲ್ಲಿ ಜಿಲ್ಲಾ ಮಟ್ಟದ ಪ್ಯಾಕ್ಸ್ ಸಮಾವೇಶ ಆಯೋಜಿಸಲು ನಿರ್ಧರಿಸಲಾಯಿತು.

ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀ ಮಂಜುನಾಥ ಬಿ.ಆರ್. ಮಾತನಾಡಿ, ಹಾಸನ, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಆಗಸ್ಟ್ 31 ರೊಳಗೆ ಪೂರ್ಣ ಪ್ರಮಾಣದ ಜಿಲ್ಲಾ ಸಮಿತಿಗಳನ್ನು ರಚಿಸಿ ಸಂಘಟನೆಯ ಚಟುವಟಿಕೆಗಳಿಗೆ ವೇಗ ನೀಡುವಂತೆ ವಿಭಾಗದ ಪ್ರಮುಖರಿಗೆ ಸೂಚಿಸಿದರು.

ಮಂಡ್ಯದಲ್ಲಿ ಮೈಸೂರು ವಿಭಾಗದ ತಾಲೂಕು ಪ್ರಧಾನ ಕಾರ್ಯದರ್ಶಿಗಳು ಮತ್ತು ಸಂಘಟನಾ ಕಾರ್ಯದರ್ಶಿಗಳಿಗೆ ಒಂದು ದಿನದ ಅಭ್ಯಾಸ ವರ್ಗವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ಉಡುಪಿ ಜಿಲ್ಲಾಧ್ಯಕ್ಷ ಶ್ರೀ ದಿನೇಶ್ ಹೆಗಡೆ ಆತ್ರಾಡಿ ಸ್ವಾಗತಿಸಿದರು. ಮೈಸೂರು ವಿಭಾಗ ಪ್ರಮುಖ ಶ್ರೀ ಮೋಹನ್ ಕುಂಬಳೇಕರ್ ಕಾರ್ಯಕ್ರಮ ನಿರೂಪಿಸಿದರು.
ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಸಹಕಾರ ಭಾರತಿ ಉಡುಪಿ ಜಿಲ್ಲಾ ಕೋಶಾಧ್ಯಕ್ಷ ಶ್ರೀ ಪ್ರಸಾದ್ ಶೆಟ್ಟಿ ವಂದಿಸಿದರು.
ಇದೇ ಸಂದರ್ಭದಲ್ಲಿ ದೇಶದ ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಪ್ರಥಮ ಬಾರಿಗೆ ಸಂಸ್ಥೆಗೆ ಆಗಮಿಸುತ್ತಿರುವ ಶ್ರೀ ಎಸ್ ಆರ್ ಸತೀಶ್ ಚಂದ್ರರವರಿಗೆ ಶಿರ್ವ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಪರವಾಗಿ ಸನ್ಮಾನಿಸಿ, ಗೌರವಿಸಲಾಯಿತು.

ಸಭೆಯಲ್ಲಿ ಮೈಸೂರು ನಗರ, ಮೈಸೂರು ಗ್ರಾಮಾಂತರ, ಹಾಸನ, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಮಂಗಳೂರು ಮಹಾನಗರ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಂದ ಆಗಮಿಸಿದ್ದ ಸುಮಾರು 40 ಮಂದಿ ರಾಷ್ಟ್ರೀಯ, ರಾಜ್ಯಮಟ್ಟದ ಜವಾಬ್ದಾರಿಯುಳ್ಳ ಪ್ರಮುಖರು ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಭಾಗವಹಿಸಿ ಸಂಘಟನೆಯ ಮುಂದಿನ ಕಾರ್ಯಯೋಜನೆಗಳ ಕುರಿತು ಸಮಗ್ರ ಚರ್ಚೆ ನಡೆಸಿದರು.

Previous Post

ಅವೋರ್ ಎಲೆಕ್ಟ್ರಿಕ್ ತನ್ನ ಮೊದಲ ಎಲೆಕ್ಟ್ರಿಕ್ ಮೋಟಾರ್‌ ಸೈಕಲ್ ಇಎಕ್ಸ್ ಅನ್ನು ಬಿಡುಗಡೆ ಮಾಡಿದೆ; ಆರಂಭಿಕ ಬೆಲೆ ರೂ. 1,24,999

Next Post

ಲೋಕಹಿತಕ್ಕೆ ಮಿಡಿದ ಕುಂತಿಯ ಧರ್ಮ ಪ್ರಜ್ಞೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಲೋಕಹಿತಕ್ಕೆ ಮಿಡಿದ ಕುಂತಿಯ ಧರ್ಮ ಪ್ರಜ್ಞೆ

ಲೋಕಹಿತಕ್ಕೆ ಮಿಡಿದ ಕುಂತಿಯ ಧರ್ಮ ಪ್ರಜ್ಞೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

13/09/2026
ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಚಿತ ನೇತ್ರ ಶಿಬಿರ ಉದ್ಘಾಟನೆ

ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಚಿತ ನೇತ್ರ ಶಿಬಿರ ಉದ್ಘಾಟನೆ

13/09/2026
ಮಾಹೆಯಲ್ಲಿ‘ಮೇಘ ಮಲ್ಹಾರ್‌ 2026’ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ ಫಲಿತಾಂಶ ಪ್ರಕಟ

ಮಾಹೆಯಲ್ಲಿ‘ಮೇಘ ಮಲ್ಹಾರ್‌ 2026’ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ ಫಲಿತಾಂಶ ಪ್ರಕಟ

13/09/2026
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅ.4ರಂದು ಕೋಟಿ ತುಳಸಿ ಅರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅ.4ರಂದು ಕೋಟಿ ತುಳಸಿ ಅರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ

12/09/2026

Recent News

imunify-bot-check