Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಲೋಕಹಿತಕ್ಕೆ ಮಿಡಿದ ಕುಂತಿಯ ಧರ್ಮ ಪ್ರಜ್ಞೆ

Dhrishya News by Dhrishya News
29/07/2026
in ಸುದ್ದಿಗಳು
0
ಲೋಕಹಿತಕ್ಕೆ ಮಿಡಿದ ಕುಂತಿಯ ಧರ್ಮ ಪ್ರಜ್ಞೆ
0
SHARES
14
VIEWS
Share on FacebookShare on Twitter

ಕಾರ್ಕಳ:  ಏಕಚಕ್ರಾ ನಗರದಲ್ಲಿ ಕುಂತಿ ತನ್ನ ಐವರು ಮಕ್ಕಳೊಂದಿಗೆ ಒಂದು ಬ್ರಾಹ್ಮಣರ ಮನೆಯಲ್ಲಿ ವಾಸವಿದ್ದ ಸಂದರ್ಭ. ಆ ಊರಿನಲ್ಲಿರುವ ಬಕಾಸುರನೆಂಬ ರಾಕ್ಷಸನಿಗೆ ಆಹಾರವಾಗುವುದಕ್ಕಾಗಿ ಮನೆಯಲ್ಲಿ ಪೈಪೋಟಿ ಮತ್ತು ರೋದನ ನಡೆಯುತ್ತಿರುವುದನ್ನು ಗಮನಿಸಿದ ಕುಂತಿ ಅವರ ಕೂಗು ಅರಣ್ಯರೋದನವಾಗದಂತೆ ಆಕೆ ಅಲ್ಲಿ ನಿರ್ವಹಿಸಿದ ಪಾತ್ರ ನಿರ್ಣಾಯಕವಾಗಿತ್ತು. ಕುಂತಿ ಅವರನ್ನು ಯಾರನ್ನೂ ಕಳಿಸದೆ ಆಕೆ ಅವರಿಗೆ ಅಭಯ ನೀಡಿ ತನ್ನ ಮಗ ಭೀಮನನ್ನು ಕಳಿಸುತ್ತಾಳೆ. ಭೀಮನಿಂದ ರಾಕ್ಷಸ ಬಕಾಸುರನ ವಧೆಯಾಗಿ ಊರಿಗೆ ಕ್ಷೇಮವಾಗುತ್ತದೆ. ಇಲ್ಲಿ ಕುಂತಿ ತನ್ನ ಮಕ್ಕಳ ಬಗ್ಗೆ ಮಾತ್ರ ಯೋಚಿಸದೆ ಆಕೆಯ ಸೂಕ್ಷ್ಮತೆ ಮತ್ತು ಧರ್ಮಪ್ರಜ್ಞೆ ಲೋಕಹಿತಕ್ಕೂ ವಿಸ್ತೃತವಾಯಿತು ಎಂಬುದಾಗಿ ಡಾ. ವಿನಾಯಕ ಭಟ್ ಗಾಳಿಮನೆಯವರು ಇಲ್ಲಿ ಮಾತನಾಡುತ್ತಾ ತಿಳಿಸಿದರು.
ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಇವುಗಳ ಸಹಭಾಗಿತ್ವದಲ್ಲಿ ೨೦೨೬ರ ವರ್ಷ ಪೂರ್ತಿ ಪ್ರತೀ ತಿಂಗಳು ನಡೆಯುತ್ತಿರುವ ಮಹಾಭಾರತ ಭಾವದೀಪ ಎಂಬ ಉಪನ್ಯಾಸ ಮಾಲೆಯ ಸಪ್ತಮ ಸೋಪಾನದಲ್ಲಿ ಅವರು ‘ಕೃಷ್ಣ ಮತ್ತು ಕೃಷ್ಙೆ’ ಎಂಬ ಕುರಿತಾಗಿ ಜುಲೈ ೨೫ರಂದು ಕಾರ್ಕಳದ ಪ್ರಕಾಶ್ ಹೋಟೆಲ್ ಇದರ ‘ಸಂಭ್ರಮ’ ಸಭಾಂಗಣದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯಜ್ಞದಿಂದಲೇ ಹುಟ್ಟಿದ ದ್ರೌಪದಿಯ ಬದುಕೆಲ್ಲ ಅಗ್ನಿಮಯ. ಕೃಷ್ಣ ವರ್ಣದವಳಾಗಿ ಮತ್ತು ಶ್ರೀಕೃಷ್ಣ ಅವಳನ್ನು ರಕ್ಷಿಸಿದ್ದರಿಂದಲೂ ಆಕೆ ಕೃಷ್ಣೆ ಎನಿಸಿಕೊಂಡವಳು. ದ್ರೌಪದೀ ಸ್ವಯಂವರದ ಸನ್ನಿವೇಶದಲ್ಲಿ ಕೃಷ್ಣ ಕೃಷ್ಣೆಯರ ಹಾಗೂ ಪಾಂಡವರ ಸಮಾಗಮವಾಗುತ್ತದೆ. ಅದಕ್ಕೂ ಮಿಗಿಲಾಗಿ ಕೌರವರ ಲೆಕ್ಕದಲ್ಲಿ ಕೊಲ್ಲಲ್ಪಟ್ಟಂತಹ ಪಾಂಡವರು ಸಾಯದೆ ಬದುಕಿ ಬಂದಿದ್ದಾರೆ ಅನ್ನುವುದನ್ನು ತಿಳಿದ ಧೃತರಾಷ್ಟ್ರ ಕೌರವರಿಗೆ ಮುಂದೇನು ಅನ್ನುವ ಮಹಾಭಾರತದ ಸನ್ನಿವೇಶ ತೆರೆದುಕೊಳ್ಳುತ್ತದೆ ಎಂದರು.
ಅ.ಭಾ.ಸಾ.ಪ.ದ ಗೌರವಾಧ್ಯಕ್ಷರಾದ ನಿತ್ಯಾನಂದ ಪೈ, ಅಧ್ಯಕ್ಷರಾದ ಮಿತ್ರಪ್ರಭಾ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೈ. ಅನಂತಪದ್ಮನಾಭ ಭಟ್ ಪ್ರಾರ್ಥಿಸಿದರು. ಶ್ರೀಮತಿ ಸುಲೋಚನಾ ಬಿ.ವಿ. ಕಾರ್ಯಕ್ರಮ ನಿರ್ವಹಿಸಿದರು. ಸದಾನಂದ ನಾರಾವಿ ಸ್ವಾಗತಿಸಿ ಜಗದೀಶ ಗೋಖಲೆ ವಂದಿಸಿದರು.

Previous Post

ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ವದ್ದು: ಎಸ್.ಆರ್. ಸತೀಶ್ ಚಂದ್ರ

Next Post

ಬಿಜೆಪಿಯ ದ್ವೇಷ ಕಾರಣಕ್ಕೆ ವಿದ್ಯಾರ್ಥಿಗಳೇ ತಕ್ಕ ಪಾಠ ಕಲಿಸಲಿದ್ದಾರೆ: ಪ್ರದೀಪ್ ಬೇಲಾಡಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಿಜೆಪಿಯ ದ್ವೇಷ ಕಾರಣಕ್ಕೆ ವಿದ್ಯಾರ್ಥಿಗಳೇ ತಕ್ಕ ಪಾಠ ಕಲಿಸಲಿದ್ದಾರೆ: ಪ್ರದೀಪ್ ಬೇಲಾಡಿ

ಬಿಜೆಪಿಯ ದ್ವೇಷ ಕಾರಣಕ್ಕೆ ವಿದ್ಯಾರ್ಥಿಗಳೇ ತಕ್ಕ ಪಾಠ ಕಲಿಸಲಿದ್ದಾರೆ: ಪ್ರದೀಪ್ ಬೇಲಾಡಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

ಮಕ್ಕಳ ಕ್ಯಾನ್ಸರ್ ಜಾಗೃತಿ ಅಭಿಯಾನ: ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಭಾಗಿತ್ವದಲ್ಲಿ ಸುವರ್ಣ ಕಾಂತಿಯಲ್ಲಿ ಮಿಂಚಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

13/09/2026
ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಚಿತ ನೇತ್ರ ಶಿಬಿರ ಉದ್ಘಾಟನೆ

ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಚಿತ ನೇತ್ರ ಶಿಬಿರ ಉದ್ಘಾಟನೆ

13/09/2026
ಮಾಹೆಯಲ್ಲಿ‘ಮೇಘ ಮಲ್ಹಾರ್‌ 2026’ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ ಫಲಿತಾಂಶ ಪ್ರಕಟ

ಮಾಹೆಯಲ್ಲಿ‘ಮೇಘ ಮಲ್ಹಾರ್‌ 2026’ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ ಫಲಿತಾಂಶ ಪ್ರಕಟ

13/09/2026
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅ.4ರಂದು ಕೋಟಿ ತುಳಸಿ ಅರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಅ.4ರಂದು ಕೋಟಿ ತುಳಸಿ ಅರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ

12/09/2026

Recent News

imunify-bot-check