Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

Dhrishya News by Dhrishya News
01/08/2026
in ಸುದ್ದಿಗಳು
0
ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ
0
SHARES
32
VIEWS
Share on FacebookShare on Twitter

ಉಡುಪಿ:ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಮೂಲ್ಯ ಖಾರ್ವಿ (ಶ್ರೀಮತಿ ಆಶಾ ಮತ್ತು ಶ್ರೀ ಮೋಹನ್ ಖಾರ್ವಿ ಇವರ ಪುತ್ರಿ) ಇವಳಿಗೆ ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ, ಮಹಾದಾನಿಗಳಾದ ಮಂಗಳೂರಿನ ಪಿ. ಗೋಕುಲನಾಥ ಪ್ರಭು ಅವರು ತಮ್ಮ ಸಹಪಾಠಿ ಹಾಗೂ ಸ್ನೇಹಿತರೂ ಆಗಿದ್ದ ವಿ. ನಂದನ ಕಾಮತ್ ಇವರ ಸ್ಮರಣೆಯಲ್ಲಿ ರೂ.7 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ನಂದನ’ 31 ಜುಲೈ ರಂದು ಉದ್ಘಾಟನೆಗೊಂಡಿತು. ಜ್ಯೋತಿ ಬೆಳಗಿಸಿದ ಗೋಕುಲನಾಥ ಪ್ರಭು ಅವರು ಯಾವ ಆಡಂಬರವಿಲ್ಲದೆ ನಾವು ಕೊಡುವ ಹಣದ ಒಂದು ಪೈಸೆಯೂ ಪೋಲಾಗದಂತೆ ಫಲಾನುಭವಿಗೆ ತಲುಪಿಸುವ ಕಲಾರಂಗದ ಸಾಮಾಜಿಕ ಸೇವೆಗೆ ಮನ ಸೋತಿದ್ದೇನೆ. ನನ್ನ ಆತ್ಮೀಯ ಸ್ನೇಹಿತರಾಗಿದ್ದ ನಂದನ ಕಾಮತರ ಸ್ಮರಣೆಯಲ್ಲಿ ಅರ್ಹ ವಿದ್ಯಾರ್ಥಿನಿಗೆ ಮನೆ ಕಟ್ಟಿಸಿ ಕೊಡುವ ಅವಕಾಶ ಕಲ್ಪಿಸಿದ ಸಂಸ್ಥೆಗೆ ನಾನು ಕೃತಜ್ಞನಾಗಿದ್ದೇನೆಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆಯವರು ಯಕ್ಷಗಾನ ಕಲಾರಂಗ ಯಾರ ಮುಲಾಜಿಗೂ ಒಳಗಾಗದೆ ವಿದ್ಯಾರ್ಥಿಗಳ ಆಯ್ಕೆಯನ್ನು ಮಾಡುತ್ತದೆ. ಸಮಾಜಪರ ಕೆಲಸ ಮಾಡುತ್ತಿರುವ ಇಂತಹ ಇನ್ನೊಂದು ಸಂಸ್ಥೆಯನ್ನು ನಾನು ಈವರೆಗೆ ಕಂಡಿಲ್ಲ. ಮನೆ ಹಸ್ತಾಂತರ ಕಾರ್ಯಕ್ರಮಕ್ಕೆ ಬಂದಾಗ ಪುಣ್ಯ ಕ್ಷೇತ್ರ ದರ್ಶನ ಮಾಡಿದ ಅನುಭವಾಗುತ್ತದೆ ಎಂದರು. ನಿವೃತ್ತ ಪ್ರಾಚಾರ್ಯ ನಾರಾಯಣ ಜೋಯಿಸರು ಯಕ್ಷಗಾನ ಕಲಾರಂಗದ ಕಾರ್ಯಕ್ರಮಕ್ಕೆ ಸಂತಸ ವ್ಯಕ್ತಪಡಿಸಿ, ದಾನಿಗಳು ನೀಡಿದ ಈ ಕೊಡುಗೆಗೆ ಕಲಿಕೆಯಲ್ಲಿ ಪ್ರಗತಿ ಸಾಧಿಸುವ ಹೊಣೆಗಾರಿಕೆ ನಿನ್ನ ಮೇಲಿದೆ ಎಂದು ಅಮೂಲ್ಯಳಿಗೆ ಕಿವಿಮಾತು ಹೇಳಿದರು. ಅಭ್ಯಾಗತರಾದ ಮಂಗಳೂರಿನ ಖ್ಯಾತ ವೈದ್ಯ ಡಾ. ಜೆ. ಎನ್. ಭಟ್ ಇದೊಂದು ಅನನ್ಯ ಸಂಸ್ಥೆ. ಸಮರ್ಥ ನಾಯಕತ್ವ, ಅರ್ಪಣಾ ಮನೋಭಾವದ ಕಾರ್ಯಕರ್ತರೆ ಸಂಸ್ಥೆಯ ಆಸ್ತಿ ಎಂದು ಹರ್ಷ ವ್ಯಕ್ತಪಡಿಸಿದರು. ನಂದನ ಕಾಮತರ ಪುತ್ರಿ ಲಕ್ಷೀ ಕಾಮತ್ ತನ್ನ ತಂದೆ ಮತ್ತು ಗೋಕುಲನಾಥ ಪ್ರಭುಗಳ ಅನ್ಯೋನ್ಯ ಸ್ನೇಹ ಸ್ಮರಿಸಿಕೊಂಡು ಪ್ರಭುಗಳ ಉದಾರ ಕೊಡುಗೆಗೆ ಕೃತಜ್ಞತೆ ಸೂಚಿಸಿ ಕಲಾರಂಗದ ಸತ್ಕಾರ್ಯದಲ್ಲಿ ನಾವೂ ಭಾಗಿಯಾಗುತ್ತೇವೆ ಎಂದು ಹೇಳಿದರು. ನಿವೇದಿತಾ ಜಿ.ಪ್ರಭು, ಶೋಭಾ ನಂದನ ಕಾಮತ್,ಗುರುದತ್, ಜನಾರ್ದನ ಭಟ್, ರೇಷ್ಮಾ ಭಟ್, ಶ್ವೇತಾ ಕಾಮತ್ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಉಪಸ್ಥಿತರಿದ್ದರು. ಸಂಸ್ಥೆಯ ಕೋಶಾಧಿಕಾರಿ ಕೆ. ಸದಾಶಿವ ರಾವ್, ಸದಸ್ಯರುಗಳಾದ ಯು. ವಿಶ್ವನಾಥ ಶೆಣೈ, ಯು. ಅನಂತರಾಜ ಉಪಾಧ್ಯ, ವಿಷ್ಣುಮೂರ್ತಿ ಭಟ್, ಮರ್ಣೆ ಉಮೇಶ ಭಟ್, ಜಯರಾಮ ಪಡಿಯಾರ್, ಆರ್. ವಸಂತ ಭಾಗವಹಿಸಿದ್ದರು. ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಇದು ಗೋಕುಲನಾಥ ಪ್ರಭುಗಳು ಪ್ರಾಯೋಜಿಸಿದ ಮೂರನೆಯ ಮನೆಯಾಗಿದೆ.

Previous Post

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

Next Post

ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check