ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಆಗಸ್ಟ್ 4, 2026 (ಮಂಗಳವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶ ಹೊರಡಿಸಿದ್ದಾರೆ.







