ಉಚ್ಚಿಲ: ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದ ವತಿಯಿಂದ ಆಷಾಢ ಮಾಸದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬರುತ್ತಿರುವ ಶ್ರೀ ಮಹಾಲಕ್ಷ್ಮೀ ಅಮ್ಮನವರಿಗೆ ಅತ್ಯಂತ ಪ್ರಿಯವಾದ ವಿಶೇಷ ತುಪ್ಪದ ಅಪ್ಪ ಸೇವೆಯನ್ನು ಇದೇ ಆಗಸ್ಟ್ 10ರಂದು ಸೋಮವಾರ ಅಪರಾಹ್ನ 3.30 ರಿಂದ ಶ್ರೀ ಕ್ಷೇತ್ರದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿಸಲಾಗುವುದು.
ಈ ವಿಶೇಷ ಸೇವೆಯು ಶ್ರೀ ಕ್ಷೇತ್ರದ ಪರಂಪರೆಯ ಧಾರ್ಮಿಕ ಆಚರಣೆಯ ಭಾಗವಾಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ಕ್ಷೇತ್ರದ ವತಿಯಿಂದ ವಿನಂತಿಸಲಾಗಿದೆ.
ವಿಶೇಷ ತುಪ್ಪದ ಅಪ್ಪ ಸೇವೆಯನ್ನು ನೀಡಲು ಇಚ್ಛಿಸುವ ಭಕ್ತಾದಿಗಳು ಶ್ರೀ ಕ್ಷೇತ್ರದ ಸೇವಾ ಕೌಂಟರ್‌ನಲ್ಲಿ ಸೇವಾ ರಶೀದಿಯನ್ನು ಪಡೆದುಕೊಳ್ಳಬಹುದು ಎಂದು ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.
ಸ್ಥಳ: ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ
ದಿನಾಂಕ: 10.08.2026, ಸೋಮವಾರ
ಸಮಯ: ಅಪರಾಹ್ನ 3.30ರಿಂದ







