Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ, ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ಸ್ಮರಣಾರ್ಥ ಶೃದ್ಧಾಂಜಲಿ ಸಭೆ

Dhrishya News by Dhrishya News
08/08/2026
in ಸುದ್ದಿಗಳು
0
‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು
0
SHARES
21
VIEWS
Share on FacebookShare on Twitter

ಉಡುಪಿ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಅತ್ಯಂತ ಕಡಿಮೆ ಅವಧಿಯಲ್ಲಿ ಸಕ್ರಿಯವಾಗಿ ಜಿಲ್ಲೆಯಾದ್ಯಂತ ಸಂಘಟನೆಯನ್ನು ಬಲಪಡಿಸಿದ ಶ್ರಮಜೀವಿ ಲಕ್ಷ್ಮೀ ಮಂಜುನಾಥ್ ಕೊಳ ಅವರ ಹಠಾತ್ ಅಗಲುವಿಕೆ ನಮಗೆಲ್ಲರಿಗೂ ತೀವ್ರ ಆಘಾತ ತಂದಿದೆ. ಉಡುಪಿ ನಗರಸಭೆಯ ಉಪಾಧ್ಯಕ್ಷೆಯಾಗಿ ಸಾರ್ಥಕ ಸೇವೆ ಸಲ್ಲಿಸಿರುವ ಅವರು ಪಕ್ಷದ ಪ್ರತಿಯೊಂದು ಚಟುವಟಿಕೆಗಳಲ್ಲಿಯೂ ಉತ್ಸಾಹದಿಂದ ಭಾಗವಹಿಸುತ್ತಿದ್ದರು. ಅವರ ಕರ್ತವ್ಯ ನಿಷ್ಠೆ ಮತ್ತು ಕಾರ್ಯ ಬದ್ಧತೆ ಅನುಕರಣೀಯ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ. ಕುಟುಂಬಕ್ಕೆ ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.

ಅವರು ಉಡುಪಿ ಜಿಲ್ಲಾ ಬಿಜೆಪಿ ಹಾಗೂ ಉಡುಪಿ ನಗರ ಬಿಜೆಪಿ ವತಿಯಿಂದ ಲಕ್ಷ್ಮೀ ಮಂಜುನಾಥ್ ಕೊಳ ಸ್ಮರಣಾರ್ಥ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಶೃದ್ಧಾಂಜಲಿ ಸಭೆಯ ಅಧ್ಯಕ್ಷತೆ ವಹಿಸಿ ನುಡಿ ನಮನ ಸಲ್ಲಿಸಿದರು.

ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಮಾತನಾಡಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಹಾಗೂ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕ್ಷೀ ಮಂಜುನಾಥ್ ಕೊಳ ಅವರ ಅಕಾಲಿಕ ಅಗಲುವಿಕೆ ಪಕ್ಷ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವೆನಿಸಿದೆ. ಅವರ ನಿಸ್ವಾರ್ಥ ಜನಸೇವೆ ಮತ್ತು ಸಂಘಟನಾ ಬದ್ಧತೆ ಪ್ರತಿಯೊಬ್ಬ ಕಾರ್ಯಕರ್ತರಿಗೂ ಆದರ್ಶಪ್ರಾಯ ಎಂದರು.

ಜನಸೇವೆಯೇ ಅವರ ಮೂಲ ಮಂತ್ರವಾಗಿತ್ತು:

ಲಕ್ಷ್ಮೀ ಮಂಜುನಾಥ್ ಕೊಳ ಅವರ ಕೊಡುಗೆಯನ್ನು ಸ್ಮರಿಸಿದ ಶಾಸಕರು, ‘ಅವರು ಕೇವಲ ರಾಜಕೀಯ ಕ್ಷೇತ್ರಕ್ಕಷ್ಟೇ ಸೀಮಿತವಾಗಿರಲಿಲ್ಲ. ಮೀನುಗಾರರ ಸಹಕಾರಿ ಸಂಘದ ಜೊತೆಗೆ ಸಾಮಾಜಿಕ ಹಾಗೂ ಧಾರ್ಮಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯ ಪಾತ್ರ ವಹಿಸಿ, ಸನಾತನ ಸಂಸ್ಕೃತಿಯ ವಿಚಾರಗಳನ್ನು ಪಸರಿಸುವಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು. ನಗರಸಭಾ ಸದಸ್ಯೆಯಾಗಿ ಹಾಗೂ ಉಪಾಧ್ಯಕ್ಷೆಯಾಗಿ ತಳಮಟ್ಟದ ಜನರ ಸಂಕಷ್ಟಗಳಿಗೆ ತಕ್ಷಣವೇ ಸ್ಪಂದಿಸುತ್ತಿದ್ದ ಶ್ರೇಷ್ಠ ಜನಸೇವಕಿಯಾಗಿದ್ದರು. ಕಡಿಮೆ ಅವಧಿಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾವನ್ನು ಸಂಘಟಿಸಿ, ಎಲ್ಲರನ್ನೂ ಜೊತೆಗೂಡಿಸಿಕೊಂಡ ಅವರ ಕಾರ್ಯವೈಖರಿ ಸದಾ ಸ್ಮರಣೀಯ ಎಂದರು.

ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ನುಡಿ ನಮನ ಸಲ್ಲಿಸಿ, ಸರಳ ಸಜ್ಜನಿಕೆಯ, ಕ್ರಿಯಾಶೀಲ ವ್ಯಕ್ತಿತ್ವದ ಲಕ್ಷ್ಮೀ ಮಂಜುನಾಥ್ ಕೊಳ ಅವರು ಸದಾ ನಗುಮೊಗದಿಂದ ಓಡಾಡುತ್ತಾ ಪಕ್ಷಕ್ಕೊಂದು ಆಧಾರವಾಗಿದ್ದರು. ಪಕ್ಷ ಸಂಘಟನೆಯ ಜೊತೆಗೆ ಜನಸೇವೆಯಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದರು. ಅವರ ಅಕಾಲಿಕ ನಿಧನ ಎಲ್ಲರನ್ನೂ ದುಃಖತಪ್ತರನ್ನಾಗಿಸಿದೆ. ಅಗಲಿದ ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಕುಟುಂಬಕ್ಕೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದರು.

ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ದಿನಕರ ಶೆಟ್ಟಿ ಹೆರ್ಗ, ಮಾಜಿ ನಗರಸಭಾ ಸದಸ್ಯರಾದ ಗಿರೀಶ್ ಎಮ್. ಅಂಚನ್, ವಿಜಯ ಕೊಡವೂರು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ನುಡಿ ನಮನ ಸಲ್ಲಿಸಿದರು.

ಮೌನ ಪ್ರಾರ್ಥನೆಯ ಮೂಲಕ ಅಗಲಿದ ದಿವ್ಯಾತ್ಮಕ್ಕೆ ಚಿರ ಶಾಂತಿ ಕೋರಲಾಯಿತು. ನೂರಾರು ಮಂದಿ ಲಕ್ಷ್ಮೀ ಮಂಜುನಾಥ್ ಕೊಳ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಭಾವಪೂರ್ಣ ಶೃದ್ಧಾಂಜಲಿ ಅರ್ಪಿಸಿದರು.

ಈ ಸಂದರ್ಭದಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು, ಜ್ಯೋತಿ ಉದಯ ಪೂಜಾರಿ, ನಳಿನಿ ಪ್ರದೀಪ್ ರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಷಾ ಪ್ರಕಾಶ್ ಶೆಟ್ಟಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಪ್ರಮುಖರಾದ ರವಿ ಅಮೀನ್, ಸತ್ಯಾನಂದ ನಾಯಕ್, ಶ್ರೀನಿಧಿ ಹೆಗ್ಡೆ, ಶಿವಕುಮಾರ್ ಅಂಬಲಪಾಡಿ, ಪ್ರಿಯದರ್ಶಿನಿ ದೇವಾಡಿಗ ಸಹಿತ ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಪದಾಧಿಕಾರಿಗಳು, ಮಾಜಿ ನಗರಸಭಾ ಸದಸ್ಯರು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ವಿಜಯ ಭಟ್ ಕಡೆಕಾರ್ ಪ್ರಾರ್ಥನೆ ಹಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Previous Post

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

‘ಲಕ್ಷೀ ಮಂಜುನಾಥ್ ಕೊಳ ಅವರ ಕರ್ತವ್ಯ ನಿಷ್ಠೆ, ಕಾರ್ಯ ಬದ್ಧತೆ ಅನುಕರಣೀಯ’: ಕುತ್ಯಾರು

08/08/2026
ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಆಗಸ್ಟ್ 10ರಂದು ವಿಶೇಷ ತುಪ್ಪದ ಅಪ್ಪ ಸೇವೆ

08/08/2026
ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ. ಪ್ರಮೋದ್ ಮಧ್ವರಾಜ್ ಅವರಿಂದ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

08/08/2026
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026

Recent News