Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Dhrishya News by Dhrishya News
13/08/2026
in ಸುದ್ದಿಗಳು
0
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Mr Puneet Chandok, President, Microsoft India and South Asia; Mr. Venkat Kirshnan, Executive Director, Microsoft India, Mr Raj Kamal Singhal, CEO, Hitachi Systems India; Vice Chancellor Dr Sharath Rao and Dr H. S. Ballal, Pro Chancellor, MAHE, inaugurating the AI Lab at TAPMI Manipal.

0
SHARES
2
VIEWS
Share on FacebookShare on Twitter

ಮಣಿಪಾಲ, ಆಗಸ್ಟ್ 13, 2026: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯು, ಕೃತಕ ಬುದ್ಧಿಮತ್ತೆ (ಎಐ) ಮತ್ತು ಡಿಜಿಟಲ್ ನಾವೀನ್ಯತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮೈಕ್ರೋಸಾಫ್ಟ್ ಜತೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ. ಇದರ ಭಾಗವಾಗಿ ಮಾಹೆಯ ಐದು ಸಂಸ್ಥೆಗಳಲ್ಲಿ ಅತ್ಯಾಧುನಿಕ ‘ಮೈಕ್ರೋಸಾಫ್ಟ್ ಲ್ಯಾಬ್’ಗಳು ತಲೆಎತ್ತಲಿದ್ದು, ವಿದ್ಯಾರ್ಥಿಗಳು ಹಾಗೂ ಬೋಧಕರಿಗೆ ಹೊಚ್ಚಹೊಸ ತಂತ್ರಜ್ಞಾನಗಳ ಪ್ರಾಯೋಗಿಕ ಕಲಿಕೆ, ಆವಿಷ್ಕಾರ ಮತ್ತು ಉದ್ಯಮ ವಲಯದೊಂದಿಗಿನ ಒಡನಾಟಕ್ಕೆ ವಿಪುಲ ಅವಕಾಶಗಳನ್ನು ಕಲ್ಪಿಸಿಕೊಡಲಿವೆ.
ಈ ಮೈಕ್ರೋಸಾಫ್ಟ್ ಲ್ಯಾಬ್‌ಗಳನ್ನು ಮಣಿಪಾಲದ ಟಿ. ಎo. ಪೈ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್ (ಟ್ಯಾಪ್ಮಿ), ಬೆಂಗಳೂರಿನ ಟಿ. ಎo. ಪೈ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್ (ಟ್ಯಾಪ್ಮಿ), ಮಣಿಪಾಲದ ಮಣಿಪಾಲ್ ಸ್ಕೂಲ್ ಆಫ್ ಕಾಮರ್ಸ್ ಅಂಡ್ ಎಕನಾಮಿಕ್ಸ್ (ಎಂಎಸ್‌ಸಿಇ), ಬೆಂಗಳೂರಿನ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಕಾಮರ್ಸ್, ಫೈನಾನ್ಸ್ ಅಂಡ್ ಎಕನಾಮಿಕ್ಸ್ (ಎಂಐಸಿಎಫ್‌ಇ) ಮತ್ತು ಬೆಂಗಳೂರಿನ ಮಣಿಪಾಲ್ ಲಾ ಸ್ಕೂಲ್ (ಎಂಎಲ್‌ಎಸ್‌) ಕ್ಯಾಂಪಸ್‌ಗಳಲ್ಲಿ ಸ್ಥಾಪಿಸಲಾಗುವುದು.
ಈ ನೂತನ ಲ್ಯಾಬ್‌ಗಳ ಮೂಲಕ ಎಐ ಮತ್ತು ಇತರ ಸುಧಾರಿತ ಡಿಜಿಟಲ್ ತಂತ್ರಜ್ಞಾನಗಳು ವಿದ್ಯಾರ್ಥಿಗಳ ಕೈಗೆಟುಕಲಿವೆ. ಇದು ಪ್ರಾಯೋಗಿಕ ಕಲಿಕೆ, ಸಂಶೋಧನೆ ಮತ್ತು ಹೊಸ ಆವಿಷ್ಕಾರಗಳಿಗೆ ಮೀಸಲಾದ ವೇದಿಕೆಯಾಗಿ ಕಾರ್ಯನಿರ್ವಹಿಸಲಿದೆ. ಜತೆಗೆ, ಕೈಗಾರಿಕಾ ವಲಯದ ಪ್ರಸ್ತುತ ಬೇಡಿಕೆಗಳು ಮತ್ತು ನೈಜ ಸವಾಲುಗಳಿಗೆ ತಕ್ಕಂತೆ ಶೈಕ್ಷಣಿಕ ಜ್ಞಾನವನ್ನು ಅಳವಡಿಸಿಕೊಳ್ಳಲು ವಿದ್ಯಾರ್ಥಿಗಳು ಹಾಗೂ ಬೋಧಕರಿಗೆ ಇದು ನೆರವಾಗಲಿದ್ದು, ಶಿಕ್ಷಣ ಮತ್ತು ಉದ್ಯಮ ವಲಯದ ಬಾಂಧವ್ಯವನ್ನು ವೃದ್ಧಿಸಲಿದೆ.
ಈ ಕಾರ್ಯಕ್ರಮದಲ್ಲಿ ಮೈಕ್ರೋಸಾಫ್ಟ್ ಹಾಗೂ ಹಿಟಾಚಿ ಸಂಸ್ಥೆಯ ಪ್ರಮುಖರು ಮಾಹೆ ಸಮುದಾಯದೊಂದಿಗೆ ಸಮಾಲೋಚನೆ ನಡೆಸಿದರು. ಎಐ, ಡಿಜಿಟಲ್ ಶಿಕ್ಷಣ, ಸಂಶೋಧನೆಯಲ್ಲಿನ ನವೀನ ಅವಕಾಶಗಳು ಹಾಗೂ ಭವಿಷ್ಯದ ವೃತ್ತಿಪರ ಕೌಶಲ್ಯಗಳಿಗೆ ತಕ್ಕಂತೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ವಿಷಯಗಳ ಕುರಿತು ಇಲ್ಲಿ ಗಂಭೀರ ಚರ್ಚೆಗಳು ನಡೆದವು.
ಇದೇ ವೇಳೆ “ಬಿಯಾಂಡ್ ದಿ ಹೈಪ್: ಹೌ ಎಐ ಈಸ್ ರಿಶೇಪಿಂಗ್ ವರ್ಕ್, ಬ್ಯುಸಿನೆಸ್, ಅಂಡ್ ಸೊಸೈಟಿ” ಎಂಬ ವಿಷಯದ ಕುರಿತು ಸಂವಾದ ನಡೆಯಿತು. ಕೆಲಸದ ಸ್ಥಳಗಳು, ವ್ಯಾಪಾರ, ಶಿಕ್ಷಣ ಹಾಗೂ ಸಮಾಜದ ಮೇಲೆ ‘ಎಐ’ ಬೀರುತ್ತಿರುವ ಪ್ರಭಾವಗಳ ಬಗ್ಗೆ ಚರ್ಚಿಸಲಾಯಿತು. ಜತೆಗೆ, ತಂತ್ರಜ್ಞಾನದ ಜವಾಬ್ದಾರಿಯುತ ಬಳಕೆ ಮತ್ತು ಭವಿಷ್ಯದ ಸವಾಲುಗಳನ್ನು ಎದುರಿಸುವ ಸಿದ್ಧತೆಯ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಲಾಯಿತು.
ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಮಾಹೆಯ ಸಹ ಕುಲಾಧಿಪತಿ ಡಾ. ಎಚ್ ಎಸ್ ಬಲ್ಲಾಳ್ ಅವರು “ಪರಿವರ್ತನೆಗೆ ಪ್ರತಿಕ್ರಿಯಿಸುವುದಕ್ಕಿಂತ ಅದಕ್ಕಿಂತ ಮುಂಚಿತವಾಗಿ ಸಾಗುವ ನಂಬಿಕೆಯನ್ನು ಮಾಹೆ ಸದಾ ಪಾಲಿಸಿಕೊಂಡು ಬಂದಿದೆ. ಮೈಕ್ರೋಸಾಫ್ಟ್ ಮತ್ತು ಹಿಟಾಚಿ ಸಹಭಾಗಿತ್ವದಲ್ಲಿ ಈ AI ಪ್ರಯೋಗಶಾಲೆಗಳ ಉದ್ಘಾಟನೆ ಆ ಸ್ಥಾಪಕ ದೃಷ್ಟಿಕೋನದ ನಿರಂತರತೆಯಾಗಿದೆ. ಇದು ನವೋದ್ಯಮ ಮತ್ತು ನೈತಿಕತೆ ಕೈಗೂಡಿಸಿ ಮುನ್ನಡೆಯುವ ಸಂಸ್ಥೆಯನ್ನು ನಿರ್ಮಿಸುವ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುವ ಮತ್ತೊಂದು ಹೆಜ್ಜೆಯಾಗಿದೆ.” ಎಂದರು.
ಮಾಹೆ ಕುಲಪತಿ ಡಾ. ಶರತ್ ಕೆ. ರಾವ್ ಮಾತನಾಡಿ, “ಭವಿಷ್ಯದ ಅಗತ್ಯಗಳಿಗೆ ತಕ್ಕಂತೆ ತಂತ್ರಜ್ಞಾನ ಚಾಲಿತ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ರೂಪಿಸುವ ನಮ್ಮ ಪ್ರಯತ್ನಕ್ಕೆ ಮಾಹೆ ಮತ್ತು ಮೈಕ್ರೋಸಾಫ್ಟ್ ಸಹಭಾಗಿತ್ವವು ಒಂದು ಪ್ರಮುಖ ಹೆಜ್ಜೆಯಾಗಿದೆ. ಎಐ ಮತ್ತು ಕ್ಲೌಡ್ ತಂತ್ರಜ್ಞಾನಗಳು ಇಂದಿನ ಕಲಿಕೆ ಮತ್ತು ಕಾರ್ಯವೈಖರಿಯನ್ನೇ ಬದಲಾಯಿಸುತ್ತಿವೆ. ಆದ್ದರಿಂದ ನಮ್ಮ ವಿದ್ಯಾರ್ಥಿಗಳು ಮತ್ತು ಬೋಧಕರು ಇದರ ಪ್ರಾಯೋಗಿಕ ಅನುಭವ ಪಡೆಯುವುದು ಅನಿವಾರ್ಯ. ಮಾಹೆಯ ಐದು ಸಂಸ್ಥೆಗಳಲ್ಲಿ ಸ್ಥಾಪನೆಯಾಗುತ್ತಿರುವ ಮೈಕ್ರೋಸಾಫ್ಟ್ ಲ್ಯಾಬ್‌ಗಳು ಪ್ರಾಯೋಗಿಕ ಕಲಿಕೆ, ಸಂಶೋಧನೆ, ನಾವೀನ್ಯತೆ ಹಾಗೂ ವಿಭಾಗಗಳ ನಡುವಿನ ಸಹಯೋಗಕ್ಕೆ ಬಲ ತುಂಬಲಿವೆ,” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮೈಕ್ರೋಸಾಫ್ಟ್ ಇಂಡಿಯಾ ಮತ್ತು ದಕ್ಷಿಣ ಏಷ್ಯಾದ ಅಧ್ಯಕ್ಷ, ಸಿಇಒ ಪುನೀತ್ ಚಂಡೋಕ್ ಮಾತನಾಡಿ, “ಭಾರತದ ಯುವ ಸಮುದಾಯ ಎಐ ಆಧಾರಿತ ಆವಿಷ್ಕಾರಗಳ ಭವಿಷ್ಯವನ್ನು ಬರೆಯುವ ಶಕ್ತಿ ಹೊಂದಿದೆ. ಇದನ್ನು ಸಾಕಾರಗೊಳಿಸಲು ಶಿಕ್ಷಣ ಮತ್ತು ಕೈಗಾರಿಕಾ ವಲಯ ಜೊತೆಯಾಗುವುದು ಅನಿವಾರ್ಯ. ಮಾಹೆಯೊಂದಿಗಿನ ನಮ್ಮ ಒಪ್ಪಂದವು ವಿದ್ಯಾರ್ಥಿಗಳು ಹಾಗೂ ಬೋಧಕರಿಗೆ ಭವಿಷ್ಯದ ತಂತ್ರಜ್ಞಾನಗಳು, ಉಪಕರಣಗಳು ಮತ್ತು ಕೌಶಲ್ಯಗಳನ್ನು ನೇರವಾಗಿ ಪರಿಚಯಿಸಲಿದೆʼ ಎಂದರು.
ಹಿಟಾಚಿ ಸಿಸ್ಟಮ್ಸ್ ಇಂಡಿಯಾ ಸಿಇಒ ರಾಜ್ ಕಮಲ್ ಸಿಂಘಾಲ್ ಮಾತನಾಡಿ, “ವೇಗವಾಗಿ ಬದಲಾಗುತ್ತಿರುವ ಡಿಜಿಟಲ್ ಆರ್ಥಿಕತೆಗೆ ಪೂರಕವಾದ ಕಾರ್ಯಪಡೆಯನ್ನು ಸೃಷ್ಟಿಸಲು ತಂತ್ರಜ್ಞಾನ, ಶಿಕ್ಷಣ ಮತ್ತು ಉದ್ಯಮಗಳ ಸಂಗಮ ಅನಿವಾರ್ಯವಾಗಿದೆ. ಶೈಕ್ಷಣಿಕ ಜ್ಞಾನ ಮತ್ತು ಕೈಗಾರಿಕಾ ಸಾಮರ್ಥ್ಯವನ್ನು ಒಗ್ಗೂಡಿಸಿ ಕಲಿಕೆ ಹಾಗೂ ನಾವೀನ್ಯತೆಗೆ ಉತ್ತಮ ಅವಕಾಶಗಳನ್ನು ಒದಗಿಸುತ್ತಿರುವ ಮಾಹೆ ಮತ್ತು ಮೈಕ್ರೋಸಾಫ್ಟ್ ಜತೆಗಿನ ಈ ಹೆಜ್ಜೆಯಲ್ಲಿ ಪಾಲ್ಗೊಳ್ಳಲು ನಮಗೆ ಖುಷಿ ಇದೆ.ʼ ಎಂದು ತಿಳಿಸಿದರು.
ಮಾಹೆ ಮತ್ತು ಮೈಕ್ರೋಸಾಫ್ಟ್ ಒಪ್ಪಂದವು ತಂತ್ರಜ್ಞಾನ ಆಧಾರಿತ ಶಿಕ್ಷಣ ಹಾಗೂ ಹೊಸ ಆವಿಷ್ಕಾರಗಳಿಗೆ ಹೆಚ್ಚಿನ ಒತ್ತು ನೀಡಲಿದೆ. ಶೈಕ್ಷಣಿಕ ಜ್ಞಾನ, ಕೈಗಾರಿಕಾ ವಲಯದ ಅನುಭವ ಹಾಗೂ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಒಂದೇ ವೇದಿಕೆಯಡಿ ಬೆಸೆಯುವ ಮೂಲಕ, ಭವಿಷ್ಯದ ಜಾಗತಿಕ ಆರ್ಥಿಕತೆಯ ಬೇಡಿಕೆಗಳಿಗೆ ತಕ್ಕಂತೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ನಿಟ್ಟಿನಲ್ಲಿ ಇದೊಂದು ಅತ್ಯುತ್ತಮ ಪರಿಸರವನ್ನು ಸೃಷ್ಟಿಸಲಿದೆ.

MAHE and Microsoft leadership at the launch of the AI Lab at TAPMI Manipal, marking the partnership to advance AI learning, innovation and future-ready skills
From left to right: Dr Ganesh Prasad, Director, Digital and IT, MAHE; Mr Raj Kamal Singhal, CEO, Hitachi Systems India; Dr Sharath K. Rao, Vice Chancellor, MAHE; Dr H. S. Ballal, Pro Chancellor, MAHE; Mr Puneet Chandok, President, Microsoft India and South Asia; and Dr Debasis Pradhan, Director, TAPMI Manipal, during the inauguration of the AI Lab at TAPMI Manipal

Previous Post

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Next Post

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News