Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಲ್ಪೆ ಮೀನುಗಾರರ ರ್ಯತ ಉತ್ಪಾದಕ ಕಂಪನಿಯಿಂದ ಪಚ್ಚಲೆ ಕೃಷಿಯಲ್ಲಿ ಉದ್ಯಮ ಶೀಲತೆ ಮತ್ತು ಬೆಳವಣಿಗೆಯ ಅವಕಾಶಗಳ ಕುರಿತ ಮಾಹಿತಿ ಕಾರ್ಯಾಗಾರ..!!

Dhrishya News by Dhrishya News
08/06/2023
in ಕರಾವಳಿ, ಸುದ್ದಿಗಳು
0
0
SHARES
31
VIEWS
Share on FacebookShare on Twitter

ಉಡುಪಿ : ಇಲ್ಲಿನ ಮಲ್ಪೆ ಮೀನುಗಾರರ ರ್ಯತ ಉತ್ಪಾದಕ ಕಂಪನಿಯಿಂದ ಪಚ್ಚಲೆ ಕೃಷಿಯಲ್ಲಿ ಉದ್ಯಮ ಶೀಲತೆ ಮತ್ತು ಬೆಳವಣಿಗೆಯ ಅವಕಾಶಗಳ ಕುರಿತ ಮಾಹಿತಿ ಕಾರ್ಯಾಗಾರವು ಕಲ್ಯಾಣಪುರದ ಸುವರ್ಣ ನದಿತೀರದಲ್ಲಿ ಜರುಗಿತು.

ಐಸಿಏಆರ್ ಮತ್ತು ಸಿಎಂಎಫ್‍ಆರ್‍ಐನ ಮಂಗಳೂರು ಪ್ರಾದೇಶಿಕ ಕೇಂದ್ರದ ಪ್ರಧಾನ ವಿಜ್ಞಾನಿ ಗೀತಾ ಸಸಿಕುಮಾರ್ ಅವರು ಪಚ್ಚಲೆ ಕ್ರಷಿಯಲ್ಲಿ ಅತ್ಯಂತ ಕಡಿಮೆ ಶ್ರಮ ಮತ್ತು ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಲಾಭಗಳಿಸುವ ಅವಕಾಶವಿದೆ ಎಂದು ತಿಳಿಸಿ ಪಚ್ಚಲೆ ಕೃಷಿಯನ್ನು ವ್ಯವಸ್ಥಿತವಾಗಿ ಮಾಡುವ ಕುರಿತು ಪ್ರಾತ್ಯಕ್ಷಿಕೆಯ ಮೂಲಕ ಸವಿವರವಾಗಿ ತಿಳಿಸಿಕೊಟ್ಟರು. ಪಚ್ಚಲೆ ಕೃಷಿ ಮಾಡುವ ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆಗಳ ಕುರಿತು ತಿಳಿಸಿದರಲ್ಲದೇ ಈ ಭಾಗದ ಮೀನುಗಾರ ಮಹಿಳೆಯರು ಹಾಗೂ ಪುರುಷರು ಮಲ್ಪೆ ಮೀನುಗಾರ ರೈತ ಉತ್ಪಾದಕ ಕಂಪನಿಯಿಂದ ಆರ್ಥಿಕವಾಗಿ ಸಬಲರಾಗಲು ಸಿಗುವ ಅವಕಾಶಗಳನ್ನು ಸದುಪಯೊಗ ಪಡೆದುಕೊಳ್ಳುವಂತೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಿಎಂಎಫ್‍ಆರ್‍ಐನ ತಾಂತ್ರಿಕ ಅಧಿಕಾರಿ ನಟರಾಜ ಹಾಗೂ ವಿಜ್ಞಾನಿ ದಿವ್ಯಾ ವಿಶ್ವಂಭರ ಪಚ್ಚಲೆ ಕೃಷಿಗೆ ಸಂಬಂಧಿಸಿದ ಪೂರಕ ಮಾಹಿತಿ ನೀಡಿದರು. ಉಡುಪಿ ಮತ್ತು ಉತ್ತರಕನ್ನಡ ಜಿಲ್ಲಾ ಸಂಯೋಜಕ ಸ್ಕೋಡ್‍ವೆಸ್ ಸಂಸ್ಥೆಯ ಗಂಗಾಧರ ನಾಯ್ಕ ಮಲ್ಪೆ ಮೀನುಗಾರರ ರೈತ ಉತ್ಪಾದಕ ಕಂಪನಿಯ ಕಾರ್ಯ ಚಟುವಟಿಕೆಗಳ ಕುರಿತು ಪ್ರಾಸ್ತಾವಿಕಾವಾಗಿ ಮಾತನಾಡಿ ಪಚ್ಚಲೆ ಕೃಷಿಗೆ ಸರ್ಕಾರದಿಂದ ಸಿಗುವ ಸಹಾಯದ ಕುರಿತು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲ್ಪೆ ಮೀನುಗಾರ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷೆ ವನಜ ಪುತ್ರನ್ ವಹಿಸಿದ್ದರು. ವೇದಿಕೆಯಲ್ಲಿ ಕಲ್ಯಾಣಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಕೃಷ್ಣ ದೇವಾಡಿಗ, ಮಲ್ಪೆ ಮೀನುಗಾರ ಸಂಘದ ಮಾಜಿ ಅಧ್ಯಕ್ಷ ಹಿರಿಯಣ್ಣ ಕಿದಿಯೂರು ಉಪಸ್ಥಿತರಿದ್ದರು.

ಕಂಪನಿಯ ಮುಖ್ಯ ಕಾರ್ಯ ನಿರ್ವಾಹಕ ವಿಷ್ಣುಪ್ರಸಾದ ಕಾಮತ್ ಕಾರ್ಯಕ್ರಮವನ್ನು ನಿರ್ವಹಿಸಿ ವಂದಿಸಿದರೆ ನಿರ್ದೇಶಕಿ ಜಯಂತಿ ಸಾಲಿಯಾನ್ ಸ್ವಾಗತಿಸಿದರು. ಕಿರಣ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಕಂಪನಿಯ ನಿರ್ದೇಶಕರಾದ ಜಯಂತಿ ಮೈಂದಾನ್, ಪದ್ಮಾವತಿ, ವೇದಾವತಿ, ರೇಣುಕಾ ವನಜಾ ಕಿದಿಯೂರು ಹಾಗೂ ಐವತ್ತಕ್ಕೂ ಹೆಚ್ಚು ಮೀನುಗಾರ ಮಹಿಳೆಯರು ಉಪಸ್ಥಿತರಿದ್ದರು.

Previous Post

ಮಾಹೆ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಮಣಿಪಾಲ ಭ್ರೂಣಶಾಸ್ತ್ರ ಮತ್ತು ಸಂತಾನೋತ್ಪತ್ತಿ ವಿಜ್ಞಾನ ಕೇಂದ್ರ ಉದ್ಘಾಟನೆ ..!!

Next Post

ಜೂನ್‌.15 ರಿಂದ ‘ಗೃಹ ಜ್ಯೋತಿ ಯೋಜನೆ’ಗೆ ಅರ್ಜಿ ಆಹ್ವಾನ : ಸಚಿವ ಕೆ.ಜೆ ಜಾರ್ಜ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜೂನ್‌.15 ರಿಂದ 'ಗೃಹ ಜ್ಯೋತಿ ಯೋಜನೆ'ಗೆ ಅರ್ಜಿ ಆಹ್ವಾನ : ಸಚಿವ ಕೆ.ಜೆ ಜಾರ್ಜ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

11/10/2026
ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

11/10/2026
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026

Recent News

imunify-bot-check