Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಜೂನ್‌.15 ರಿಂದ ‘ಗೃಹ ಜ್ಯೋತಿ ಯೋಜನೆ’ಗೆ ಅರ್ಜಿ ಆಹ್ವಾನ : ಸಚಿವ ಕೆ.ಜೆ ಜಾರ್ಜ್..!!

Dhrishya News by Dhrishya News
08/06/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
15
VIEWS
Share on FacebookShare on Twitter

ಬೆಂಗಳೂರು: ಗೃಹ ಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು, ಒಟ್ಟು ಅಂದಾಜು ಸರಾಸರಿ 13 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು.

ಬುಧವಾರ ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದ್ದು, ಗೃಹ ಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣವನ್ನು ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್‌ ಗಿಂತ ಕಡಿಮೆ ಬಳಕೆ ಮಾಡುವ ಗ್ರಾಹಕರು 2.14 ಕೋಟಿ ಇದ್ದಾರೆ. ಇವರ ವಾರ್ಷಿಕ ಬಳಕೆ 13,575 ಮಿಲಿಯನ್ ಯುನಿಟ್ ಗಳು. ಈ ಗ್ರಾಹಕರು ಪ್ರತಿ ತಿಂಗಳು ಸರಾಸರಿ 53 ಯೂನಿಟ್‌ ವಿದ್ಯುತ್‌ ಬಳಕೆ ಮಾಡುತ್ತಾರೆ. 2 ಲಕ್ಷ ಜನರು 200 ಯೂನಿಟ್‌ ಹೆಚ್ಚು ಬಳಕೆ ಮಾಡುತ್ತಾರೆ ಎಂದರು.

ಸೇವಾ ಸಿಂಧು ಪೋರ್ಟ್‌ಲ್‌ ನಲ್ಲಿ ಜೂನ್‌ 15 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಮೂಲಕ ಯೋಜನೆಯನ್ನು ಜಾರಿಗೊಳಿಸುತ್ತೇವೆ. ಗ್ರಾಹಕರು ಸರಾಸರಿ ಬಿಲ್‌ ಗಿಂತ ಹೆಚ್ಚು ಉಪಯೋಗ ಮಾಡಿದರೆ ಹೆಚ್ಚುವರಿ ಬಳಕೆಗೆ ಬಿಲ್‌ ಕಟ್ಟಬೇಕಿದೆ. ಆದರೆ ಉಚಿತ ಯೋಜನೆ ಅಡಿಯಲ್ಲಿ ಗ್ರಾಹಕರು ನಿಗದಿತ ಶುಲ್ಕವನ್ನು ಕಟ್ಟುವ ಹಾಗಿಲ್ಲ. ಸರಾಸರಿ ಬಳಕೆಗಿಂತ ಹೆಚ್ಚುವರಿ ಬಳಕೆ ಮಾಡಿದರೆ ಅಂತಹ ಗ್ರಾಹಕರು ನಿಗದಿತ ಶುಲ್ಕ ಕಟ್ಟಬೇಕಾಗಿಲ್ಲ. ಹೆಚ್ಚುವರಿ ಬಳಕೆಗೆ ಮಾತ್ರ ಇಂಧನ ಶುಲ್ಕವನ್ನು ಕಟ್ಟಬೇಕಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?

ಸೇವಾಸಿಂಧು ಪೋರ್ಟಲ್‌ ನಲ್ಲಿ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಕಂಪ್ಯೂಟರ್, ಮೊಬೈಲ್‌ ನಿಂದ ಅರ್ಜಿ ಸಲ್ಲಿಸುವ ಅವಕಾಶವನ್ನು ಕಲ್ಪಿಸಲಾಗುವುದು ಹಾಗೂ ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಸೆಂಟರ್‌ ಗಳಲ್ಲೂ ಅವಕಾಶ ಕಲ್ಪಿಸಲಾಗುತ್ತಿದ್ದು ಜೂನ್‌ 15 ರಿಂದ ಅರ್ಜಿ ಪ್ರಾರಂಭ ಮಾಡುತ್ತೇವೆ. ಗ್ರಾಹಕರ ದೃಷ್ಟಿಯಿಂದ ಸರ್ವರ್‌ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಎಲ್ಲಾ ಸಿದ್ಧತೆಗಳನ್ನು E-Governance ಇಲಾಖೆ ಮಾಡಿಕೊಂಡಿರುತ್ತದೆ.

Previous Post

ಮಲ್ಪೆ ಮೀನುಗಾರರ ರ್ಯತ ಉತ್ಪಾದಕ ಕಂಪನಿಯಿಂದ ಪಚ್ಚಲೆ ಕೃಷಿಯಲ್ಲಿ ಉದ್ಯಮ ಶೀಲತೆ ಮತ್ತು ಬೆಳವಣಿಗೆಯ ಅವಕಾಶಗಳ ಕುರಿತ ಮಾಹಿತಿ ಕಾರ್ಯಾಗಾರ..!!

Next Post

ಮಾಜಿ ಸಿಎಂ `BSY’ ಗೆ ಬಿಗ್ ರಿಲೀಫ್ : ಡಿನೋಟಿಫಿಕೇಷನ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಜಿ ಸಿಎಂ `BSY' ಗೆ ಬಿಗ್ ರಿಲೀಫ್ : ಡಿನೋಟಿಫಿಕೇಷನ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved