ಉಡುಪಿ, ಆ.16: ನಾಗರ ಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಗೆ ಆಗಸ್ಟ್ 17ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ವತಿಯಿಂದ ಆಗಸ್ಟ್ 16ರಂದು ಹೊರಡಿಸಿರುವ ಆದೇಶದಂತೆ, ನಾಗರ ಪಂಚಮಿ ಹಬ್ಬವನ್ನು ಜಿಲ್ಲೆಯಾದ್ಯಂತ ವಿಶೇಷವಾಗಿ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 17, ಸೋಮವಾರದಂದು ಉಡುಪಿ ಜಿಲ್ಲಾದ್ಯಂತ ಎಲ್ಲ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಹಾಗೂ ವಿವಿಧ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಕರ್ನಾಟಕ ಸರ್ಕಾರದ ಕಾರ್ಯಾದೇಶ ಹಾಗೂ ಹಿಂದಿನ ಆದೇಶಗಳನ್ನು ಉಲ್ಲೇಖಿಸಿ ಜಿಲ್ಲಾಡಳಿತ ಈ ರಜೆ ಘೋಷಿಸಿದೆ.
ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಸಂಸ್ಥೆಗಳು ಆದೇಶವನ್ನು ಪಾಲಿಸುವಂತೆ ಸೂಚಿಸಲಾಗಿದೆ.







