ಉಚ್ಚಿಲ: ಉಡುಪಿ ಜಿಲ್ಲೆ, ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶುಕ್ರವಾರ (ಆ.21) ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ ಭಕ್ತಿಭಾವದಿಂದ ನಡೆಯಿತು.
ಬೆಳಿಗ್ಗೆ 9.30ಕ್ಕೆ ಕಲಶ ಪ್ರತಿಷ್ಠೆ ನೆರವೇರಿದ ಬಳಿಕ ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ನಡೆಯಿತು.

ಮಧ್ಯಾಹ್ನ 12 ಗಂಟೆಗೆ ಶ್ರೀ ಕ್ಷೇತ್ರದಲ್ಲಿ ಮಹಾಪೂಜೆ ನೆರವೇರಿತು. ಬಳಿಕ ಭಕ್ತರಿಗೆ ಮಹಾ ಅನ್ನಸಂತರ್ಪಣೆ ನಡೆಯಿತು.
ಪೂಜಾ ಕಾರ್ಯಕ್ರಮದಲ್ಲಿ ಮಹಿಳೆಯರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಭಗವದ್ಭಕ್ತರು ಭಾಗವಹಿಸಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದಿವ್ಯ ಕೃಪೆಗೆ ಪಾತ್ರರಾದರು







