Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

Dhrishya News by Dhrishya News
22/08/2026
in ಸುದ್ದಿಗಳು
0
ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!
0
SHARES
9
VIEWS
Share on FacebookShare on Twitter

ಮಂಗಳೂರು :  ಪ್ರಸ್ತುತ ದಕ್ಷಿಣ ರೈಲ್ವೇ ವಲಯದ ಪಾಲಕ್ಕಾಡ್ ವಿಭಾಗ ಮತ್ತು ನೈಋತ್ಯ ರೈಲ್ವೆ ವಲಯದ ಮೈಸೂರು ವಿಭಾಗ ನಡುವೆ ಹಂಚಿಕೆಯಾಗಿದ್ದ ಮಂಗಳೂರು ರೈಲ್ವೆ ಜಾಲ ಇದೀಗ ಪೂರ್ತಿಯಾಗಿ ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳ್ಳುವುದರ ಮೂಲಕ ಕರಾವಳಿ ಜಿಲ್ಲೆಗಳ ಜನತೆಯ ಬಹು ಬೇಡಿಕೆಯ ಈಡೇರಿದೆ ಹಾಗೂ ತನ್ಮೂಲಕ ಇಲ್ಲಿನ ರೈಲ್ವೇ ಬಳಕೆದಾರರ ದೀರ್ಘಕಾಲದ ಕನಸು ನನಸಾಗುತ್ತಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಸಂತಸ ವ್ಯಕ್ತಪಡಿಸಿದೆ.

ಮಂಗಳೂರಿನ ಮಾತ್ರವಲ್ಲದೆ ಪಕ್ಕದ ಉಡುಪಿ ಜಿಲ್ಲೆಯ ಜನತೆಯ ರೈಲ್ವೆ ಸೌಕರ್ಯಗಳ ಮಟ್ಟಿಗೆ ಇದೊಂದು ಐತಿಹಾಸಿಕ ಹೆಜ್ಜೆಯಾಗಿದೆ. ಈ ಬದಲಾವಣೆಯಿಂದ ಮಂಗಳೂರು ರೈಲ್ವೆ ವ್ಯಾಪ್ತಿಯ ಆಡಳಿತಾತ್ಮಕ ಗೊಂದಲಗಳು ನಿವಾರಣೆಯಾಗಲಿವೆ. ಇಲಾಖೆಗಳ ನಡುವಿನ ಸಮನ್ವಯತೆ ಹೆಚ್ಚಲಿದ್ದು, ಪ್ರಯಾಣಿಕರ ಕುಂದುಕೊರತೆಗಳ ಶೀಘ್ರ ವಿಲೇವಾರಿ ಹಾಗೂ ಕರಾವಳಿ ಭಾಗದ ರೈಲ್ವೆ ಮೂಲಸೌಕರ್ಯ ವಿಸ್ತರಣೆಗೆ ಮತ್ತು ಸಂಪರ್ಕದ ಅಭಿವೃದ್ಧಿಗೆ ಇದು ನಾಂದಿಯಾಗಲಿದೆ. ಮಾತ್ರವಲ್ಲದೇ ಮುಂಬರುವ ದಿನಗಳಲ್ಲಿ ನೈಋತ್ಯ ರೈಲ್ವೇ ವಲಯದೊಂದಿಗೆ ಕೊಂಕಣ ರೈಲ್ವೆಯನ್ನು ವಿಲೀನಗೊಳಿಸಲು ದಾರಿ ಸುಗಮವಾದಂತಾಗಿದೆ ಎಂದು ಜಿಲ್ಲಾ ಬಿಜೆಪಿ ತಿಳಿಸಿದೆ.

ಜೂನ್ 2024ರಲ್ಲಿ ಎನ್.ಡಿ.ಎ. 3.0 ಸರಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಈ ವಿಚಾರವನ್ನು ಆದ್ಯತೆಯ ಮೇರೆಗೆ ಪರಿಗಣಿಸುವಂತೆ ಮಂಗಳೂರು, ಉಡುಪಿ-ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸಂಸದರು ಸತತವಾಗಿ ಒತ್ತಡ ಹೇರುತ್ತಾ ಬಂದಿದ್ದರು. ಕೇಂದ್ರ ರೈಲ್ವೆ ಸಚಿವರಾದ ಆಶ್ವಿನಿ ವೈಷ್ಣವ್ ಅವರ ಗಮನಕ್ಕೂ ಈ ವಿಚಾರವನ್ನು ಆಗಾಗ್ಗೆ ತಂದು, ಲಭ್ಯವಿದ್ದ ಎಲ್ಲಾ ಸಂಸದೀಯ ಮತ್ತು ಸಾಂಸ್ಥಿಕ ವೇದಿಕೆಗಳಲ್ಲೂ ಈ ಬಗ್ಗೆ ಧ್ವನಿ ಎತ್ತಲಾಗಿತ್ತು. ಜೊತೆಗೆ ಅಂದಿನಿಂದಲೂ ಈ ವಿಷಯದ ಕುರಿತಾಗಿ ಉಭಯ ಸಂಸದರೂ ಬೆಂಬಿಡದೆ ಶ್ರಮಿಸಿದ್ದರ ಫಲವಾಗಿ ಈ ಐತಿಹಾಸಿಕ ಆದೇಶ ಹೊರಬಿದ್ದಿದೆ. ಇದೀಗ ಈ ಪ್ರಮುಖ ಬೇಡಿಕೆ ಈಡೇರುತ್ತಿರುವುದು ಉಭಯ ಜಿಲ್ಲೆಗಳ ಮಹಾಜನತೆಗೆ ಮತ್ತು ರೈಲ್ವೇ ಬಳಕೆದಾರರಿಗೆ ಅತ್ಯಂತ ಖುಷಿ ತಂದಿದೆ.

ಕೇಂದ್ರ ರೈಲ್ವೇ ಸಚಿವರು ನಮ್ಮ ಕರಾವಳಿಯ ಸಂಸದರುಗಳ ಬೇಡಿಕೆಗೆ ಸ್ಪಂದಿಸಿ ತ್ವರಿತ ಮತ್ತು ಸಕಾರಾತ್ಮಕ ಕ್ರಮ ಕೈಗೊಂಡ ನಿಲುವಿಗೆ ಕರಾವಳಿಯ ಸಮಸ್ತ ಜನತೆಯ ಪರವಾಗಿ ಉಡುಪಿ ಜಿಲ್ಲಾ ಬಿಜೆಪಿ ಧನ್ಯವಾದ ಸಲ್ಲಿಸಿದೆ.

ನಮ್ಮ ರೈಲ್ವೆ ಸಂಬಂಧಿತ ಸಮಸ್ಯೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಬಗೆಹರಿಸಲು ಹಾಗೂ ಮಂಗಳೂರಿನ ರೈಲ್ವೆ ಸೇವೆಯನ್ನು ಇನ್ನಷ್ಟು ಪ್ರಗತಿಯ ಪಥದಲ್ಲಿ ವೇಗವಾಗಿ ಮುನ್ನಡೆಸಲು ಇದು ನೆರವಾಗಲಿದೆ. ಈ ಮಹತ್ವದ ನಿರ್ಧಾರ ಕೈಗೊಂಡ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಹಾಗೂ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮತ್ತು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ. ರಾಘವೇಂದ್ರ ಅವರಿಗೆ ಉಡುಪಿ ಜಿಲ್ಲೆಯ ಸಮಸ್ತ ಜನತೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವುದಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

22/08/2026
ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

22/08/2026
ಸಚಿವ ನಾಗೇಂದ್ರ ರಾಜೀನಾಮೆಗೆ ಅಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ..!

ಸಚಿವ ನಾಗೇಂದ್ರ ರಾಜೀನಾಮೆಗೆ ಅಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ..!

21/08/2026
ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ: ಸಿಪಿಎಂ ಖಂಡನೆ

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ: ಸಿಪಿಎಂ ಖಂಡನೆ

21/08/2026

Recent News