Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಟೀಲು ದೇಗುಲದಲ್ಲಿ 31 ವರ್ಷಗಳ ನಂತರ ಮೊದಲ ಬಾರಿಗೆ ನೀರಿನ ಸಮಸ್ಯೆ !!

Dhrishya News by Dhrishya News
09/06/2023
in ಕರಾವಳಿ, ಸುದ್ದಿಗಳು
0
0
SHARES
15
VIEWS
Share on FacebookShare on Twitter

ಮಂಗಳೂರು:ನಗರ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಹಲವೆಡೆ ನೀರಿನ ಸಮಸ್ಯೆ ಬಿಗಡಾಯಿಸಿದೆ. ಕಟೀಲು ಸೇರಿದಂತೆ ಹಲವೆಡೆ ನದಿಯನ್ನೇ ನಂಬಿರುವ ದೇವಸ್ಥಾನಗಳಲ್ಲಿ ತೀರ್ಥ ನೀಡಲೂ ನೀರಿಲ್ಲ!

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭರ್ತಿ ಮಳೆಗಾಲವಿದ್ದಾಗ ರುದ್ರರಮಣೀಯ ದೃಶ್ಯ ಕಾಣಿಸುತ್ತದೆ. ನಂದಿನಿ ಹೊಳೆ ತುಂಬಿ ಹರಿಯುವ ಸಂದರ್ಭ ಕಟೀಲು ದೇವಸ್ಥಾನ ದ್ವೀಪದಂತೆ ಕಂಗೊಳಿಸುತ್ತದೆ. ಆದರೆ ಇಂದಿನ ಚಿತ್ರಣವೇ ಬೇರೆ. ನಂದಿನಿ ಬತ್ತಿಹೋಗಿದೆ. ನದಿಯಲ್ಲಿ ನೀರಿಲ್ಲ. ಕಟೀಲು ದೇವಸ್ಥಾನಕ್ಕೆ ಪ್ರತಿನಿತ್ಯ ಆಗಮಿಸುವ ಭಕ್ತರಿಗಾಗಿ ತೀರ್ಥ, ಅನ್ನಪ್ರಸಾದದ ಜತೆಗೆ ಕಟೀಲು ದೇವಳದ ಶಿಕ್ಷಣ ಸಂಸ್ಥೆಗಳ ಅನ್ನಪ್ರಸಾದಕ್ಕೂ ನೀರು ಬಳಕೆಯಾಗುತ್ತದೆ. ಆದರೆ ಅದ್ಯಾವುದಕ್ಕೂ ಈಗಿರುವ ಸಣ್ಣ ಪ್ರಮಾಣದ ನೀರು ಸಾಕಾಗುತ್ತಿಲ್ಲ. ಹೀಗಾಗಿ ದೈನಂದಿನ ಚಟುವಟಿಕೆಗಳಿಗೆ ನದಿ ನೀರು ಬತ್ತಿ ಹೋಗಿರುವುದು ಅಡ್ಡಿಯಾಗಿದೆ.

ಮೂರು ಹೊತ್ತು ದೇವಸ್ಥಾನದಲ್ಲಿ ಅನ್ನಪ್ರಸಾದ ವಿತರಣೆಯಾಗುವ ಕಾರಣ, ಸ್ಟೀಲ್ ಬಟ್ಟಲುಗಳಲ್ಲಿ ಊಟ ವಿತರಿಸಲಾಗುತ್ತಿತ್ತು. ಇದೀಗ ಅದರ ಬದಲಿಗೆ ಅಡಕೆ ಹಾಳೆ ತಟ್ಟೆಯನ್ನು ಉಪಯೋಗಿಸಲಾಗುತ್ತಿದೆ. ಇದರಿಂದ ಎರಡು ಲಾಭವಿದೆ. ಮೊದಲನೆಯದ್ದು ನೀರಿನ ಉಳಿತಾಯ, ಎರಡನೆಯದ್ದು ಪರಿಸರ ಸಂರಕ್ಷಣೆ. ಹಾಳೆ ತಟ್ಟೆಗಳು ಪ್ಲಾಸ್ಟಿಕ್‌ನಂತಲ್ಲ. ಅದನ್ನು ವಿಲೇವಾರಿ ಮಾಡಲು ಸುಲಭ. ಹೀಗಾಗಿ ಊಟ ನೀಡುವ ಸಂದರ್ಭ ನೀರಿನ ಬಳಕೆ ಕಡಿಮೆ ಮಾಡಬಹುದಾದರೂ ಸಾಮಾನ್ಯವಾಗಿ ದೇವಸ್ಥಾನಗಳಲ್ಲಿ ಅಭಿಷೇಕ, ತೀರ್ಥ ಇತ್ಯಾದಿಗಳಿಗೆ ನೀರು ಬೇಕೇ ಬೇಕು. ಆದರೆ ಅದಕ್ಕೂ ತತ್ವಾರ ಎಂಬಂತಿದೆ ಪರಿಸ್ಥಿತಿ.

ಕಟೀಲಿನಲ್ಲಿ ಪದವಿ ಕಾಲೇಜು ಹೊರತುಪಡಿಸಿ ಒಂದನೇ ತರಗತಿಯಿಂದ ಪದವಿಪೂರ್ವ ಕಾಲೇಜಿನ ವರೆಗೆ ಮದ್ಯಾಹ್ನದವರೆಗೆ ತರಗತಿಗಳು ನಡೆಸಲಾಗುತ್ತಿದೆ. ದೇವಸ್ಥಾನದಲ್ಲಿ ಮೂರು ಬಾವಿ ಮತ್ತು ಮೂರು ಬೋರ್‌ ವೆಲ್ ಗಳು ಇದ್ದು ನೀರು ಸಂಪೂರ್ಣವಾಗಿ ಬತ್ತಿದೆ. ಕಳೆದ ಏಪ್ರೀಲ್ ನಲ್ಲಿ ನಡೆದ ಜಾತ್ರಾಮಹೋತ್ಸವದ ಸಂದರ್ಭದಲ್ಲೂ ನೀರಿನ ಅಭಾವ ಇತ್ತು
Tags: #kateeldurgaparameshwaritemple #kateel #manglore
Previous Post

ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು; ಗೃಹಪ್ರವೇಶದಂದೇ ಬಂದಿದ್ದ ಬ್ಯಾಂಕ್ ಸೀಝರ್‌ಗಳು !

Next Post

ರಾಜ್ಯ ಸರ್ಕಾರದಿಂದ ಉಚಿತವಾಗಿ 6 ತಿಂಗಳ ಡಿಪ್ಲೋಮಾ ಕೋರ್ಸ್ ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯ ಸರ್ಕಾರದಿಂದ ಉಚಿತವಾಗಿ 6 ತಿಂಗಳ ಡಿಪ್ಲೋಮಾ ಕೋರ್ಸ್ ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved