ಬ್ರಹ್ಮಾವರ: ಬ್ರಹ್ಮಾವರದ ಬೈಕಾಡಿ ಗಾಂಧಿನಗರದಲ್ಲಿ ಪುತ್ರನೋರ್ವ ತನ್ನ ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ ಆಘಾತಕಾರಿ ಘಟನೆ ನಡೆದಿದೆ.
ಆರೋಪಿಯನ್ನು ಶಾಹಿದ್ ಆಲಿ (31) ಎಂದು ಗುರುತಿಸಲಾಗಿದೆ. ಮನೆಯಲ್ಲೇ ತಂದೆ-ತಾಯಿ ಹಾಗೂ ಪುತ್ರನ ನಡುವೆ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ರಾತ್ರಿ ಗಲಾಟೆ ನಡೆದಿದ್ದು, ಈ ವೇಳೆ ಶಾಹಿದ್ ಆಲಿ ಸುತ್ತಿಗೆಯಿಂದ ತಂದೆ-ತಾಯಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ತೀವ್ರವಾಗಿ ಗಾಯಗೊಂಡಿದ್ದ ತಂದೆ-ತಾಯಿ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಶಾಹಿದ್ ಆಲಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಹತ್ಯೆಗೆ ಕಾರಣ ಹಾಗೂ ಘಟನೆಯ ಸಂಪೂರ್ಣ ವಿವರಗಳು ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ.








