ಉಡುಪಿ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ನೀಡಲಾಗಿದ್ದ ಸಾರ್ವತ್ರಿಕ ರಜೆಯ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ.
ಈ ಹಿಂದೆ ಆ.26ರಂದು ರಜೆ ಘೋಷಿಸಲಾಗಿತ್ತು. ಇದೀಗ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕೋರಿಕೆಯ ಮೇರೆಗೆ ರಜೆಯನ್ನು ಆ.25, ಮಂಗಳವಾರಕ್ಕೆ ಬದಲಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹೀಗಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆ.25ರಂದು ಈದ್ ಮಿಲಾದ್ ಹಬ್ಬದ ಸಾರ್ವತ್ರಿಕ ರಜೆ ಇರಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಆ.26ರಂದು ರಜೆ ಮುಂದುವರಿಯಲಿದೆ.






