ಕಾರ್ಕಳ : ಕಾರ್ಕಳದ ಬಂಡಿಮಠ ನಿವಾಸಿ, ನಿವೃತ್ತ ಕಂದಾಯ ನಿರೀಕ್ಷಕ ಶಿವರಾಮ್ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಶಿವರಾಮ್ ಅವರು ಕಂದಾಯ ನಿರೀಕ್ಷಕರಾಗಿ ಉಡುಪಿ ಜಿಲ್ಲೆಯ ವಿವಿಧೆಡೆ ಸೇವೆ ಸಲ್ಲಿಸಿದ್ದು ತಮ್ಮ ಕರ್ತವ್ಯನಿಷ್ಠೆ ಹಾಗೂ ಸರಳ, ಸೌಜನ್ಯಯುತ ನಡೆ-ನುಡಿಗಳ ಮೂಲಕ ಜನರಿಂದ ಪ್ರಶಂಷೆಗೆ ಪಾತ್ರರಾದವರು. “ಶಿವರಾಮ್” ಅವರ ನಿಧನದ ಸುದ್ದಿ ಅತ್ಯಂತ ದುಃಖ ತಂದಿದೆ. ಸರ್ಕಾರಿ ಸೇವೆಯಲ್ಲಿ ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಹಾಗೂ ಜನಪರ ಮನೋಭಾವದಿಂದ ಸೇವೆ ಸಲ್ಲಿಸಿದ್ದ ಅವರು ಎಲ್ಲರ ಗೌರವ ಮತ್ತು ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಆಗಲುವಿಕೆಗೆ ತೀವ್ರ ಸಂತಾಪಗಳು, ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ಕರುಣಿಸಲಿ” ಎಂದು ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರು ಸಂತಾಪ ಸೂಚಿಸಿದ್ದಾರೆ.






