ಉಡುಪಿ : ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಸೆಪ್ಟೆಂಬರ್ 7ರಂದು ಬೆಳಗ್ಗೆ 11 ಗಂಟೆಗೆ ತ್ರೈಮಾಸಿಕ ಅಂಚೆ ಅದಾಲತ್ ನಡೆಯಲಿದೆ.
ಅಂಚೆ ಗ್ರಾಹಕರು ತಮ್ಮ ದೂರು ಹಾಗೂ ಸಲಹೆಗಳನ್ನು ಸೆಪ್ಟೆಂಬರ್ 5ರೊಳಗೆ ಅಧೀಕ್ಷಕರ ಕಚೇರಿಗೆ ಕಳುಹಿಸಬಹುದಾಗಿದೆ.
ಅಥವಾ ಸೆಪ್ಟೆಂಬರ್ 7ರಂದು ಅದಾಲತ್‌ಗೆ ಖುದ್ದಾಗಿ ಹಾಜರಾಗಿ ತಮ್ಮ ಸಮಸ್ಯೆಗಳನ್ನು ಚರ್ಚಿಸಿ ಪರಿಹರಿಸಿಕೊಳ್ಳಬಹುದಾಗಿದೆ.







