Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮನೆಕಳ್ಳತನ ಪ್ರಕರಣ: ಇಬ್ಬರ ಬಂಧನ, ₹23.56 ಲಕ್ಷ ಮೌಲ್ಯದ ಸೊತ್ತು ವಶ..!

Dhrishya News by Dhrishya News
27/08/2026
in ಸುದ್ದಿಗಳು
0
ಮನೆಕಳ್ಳತನ ಪ್ರಕರಣ: ಇಬ್ಬರ ಬಂಧನ, ₹23.56 ಲಕ್ಷ ಮೌಲ್ಯದ ಸೊತ್ತು ವಶ..!
0
SHARES
37
VIEWS
Share on FacebookShare on Twitter

ಉಡುಪಿ: ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಒಟ್ಟು ₹23,56,230 ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಅರುಣ್ ಎಸ್.ವಿ. (43) ಹಾಗೂ ಕೌಶೀಕ್ (19) ಎಂದು ಗುರುತಿಸಲಾಗಿದೆ.

ಪೆರಂಪಳ್ಳಿ ಸಂತೋಷನಗರದಲ್ಲಿ ಆಗಸ್ಟ್ 23ರಂದು ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ.

ವಿದೇಶಿ ಕರೆನ್ಸಿ ಸೇರಿದಂತೆ ಚಿನ್ನಾಭರಣ ವಶ
ಆರೋಪಿಗಳಿಂದ ಸುಮಾರು 88.400 ಗ್ರಾಂ ಚಿನ್ನ (₹13.26 ಲಕ್ಷ), 1 ಕೆಜಿ 360 ಗ್ರಾಂ ಬೆಳ್ಳಿ ಆಭರಣಗಳು (₹2.86 ಲಕ್ಷ), 1.45 ಗ್ರಾಂ ಚಿನ್ನದ ನಾಣ್ಯಗಳು (₹22,500), ಸುಮಾರು ₹2 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ, ₹33 ಸಾವಿರ ನಗದು, ಎರಡು ಮೊಬೈಲ್ ಫೋನ್‌ಗಳು, ವಿದೇಶಿ ಕೈಗಡಿಯಾರ ಸೇರಿದಂತೆ ಹಲವು ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇದಲ್ಲದೆ, ಕೃತ್ಯಕ್ಕೆ ಬಳಸಿದ್ದ ಕಳ್ಳತನದ ಪಲ್ಸರ್ ಬೈಕ್ (₹45 ಸಾವಿರ) ಹಾಗೂ ಒಂದು ಆಟೋರಿಕ್ಷಾ (₹4 ಲಕ್ಷ) ಕೂಡ ವಶಪಡಿಸಿಕೊಳ್ಳಲಾಗಿದೆ.

ಐದು ಪ್ರಕರಣಗಳಿಗೆ ಸಂಬಂಧ
ಆರೋಪಿಗಳು ಉಡುಪಿ ನಗರ ಹಾಗೂ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಒಟ್ಟು ಐದು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

ಉಡುಪಿ ಕೊಡಂಕೂರು ಗ್ರಾಮದ ಶಶಿರೇಖಾ ಅವರ ಮನೆಯಲ್ಲಿ ನಡೆದ ಕಳ್ಳತನ – ಉಡುಪಿ ನಗರ ಠಾಣೆ ಪ್ರಕರಣ.
ಪುತ್ತೂರು ಗ್ರಾಮದ ಭಗವತಿ ಲೇಔಟ್‌ನ ಸನಂ ಅವರ ಮನೆಯಲ್ಲಿ ನಡೆದ ಕಳ್ಳತನ – ಉಡುಪಿ ನಗರ ಠಾಣೆ ಪ್ರಕರಣ.
ನೇಜಾರು ಮಸೀದಿ ಸಮೀಪದ ಗ್ಯಾರೇಜ್‌ನಿಂದ ಪಲ್ಸರ್ ಬೈಕ್ ಕಳವು – ಮಲ್ಪೆ ಠಾಣೆ ಪ್ರಕರಣ.
ಕೆಳಾರ್ಕಳಬೆಟ್ಟುವಿನಲ್ಲಿ ತೃಪ್ತಿ ಅವಿನಾಶ್ ಅವರ ಮನೆಯಲ್ಲಿ ಕಳ್ಳತನ – ಮಲ್ಪೆ ಠಾಣೆ ಪ್ರಕರಣ.
ಕೆಳಾರ್ಕಳಬೆಟ್ಟುವಿನಲ್ಲಿ ರವಿ ಉಪಾಧ್ಯ ಅವರ ಮನೆಯಲ್ಲಿ ಕಳ್ಳತನ – ಮಲ್ಪೆ ಠಾಣೆ ಪ್ರಕರಣ.

ಆರೋಪಿಗಳು ಬೀಗ ಹಾಕಿದ ಮನೆಗಳನ್ನು ಗುರುತಿಸಿಕೊಂಡು, ಕಳ್ಳತನ ಮಾಡಿದ್ದ ಬೈಕ್‌ನಲ್ಲಿ ತೆರಳಿ ಕೃತ್ಯ ಎಸಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವಿಶೇಷ ತಂಡದಿಂದ ಕಾರ್ಯಾಚರಣೆ
ಮನೆಕಳ್ಳತನ ಪ್ರಕರಣದ ಆರೋಪಿಗಳು ಹಾಗೂ ಸೊತ್ತುಗಳ ಪತ್ತೆಗಾಗಿ ಉಡುಪಿ ನಗರ ಠಾಣೆ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಪೊಲೀಸ್ ಉಪನಿರೀಕ್ಷಕ (ತನಿಖೆ) ಪ್ರಕಾಶ್ ಅವರ ನೇತೃತ್ವದ ತಂಡವು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಈ ಕಾರ್ಯಾಚರಣೆ ಮಾನ್ಯ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಐಪಿಎಸ್ ಅವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ ಹಾಗೂ ಉಡುಪಿ ಉಪವಿಭಾಗದ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ ನಡೆದಿದೆ.
ಕಾರ್ಯಾಚರಣೆಯಲ್ಲಿ ಪಿಎಸ್‌ಐ ಪ್ರಕಾಶ್, ಪ್ರಸನ್ನ ಸಿ., ಜೀವನ್ ಕುಮಾರ್, ಕೃಷ್ಣದೇವಾಡಿಗ, ಆನಂದ ಗಾಣಿಗ, ಆನಂದ ಎಸ್., ಓಬಳೇಶ್, ಮಣಿಪಾಲ ಠಾಣೆಯ ಮಲ್ಲಯ್ಯ ಹಿರೇಮಠ್, ಹೇಮಂತ್ ಕುಮಾರ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಸಹಕರಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ಪೊಲೀಸ್ ಅಭಿರಕ್ಷೆಗೆ ಪಡೆಯಲಾಗಿದೆ.

ಗಮನಿಸಿ: ಮೊದಲ ಆರೋಪಿ ಅರುಣ್ ಆಚಾರಿ ಈ ಹಿಂದೆ ಮಣಿಪಾಲ ಠಾಣಾ ವ್ಯಾಪ್ತಿಯ ಪೋಕ್ಸೋ ಪ್ರಕರಣದಲ್ಲಿ 9 ವರ್ಷಗಳ ಕಾರಾಗೃಹ ಶಿಕ್ಷೆ ಅನುಭವಿಸಿ, ಜುಲೈ 2025ರಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅರುಣ್ SV ಪ್ರಾಯ 43 ವರ್ಷ ತಂದೆ ದಿ. ಸದಾಶಿವ ಆಚಾರಿ ವಾಸ: ಅರುಣ ಫಾರ್ಮ್ ಹತ್ತಿರ ಚರ್ಚ್ ರಸ್ತೆ ಪೆರಂಪಳ್ಳಿ ಕುಂಜಿಬೆಟ್ಟು ಶಿವಳ್ಳಿ ಗ್ರಾಮ.ಉಡುಪಿ ಜಿಲ್ಲೆ.
ಕೌಶಿಕ್ ಪ್ರಾಯ 19 ವರ್ಷ ತಂದೆ ಪ್ರಭಾಕರ್ ಆಚಾರ್ಯ ವಾಸ: ಗರಡಿ ಮಜಲು ತೆಂಕನಿಡಿಯೂರು ಗ್ರಾಮ ಉಡುಪಿ ಜಿಲ್ಲೆ
Previous Post

ಕಾರ್ಕಳ :ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ರಕ್ಷಾಬಂಧನ ಕಾರ್ಯಕ್ರಮ

Next Post

ಬಾರಕೂರು ನೇಶನಲ್ ಹೈಸ್ಕೂಲ್‌ನಲ್ಲಿ ಆ.29, 30ರಂದು ಪುಸ್ತಕ ಮೇಳ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಾರಕೂರು ನೇಶನಲ್ ಹೈಸ್ಕೂಲ್‌ನಲ್ಲಿ ಆ.29, 30ರಂದು ಪುಸ್ತಕ ಮೇಳ

ಬಾರಕೂರು ನೇಶನಲ್ ಹೈಸ್ಕೂಲ್‌ನಲ್ಲಿ ಆ.29, 30ರಂದು ಪುಸ್ತಕ ಮೇಳ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಾರಕೂರು ನೇಶನಲ್ ಹೈಸ್ಕೂಲ್‌ನಲ್ಲಿ ಆ.29, 30ರಂದು ಪುಸ್ತಕ ಮೇಳ

ಬಾರಕೂರು ನೇಶನಲ್ ಹೈಸ್ಕೂಲ್‌ನಲ್ಲಿ ಆ.29, 30ರಂದು ಪುಸ್ತಕ ಮೇಳ

28/08/2026
ಮನೆಕಳ್ಳತನ ಪ್ರಕರಣ: ಇಬ್ಬರ ಬಂಧನ, ₹23.56 ಲಕ್ಷ ಮೌಲ್ಯದ ಸೊತ್ತು ವಶ..!

ಮನೆಕಳ್ಳತನ ಪ್ರಕರಣ: ಇಬ್ಬರ ಬಂಧನ, ₹23.56 ಲಕ್ಷ ಮೌಲ್ಯದ ಸೊತ್ತು ವಶ..!

27/08/2026
ಕಾರ್ಕಳ :ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ರಕ್ಷಾಬಂಧನ ಕಾರ್ಯಕ್ರಮ

ಕಾರ್ಕಳ :ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ರಕ್ಷಾಬಂಧನ ಕಾರ್ಯಕ್ರಮ

27/08/2026
ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಐದು ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆ ಸೇವೆಯ ಆಚರಣೆ

ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಐದು ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆ ಸೇವೆಯ ಆಚರಣೆ

27/08/2026

Recent News