ಉಡುಪಿ: ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ಆಯೋಜಿಸಿದ್ದ ಸಮುದ್ರ ಪೂಜೆ ಕಾರ್ಯಕ್ರಮದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.
ಈ ಬಾರಿಯ ಮೀನುಗಾರಿಕಾ ಋತುವಿನಲ್ಲಿ ಹೇರಳವಾದ ಮತ್ಸ್ಯ ಸಂಪತ್ತು ದೊರೆತು, ಮೀನುಗಾರರ ಬದುಕು ಸಮೃದ್ಧವಾಗಲಿ ಎಂದು ಅವರು ಹಾರೈಸಿದರು.
ಕಾರ್ಯಕ್ರಮದಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ನಾರಾಯಣ ಜೆ. ಕರ್ಕೇರ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ ವಿವಿಧ ಮೀನುಗಾರ ಸಂಘಟನೆಗಳ ಪ್ರಮುಖರು ಹಾಗೂ ಮೀನುಗಾರ ಮುಖಂಡರು ಉಪಸ್ಥಿತರಿದ್ದರು.






