ಮುನಿಯಾಲು: ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಮುನಿಯಾಲಿನಲ್ಲಿ ಜಿ.ಎಸ್.ಬಿ. ಮಹಿಳಾ ಮಂಡಳಿಯ ವತಿಯಿಂದ 36ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಹಾಗೂ ಸಾಮೂಹಿಕ ಚೂಡಿ ಪೂಜಾ ಕಾರ್ಯಕ್ರಮವು ಭಕ್ತಿಭಾವದಿಂದ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 9 ಗಂಟೆಗೆ ದೇವರ ಪ್ರಾರ್ಥನೆ ನೆರವೇರಿತು. ಬೆಳಿಗ್ಗೆ 10 ಗಂಟೆಗೆ ಗಂಗೆ ಪೂಜೆ ಹಾಗೂ 10.30ಕ್ಕೆ ಸಾಮೂಹಿಕ ಚೂಡಿ ಪೂಜೆ ನಡೆಯಿತು. ಮಧ್ಯಾಹ್ನ 12 ಗಂಟೆಗೆ ಶ್ರೀ ದೇವರಿಗೆ ಮಹಾಪೂಜೆ ಸಲ್ಲಿಸಿ, ಬಳಿಕ ಭೂರಿ ಸಮಾರಾಧನೆ ನೆರವೇರಿತು.
ಮಹಿಳಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ ನಮಿತಾ ನರಸಿಂಹ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಉಪಾಧ್ಯಕ್ಷೆ ಶ್ರೀಮತಿ ಮಂಗಳ ಯಶವಂತ ನಾಯಕ್, ಕೋಶಾಧಿಕಾರಿ ಶ್ರೀಮತಿ ಮಹಾಲಸಾ ಕೃಷ್ಣಕಾಂತ ನಾಯಕ್ ಹಾಗೂ ಕಾರ್ಯದರ್ಶಿ ಶ್ರೀಮತಿ ರಜನಿ ರಾಮ ಪೈ ಸೇರಿದಂತೆ ಮಹಿಳಾ ಮಂಡಳಿಯ ಸರ್ವ ಸದಸ್ಯರು, ಮುಕ್ತೇಸರರು, ಆಡಳಿತ ಮೊಕ್ತೇಸರರು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.
ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ವಾಮನ ಭಟ್ ಹಾಗೂ ಅರ್ಚಕ ವೃಂದದವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಶ್ರೀ ವರಮಹಾಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾದರು.






