Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ–ವಿಟ್ಲಪಿಂಡಿ: ಭಕ್ತರ ಸುರಕ್ಷತೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ..!

Dhrishya News by Dhrishya News
03/09/2026
in ಸುದ್ದಿಗಳು
0
ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ–ವಿಟ್ಲಪಿಂಡಿ: ಭಕ್ತರ ಸುರಕ್ಷತೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ..!
0
SHARES
18
VIEWS
Share on FacebookShare on Twitter

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವದ ಹಿನ್ನೆಲೆಯಲ್ಲಿ ಉಡುಪಿ ನಗರದಲ್ಲಿ ಸಾರ್ವಜನಿಕರ ಸುರಕ್ಷತೆ, ಕಾನೂನು ಸುವ್ಯವಸ್ಥೆ ಹಾಗೂ ಸುಗಮ ಸಂಚಾರಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದೆ. ಉತ್ಸವಗಳು ಸೆಪ್ಟೆಂಬರ್ 4 ಮತ್ತು 5, 2026ರಂದು ನಡೆಯಲಿವೆ.

ಉತ್ಸವದ ಭದ್ರತಾ ಕರ್ತವ್ಯಕ್ಕಾಗಿ 1 ಎಸ್‌ಪಿ, 1 ಹೆಚ್ಚುವರಿ ಎಸ್‌ಪಿ, 2 ಡಿವೈಎಸ್‌ಪಿಗಳು, 6 ಪೊಲೀಸ್ ಇನ್ಸ್‌ಪೆಕ್ಟರ್‌ಗಳು, 25 ಪಿಎಸ್‌ಐಗಳು, 35 ಎಎಸ್‌ಐಗಳು, 186 ಹೆಡ್ ಕಾನ್ಸ್‌ಟೇಬಲ್‌ಗಳು ಹಾಗೂ ಪೊಲೀಸ್ ಮತ್ತು ಮಹಿಳಾ ಸಿಬ್ಬಂದಿ, 50 ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಹೆಚ್ಚುವರಿ ಭದ್ರತೆಗಾಗಿ 1 ಕೆಎಸ್‌ಆರ್‌ಪಿ ತುಕಡಿ, 9 ಡಿಎಆರ್ ತುಕಡಿಗಳು, 3 ಅಗ್ನಿಶಾಮಕ ತಂಡಗಳು, 2 ಆಂಬ್ಯುಲೆನ್ಸ್‌ಗಳು ಹಾಗೂ 3 ಡ್ರೋನ್ ತಂಡಗಳನ್ನು ನಿಯೋಜಿಸಲಾಗಿದೆ.

7 ಕಡೆ ವಾಹನ ಪಾರ್ಕಿಂಗ್ ವ್ಯವಸ್ಥೆ
ಉತ್ಸವಕ್ಕೆ ಆಗಮಿಸುವ ಭಕ್ತಾದಿಗಳ ವಾಹನಗಳ ಸುಗಮ ಪಾರ್ಕಿಂಗ್‌ಗಾಗಿ ನಗರದ 7 ಸ್ಥಳಗಳನ್ನು ಗುರುತಿಸಲಾಗಿದೆ.
ಎಂಜಿಎಂ ಮೈದಾನ
ಶ್ರೀಕೃಷ್ಣ ಮಠ ರಾಜಾಂಗಣ ಪಾರ್ಕಿಂಗ್
ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನ ಪಾರ್ಕಿಂಗ್
ಬೀಡಿನಗುಡ್ಡೆ ಮೈದಾನ
ಬೀಡಿನಗುಡ್ಡೆ ಕ್ರೀಡಾಂಗಣ
ವಿದ್ಯೋದಯ ಶಾಲೆ ಪಾರ್ಕಿಂಗ್
ಮಾಂಡವಿ ರಾಯಲ್ ಗಾರ್ಡನ್ ಪಾರ್ಕಿಂಗ್
45 ಕಡೆ ಹೆಚ್ಚುವರಿ ಸಿಸಿಟಿವಿ, ಡ್ರೋನ್ ಕಣ್ಗಾವಲು ಉತ್ಸವದ ಸಂದರ್ಭದಲ್ಲಿ ಜನಸಂದಣಿ ನಿಯಂತ್ರಣ ಹಾಗೂ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಲಾಗಿದೆ. ಇದಕ್ಕಾಗಿ ಪೊಲೀಸ್ ಸಿಬ್ಬಂದಿ ಹಾಗೂ ಸ್ವಯಂಸೇವಕರ ಸಹಕಾರ ಪಡೆಯಲಾಗುತ್ತಿದೆ.

ನಗರದ ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿಯಾಗಿ 45 ಕಡೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, 12 ಸಾರ್ವಜನಿಕ ಘೋಷಣಾ ವ್ಯವಸ್ಥೆಗಳನ್ನು ಬಳಸಲಾಗುತ್ತಿದೆ. ಉತ್ಸವ ಪ್ರದೇಶದಲ್ಲಿ ಡ್ರೋನ್‌ಗಳ ಮೂಲಕವೂ ನಿರಂತರ ಕಣ್ಗಾವಲು ಇರಲಿದೆ.
ಅಲ್ಲದೆ, ಈ ಹಿಂದೆ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದವರನ್ನು ಗುರುತಿಸಿ ನಿಗಾ ವಹಿಸಲು ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ಗಳನ್ನು ಬಳಸಲಾಗುತ್ತಿದೆ.

ಸಾರ್ವಜನಿಕರಿಗೆ ಪೊಲೀಸ್ ಇಲಾಖೆಯ ಮನವಿ ಉತ್ಸವದ ಸಂದರ್ಭದಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ನಿಗದಿತ ಸ್ಥಳಗಳಲ್ಲಿಯೇ ವಾಹನಗಳನ್ನು ಪಾರ್ಕ್ ಮಾಡಬೇಕು. ಸಂಚಾರ ನಿಯಮಗಳನ್ನು ಪಾಲಿಸುವುದರ ಜೊತೆಗೆ ಪೊಲೀಸರು ನೀಡುವ ಸೂಚನೆಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ 112ಕ್ಕೆ ಕರೆ ಮಾಡಿ ಪೊಲೀಸ್ ಸಹಾಯ ಪಡೆಯುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.

ಶಾಂತಿಯುತ, ಸುರಕ್ಷಿತ ಹಾಗೂ ಸುಗಮ ಶ್ರೀಕೃಷ್ಣ ಜನ್ಮಾಷ್ಟಮಿ–ವಿಟ್ಲಪಿಂಡಿ ಉತ್ಸವಕ್ಕೆ ಸಾರ್ವಜನಿಕರು ಸಹಕರಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.

Previous Post

ಕೊಳಲಗಿರಿ–ಮಣಿಪಾಲ ಸಂಪರ್ಕ ರಸ್ತೆಯಲ್ಲಿ ಬೃಹತ್ ಹೊಂಡ, ಪೊದೆಗಳ ರಾಶಿ: ಶಾಶ್ವತ ಪರಿಹಾರಕ್ಕೆ ಆಗ್ರಹ..!

Next Post

ಶ್ರೀ ಕೃಷ್ಣ ಮಠದ ಸಿಬ್ಬಂದಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಕೃಷ್ಣ ಮಠದ ಸಿಬ್ಬಂದಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

ಶ್ರೀ ಕೃಷ್ಣ ಮಠದ ಸಿಬ್ಬಂದಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಂಗ್ಸ್ ಆಫ್ ಹೋಪ್’: ಬಾಲ್ಯ ಕ್ಯಾನ್ಸರ್‌ನಿಂದ ಗುಣಮುಖರಾದ ಮಕ್ಕಳನ್ನು ಸಂಭ್ರಮಿಸಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

ವಿಂಗ್ಸ್ ಆಫ್ ಹೋಪ್’: ಬಾಲ್ಯ ಕ್ಯಾನ್ಸರ್‌ನಿಂದ ಗುಣಮುಖರಾದ ಮಕ್ಕಳನ್ನು ಸಂಭ್ರಮಿಸಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

03/09/2026
ಶ್ರೀ ಕೃಷ್ಣ ಮಠದ ಸಿಬ್ಬಂದಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

ಶ್ರೀ ಕೃಷ್ಣ ಮಠದ ಸಿಬ್ಬಂದಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

03/09/2026
ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ–ವಿಟ್ಲಪಿಂಡಿ: ಭಕ್ತರ ಸುರಕ್ಷತೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ..!

ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ–ವಿಟ್ಲಪಿಂಡಿ: ಭಕ್ತರ ಸುರಕ್ಷತೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ..!

03/09/2026
ಕೊಳಲಗಿರಿ–ಮಣಿಪಾಲ ಸಂಪರ್ಕ ರಸ್ತೆಯಲ್ಲಿ ಬೃಹತ್ ಹೊಂಡ, ಪೊದೆಗಳ ರಾಶಿ: ಶಾಶ್ವತ ಪರಿಹಾರಕ್ಕೆ ಆಗ್ರಹ..!

ಕೊಳಲಗಿರಿ–ಮಣಿಪಾಲ ಸಂಪರ್ಕ ರಸ್ತೆಯಲ್ಲಿ ಬೃಹತ್ ಹೊಂಡ, ಪೊದೆಗಳ ರಾಶಿ: ಶಾಶ್ವತ ಪರಿಹಾರಕ್ಕೆ ಆಗ್ರಹ..!

03/09/2026

Recent News