ಉಡುಪಿ: ಉಡುಪಿ ಜಿಲ್ಲಾ ಮಟ್ಟದ ಬಾಲಕಿಯರ ಹ್ಯಾಂಡ್‌ಬಾಲ್ ಪಂದ್ಯಾವಳಿ ಸರ್ಕಾರಿ ಪ್ರೌಢಶಾಲೆ, ತೆಂಕನಿಡಿಯೂರು ಇಲ್ಲಿ ನಡೆಯಿತು.
ಪಂದ್ಯಾವಳಿಯಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿನಿಯರು ಉತ್ಸಾಹದಿಂದ ಭಾಗವಹಿಸಿದರು. ಈ ಸಂದರ್ಭದಲ್ಲಿ ಪಂದ್ಯಾವಳಿಯ ಉದ್ಘಾಟನೆ ಕೆ ವಿಜಯ ಕೊಡವೂರು ನೆರವೇರಿಸಿ, ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಲಾಯಿತು. ಶಿಕ್ಷಕರು ಹಾಗೂ ಸಂಘಟಕರು ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ನೀಡಿದರು.






