ಬ್ರಹ್ಮಾವರ: ಕರ್ನಾಟಕ ಪಬ್ಲಿಕ್ ಸ್ಕೂಲ್ (KPS) ಬ್ರಹ್ಮಾವರದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ, ಇದೀಗ ವಿಭಾಗ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ಮಂಡ್ಯದಲ್ಲಿ ಸೆಪ್ಟೆಂಬರ್ 12 ಮತ್ತು 13ರಂದು ನಡೆಯಲಿರುವ ವಿಭಾಗ ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ KPS ಬ್ರಹ್ಮಾವರದ ಆಯ್ಕೆಯಾದ ವಿದ್ಯಾರ್ಥಿಗಳು ಶಾಲೆಯನ್ನು ಪ್ರತಿನಿಧಿಸಲಿದ್ದಾರೆ.
ವಿಭಾಗ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು:
17 ವರ್ಷದೊಳಗಿನ ಬಾಲಕಿಯರ ವಿಭಾಗ:
• ಹರ್ಷಿತಾ
• ಮಾನ್ಯ
17 ವರ್ಷದೊಳಗಿನ ಬಾಲಕರ ವಿಭಾಗ:
• ಗೌತಮ್ ಆಚಾರ್ಯ
14 ವರ್ಷದೊಳಗಿನ ಬಾಲಕಿಯರ ವಿಭಾಗ:
• ದಕ್ಷಾ
• ಸಾನ್ವಿ ಪಿ. ಪೂಜಾರಿ
• ಮಾನ್ವಿ
• ಪೂಜಿತಾ
• ಪತ್ರಿಕಾ
• ರಶ್ಮಿ
• ಸಾನ್ವಿ ಎಸ್. ಮೊಗವೀರ
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, SDMC ಹಾಗೂ PTA ಪದಾಧಿಕಾರಿಗಳು, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
ವಿಭಾಗ ಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ವಿಜಯಶಾಲಿಯಾಗಿ ಮರಳಲಿ ಎಂದು ಶುಭ ಹಾರೈಸಿದ್ದಾರೆ.








