Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಬ್ರಹ್ಮಾವರ ಎಸ್‌ಎಂಎಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಉದ್ಘಾಟನೆ

Dhrishya News by Dhrishya News
11/09/2026
in मौसम, ಸುದ್ದಿಗಳು
0
ಬ್ರಹ್ಮಾವರ ಎಸ್‌ಎಂಎಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಉದ್ಘಾಟನೆ
0
SHARES
1
VIEWS
Share on FacebookShare on Twitter

ಬ್ರಹ್ಮಾವರ : ಬ್ರಹ್ಮಾವರ ಎಸ್‌ಎಂಎಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಉದ್ಘಾಟನಾ ಸಮಾರಂಭ ಸೆ.10ರಂದು ನಡೆಯಿತು.

 2026-2027ನೇ ಸಾಲಿನ ಎನ್‌ಎಸ್‌ಎಸ್ ಘಟಕಗಳ ವಾರ್ಷಿಕ ಚಟುವಟಿಕೆಯ ಕಾರ್ಯಕ್ರಮವನ್ನು ನಿಕಟಪೂರ್ವ ಪ್ರಾಂಶುಪಾಲ ಮತ್ತು ರಾಜಕೀಯ ಶಾಸ್ತ್ರ ಉಪನ್ಯಾಸಕರಾದ ಸುಧಾಕರ ವಕ್ವಾಡಿ ಉದ್ಘಾಟಿಸಿ ಮಾತನಾಡಿದ ಅವರು, ಯುವ ಜನತೆಯನ್ನು ಆದರ್ಶ ಪ್ರಜೆಗಳನ್ನಾಗಿಸಿಕೊಳ್ಳಲು ಶಿಕ್ಷಕ ಮತ್ತು ವಿದ್ಯಾರ್ಥಿಯ ಸಂಬಂಧದ ಜೊತೆಗೆ ಸಮುದಾಯದ ಸಮಸ್ಯೆಗಳನ್ನು ಅರ್ಥೈಸಿಕೊಂಡು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಶಿಸ್ತು, ನಾಯಕತ್ವ, ಸಹಕಾರ ಮತ್ತು ನಾಗರಿಕ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ಉತ್ತಮ ವೇದಿಕೆಯಾಗಿದೆ ಎಂದರು.

ಎಸ್ಎಮ್ಎಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಬರ್ಟ್ ರೋಡ್ರಿಗಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪಠ್ಯ ಜ್ಞಾನದ ಜೊತೆಗೆ ಸಾಮಾಜಿಕ ಅರಿವು, ಮಾನವೀಯ ಮೌಲ್ಯಗಳು ಮತ್ತು ಸೇವಾ ಮನೋಭಾವವನ್ನು ಬೆಳೆಸಿಕೊಂಡು ಸಮಾಜದ ಒಳಿತಿಗಾಗಿ ಸ್ವಯಂಪ್ರೇರಿತರಾಗಿ ಸೇವೆ ಸಲ್ಲಿಸುವುದರೊಂದಿಗೆ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿ ಎಂದರು.

ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಶ್ರೀ ಪ್ರಕಾಶ್ ನಾಯಕ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಎನ್‌ಎಸ್‌ಎಸ್ ಉದ್ದೇಶ, ಮಹತ್ವ ಹಾಗೂ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವವನ್ನು ಬೆಳೆಸುವಲ್ಲಿ ಎನ್‌ಎಸ್‌ಎಸ್  ಪಾತ್ರದ ಕುರಿತು ವಿವರಿಸಿದರು. ಸಮಾಜಮುಖಿ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಹಾಗೂ ಸೇವೆಯ ಮೂಲಕ ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಅವರು ಕರೆ ನೀಡಿದರು.

ವೇದಿಕೆಯಲ್ಲಿ ಎನ್ ಎಸ್ ಎಸ್ ಯೋಜನಾಧಿಕಾರಿ ಶ್ರೀ ಡಾ. ಮಂಜುನಾಥ್ ಉಡುಪ, ಸಹ ಯೋಜನಾಧಿಕಾರಿ ಶ್ರೀಮತಿ ನಕ್ಷಿತಾ, ಎನ್ಎಸ್ಎಸ್ ಘಟಕಗಳ ವಿದ್ಯಾರ್ಥಿ ನಾಯಕರುಗಳಾದ ರತಿಕ್, ಸಂಕೇತ್, ನವಮಿ ತುಳಸಿ, ಕೀರ್ತನ್ ಉಪಸ್ಥಿತರಿದ್ದರು.

ದ್ವಿತೀಯ ಬಿಸಿಎ ವಿದ್ಯಾರ್ಥಿ ರತಿಕ್ ಅವರ ನೇತೃತ್ವದಲ್ಲಿ ಸ್ವಯಂಸೇವಕರು ಎನ್‌ಎಸ್‌ಎಸ್  ಪ್ರತಿಜ್ಞೆ ಸ್ವೀಕರಿಸಿದರು.ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ, ನಾಯಕತ್ವದ ಗುಣಗಳು ಹಾಗೂ ರಾಷ್ಟ್ರ ಸೇವೆಯ ಬದ್ಧತೆಯನ್ನು ಬೆಳೆಸುವ ಸಾರ್ಥಕ ಪ್ರಯತ್ನವಾಗಿ ಯಶಸ್ವಿಯಾಗಿ ನೆರವೇರಿತು.

ದ್ವಿತೀಯ ಬಿಸಿಎ ವಿದ್ಯಾರ್ಥಿ ಸಂಕೇತ್ ಸ್ವಾಗತಿಸಿದರು. ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಸ್ವಾತಿ ಕಾರ್ಯಕ್ರಮ ನಿರೂಪಿಸಿದರು. ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಕುಮಾರಿ ಕೀರ್ತನಾ ವಂದಿಸಿದರು.

Previous Post

ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ ಎಸ್‌ಎಂಎಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಉದ್ಘಾಟನೆ

ಬ್ರಹ್ಮಾವರ ಎಸ್‌ಎಂಎಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಉದ್ಘಾಟನೆ

11/09/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

11/09/2026
ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು..!

ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು..!

11/09/2026
ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

10/09/2026

Recent News

imunify-bot-check