ಬೈಂದೂರು: ಉಪ್ಪುಂದ ಕಾಸನಾಡಿ ಸಮೀಪದ ಹಾಡಿಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟ ಘಟನೆ ಸೆ.15ರಂದು ನಡೆದಿದೆ.
ಮೃತರನ್ನು ಬಿಜೂರು, ಬೈಂದೂರು ನಿವಾಸಿ ರವೀಂದ್ರ ದೇವಾಡಿಗ (31) ಎಂದು ಗುರುತಿಸಲಾಗಿದೆ. ಅವರು ಪತ್ನಿ ಶಾರದಾ ಹಾಗೂ ಪುತ್ರ ಶರತ್ ಅವರೊಂದಿಗೆ ಪತ್ನಿಯ ಮನೆಯಲ್ಲಿದ್ದು, ಮದ್ಯಪಾನದ ಅಭ್ಯಾಸ ಹೊಂದಿದ್ದರು ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಸೆ.15ರಂದು ಮಧ್ಯಾಹ್ನ ಸುಮಾರು 3.30ರ ವೇಳೆಗೆ ಮನೆಯ ಸಮೀಪದ ಹಾಡಿಯಲ್ಲಿ ರವೀಂದ್ರ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆಯವರು ಹಾಗೂ ಸ್ಥಳೀಯರು ಅವರನ್ನು ಕೆಳಗಿಳಿಸಿ ರಿಕ್ಷಾದ ಮೂಲಕ ಬೈಂದೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಜೀವನದಲ್ಲಿ ಜಿಗುಪ್ಸೆಗೊಂಡು ರವೀಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ಸಂಖ್ಯೆ 52/2026, ಕಲಂ 194 BNSS ಅಡಿಯಲ್ಲಿ ಪ್ರಕರಣ ದಾಖಲಾಗಿದೆ.







