ಬೆಂಗಳೂರು, ಸೆಪ್ಟೆಂಬರ್ 17, 2026: ದೇಶದ ಪ್ರಮುಖ ವಾಣಿಜ್ಯ ವಾಹನ ತಯಾರಿಕಾ ಸಂಸ್ಥೆಯಾದ ಟಾಟಾ ಮೋಟಾರ್ಸ್, ತನ್ನ ಎಲ್ಲಾ ಮಾದರಿಯ ವಾಣಿಜ್ಯ ವಾಹನಗಳ ಬೆಲೆಯನ್ನು ಅಕ್ಟೋಬರ್ 1 ರಿಂದ ಅನ್ವಯವಾಗುವಂತೆ ಶೇಕಡ 1 ರವರೆಗೆ ಹೆಚ್ಚಿಸುವುದಾಗಿ ಗುರುವಾರ ಘೋಷಿಸಿದೆ.
ಕಚ್ಚಾ ವಸ್ತುಗಳ ಬೆಲೆ ಹಾಗೂ ವಾಹನ ಉತ್ಪಾದನಾ ವೆಚ್ಚ ಗಣನೀಯವಾಗಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಕಂಪನಿ ತಿಳಿಸಿದೆ. ವಾಹನಗಳ ಮಾದರಿ ಹಾಗೂ ವೇರಿಯಂಟ್‌ಗಳಿಗೆ ಅನುಗುಣವಾಗಿ ಈ ಬೆಲೆ ಏರಿಕೆಯ ಪ್ರಮಾಣದಲ್ಲಿ ವ್ಯತ್ಯಾಸವಿರಲಿದೆ.







