ಕಲ್ಯಾಣಪುರ: ಗಣೇಶ ಚೌತಿ ಸಂದರ್ಭದಲ್ಲಿ ಧಾರ್ಮಿಕ ಸೌಹಾರ್ದತೆ ಹಾಗೂ ಭಾವೈಕ್ಯತೆಯ ಸಂದೇಶ ಸಾರಿದ ಕಲ್ಯಾಣಪುರ ಅಂಗಡಿ ಮಾಲೀಕರ ಒಕ್ಕೂಟದ ವತಿಯಿಂದ ಮುಸ್ಲಿಂ ಸಮಾಜದ ಸಮಾಜಸೇವಕ ರಫೀಕ್ ಕಲ್ಯಾಣಪುರ ಅವರನ್ನು ಸನ್ಮಾನಿಸಲಾಯಿತು.
ಸಮಾಜ ಸೇವೆ ಹಾಗೂ ಸಾರ್ವಜನಿಕ ಹಿತಾಸಕ್ತಿಯ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ರಫೀಕ್ ಅವರ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು.
ವಿವಿಧ ಧರ್ಮಗಳ ಜನರು ಪರಸ್ಪರ ಗೌರವ, ಸಹಕಾರ ಹಾಗೂ ಸೌಹಾರ್ದತೆಯಿಂದ ಬದುಕುವ ಮೂಲಕ ಸಮಾಜದಲ್ಲಿ ಭಾವೈಕ್ಯತೆಯನ್ನು ಮತ್ತಷ್ಟು ಬಲಪಡಿಸಬೇಕು ಎಂಬ ಸಂದೇಶವನ್ನು ಈ ಸಂದರ್ಭದಲ್ಲಿ ಸಾರಲಾಯಿತು.







