ಬ್ರಹ್ಮಾವರ: ಪ್ರಜಾ ಸೇವಾ ಇಲಾಖೆ ಹಾಗೂ ತಾಲೂಕು ಆಡಳಿತ ಬ್ರಹ್ಮಾವರ ವತಿಯಿಂದ ಹಾವಂಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆ ನಡೆಯಿತು.
ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ ಅವರು ಸಭೆಯ ಅಧ್ಯಕ್ಷತೆ ವಹಿಸಿ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸಲು ಆದ್ಯತೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.







