ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಜನಪ್ರಿಯ ‘ಅಬ್ಬರದ ಪಿಲಿ ಪಂಥ’ (ಹುಲಿವೇಷ ಸ್ಪರ್ಧೆ) 2026 ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಗಿದೆ.
ಅಕ್ಟೋಬರ್ 18, 2026ರಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಪಿಲಿ ಪಂಥ ಕಾರ್ಯಕ್ರಮ ನಡೆಯಲಿದೆ.
ಉಚ್ಚಿಲ ದಸರಾ ಮಹೋತ್ಸವವು ಅಕ್ಟೋಬರ್ 11ರಿಂದ ಅಕ್ಟೋಬರ್ 21ರವರೆಗೆ ನಡೆಯಲಿದ್ದು, ಇದರ ಅಂಗವಾಗಿ ಆಯೋಜಿಸಲಾಗಿರುವ ಪಿಲಿ ಪಂಥವು ಕರಾವಳಿಯ ಸಾಂಸ್ಕೃತಿಕ ಸಂಭ್ರಮಕ್ಕೆ ಮೆರುಗು ನೀಡಲಿದೆ.







