ಉಡುಪಿ: ಬನ್ನಂಜೆಯ ಹೊಸ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ನೆಲಮಹಡಿಯಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಸುಮಾರು 40 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.20ರಂದು ಬೆಳಕಿಗೆ ಬಂದಿದೆ.
ಸೆ.20ರಂದು ಬೆಳಿಗ್ಗೆ 7 ಗಂಟೆಗೆ ಕೆಎಸ್‌ಆರ್‌ಟಿಸಿ ಉಡುಪಿ ಘಟಕದ ಸಿಬ್ಬಂದಿ ಕರೆ ಮಾಡಿ ಘಟಕದ ಸಹಾಯಕ ಸಂಚಾರ ನಿರೀಕ್ಷಕ ರವೀಂದ್ರ (53) ಅವರಿಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ತೆರಳಿದ ಅವರು, ವ್ಯಕ್ತಿಯನ್ನು ಆಂಬುಲೆನ್ಸ್ ಮೂಲಕ ಬೆಳಿಗ್ಗೆ 8 ಗಂಟೆಗೆ ಉಡುಪಿಯ ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು.
ವೈದ್ಯಾಧಿಕಾರಿಗಳು ಪರಿಶೀಲಿಸಿ ವ್ಯಕ್ತಿ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.






