Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

Dhrishya News by Dhrishya News
21/09/2026
in ಸುದ್ದಿಗಳು
0
ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!
0
SHARES
5
VIEWS
Share on FacebookShare on Twitter

ಉಚ್ಚಿಲ: ಸುಮಾರು ಒಂದು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಮೊಗವೀರ ಸಮಾಜದ ಗುರು ಪರಂಪರೆಯ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿಯನ್ನು ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಸ್ಥಾಪಿಸಬೇಕೆಂದು ಅಷ್ಟಮಂಗಲ ಪ್ರಶ್ನೆಯಲ್ಲಿ ತೋರಿ ಬಂದ ಹಿನ್ನೆಲೆಯಲ್ಲಿ, ಮೊಗವೀರ ಸಮಾಜ ಬಾಂಧವರ ಸಂಕಲ್ಪದಂತೆ ಸುಮಾರು ರೂ.3 ಕೋಟಿ ವೆಚ್ಚದಲ್ಲಿ, 31 ಅಡಿ ಎತ್ತರ ಹಾಗೂ ಸುಮಾರು 14 ಸಾವಿರ ಕೆ.ಜಿ. ತೂಕದ ಕಂಚನ್ನು ಬಳಸಿ ಭವ್ಯ ಪುತ್ಥಳಿಯನ್ನು ನಿರ್ಮಿಸಲಾಗಿದೆ.

ಈ ಪುತ್ಥಳಿಯು ಮೊಗವೀರ ಸಮಾಜದ ಏಕತೆ, ಗುರುಭಕ್ತಿ ಹಾಗೂ ಗುರು ಪರಂಪರೆಯ ಭವ್ಯತೆಯನ್ನು ಮುಂದಿನ ಪೀಳಿಗೆಗೆ ಸಾರುವ ಮಹತ್ವದ ಪ್ರತೀಕವಾಗಲಿದೆ.

ಅತ್ಯಂತ ಶ್ರದ್ಧಾ-ಭಕ್ತಿಯಿಂದ ನಿರ್ಮಾಣಗೊಂಡಿರುವ ಮೊಗವೀರ ಕುಲಗುರುಗಳ ಕಂಚಿನ ಪುತ್ಥಳಿ ಅನಾವರಣ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ನಿರ್ಮಿಸಲ್ಪಟ್ಟಿರುವ ನೂತನ ವಿದ್ಯಾರ್ಥಿ ನಿಲಯದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ ವಿತರಣಾ ಕಾರ್ಯಕ್ರಮವು ಇದೇ ಸೆಪ್ಟೆಂಬರ್ 25, ಶುಕ್ರವಾರ ಬೆಳಗ್ಗೆ 10.00 ಗಂಟೆಗೆ ಉಚ್ಚಿಲ ಮೊಗವೀರ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಶಿವರಾಜ್ ತಂಗಡಗಿ ಅವರು ನೂತನ ಪುತ್ಥಳಿಯನ್ನು ಅನಾವರಣಗೊಳಿಸಲಿದ್ದಾರೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ರಿಜ್ವಾನ್ ಅರ್ಷದ್ ಅವರು ಗುರಿಕಾರರಿಗೆ ಗೌರವಧನ ವಿತರಿಸಲಿದ್ದು, ನಾಡೋಜ ಡಾ. ಜಿ. ಶಂಕರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರಾದ ಶ್ರೀ ಸುರೇಶ್ ಶೆಟ್ಟಿ ಗುರ್ಮೆ ಹಾಗೂ ಶ್ರೀ ಯಶಪಾಲ್ ಎ. ಸುವರ್ಣ, ಉಡುಪಿ ಜಿಲ್ಲಾಧಿಕಾರಿಗಳಾದ ಶ್ರೀಮತಿ ಟಿ.ಕೆ. ಸ್ವರೂಪ, ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳಾದ ಶ್ರೀ ಪ್ರತೀಕ್ ಬಾಯಲ್ (IAS), ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್ ಹಾಗೂ ಶ್ರೀ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕರಾದ ಶ್ರೀ ಲಾಲಾಜಿ ಆರ್. ಮೆಂಡನ್, ಉದ್ಯಮಿ ಶ್ರೀ ಆನಂದ ಸಿ. ಕುಂದರ್, ಕೋಟ,ಶ್ರೀ ಪ್ರಸಾದ್ ರಾಜ್ ಕಾಂಚನ್, ಉದ್ಯಮಿ ಉಡುಪಿ, ದ.ಕ. ಮೊಗವೀರ ಮಹಾಜನ ಸಂಘ (ರಿ.), ಮುಂಬೈ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ವೇದ್ ಪ್ರಕಾಶ್ ಶ್ರೀಯಾನ್, ಮೊಗವೀರ ವ್ಯವಸ್ಥಾಪಕ ಮಂಡಳಿ (ರಿ.), ಮುಂಬೈ ಇದರ ಅಧ್ಯಕ್ಷರಾದ ಶ್ರೀ ಗಣೇಶ್ ಕಾಂಚನ್, ಮೊಗವೀರ ಮಹಾಜನ ಸೇವಾ ಸಂಘ (ರಿ.), ಬಗ್ವಾಡಿ, ಮುಂಬೈ ಇದರ ಅಧ್ಯಕ್ಷರಾದ ಶ್ರೀ ಸಂತೋಷ್ ಪುತ್ರನ್, ದ.ಕ. ಮೊಗವೀರ ಮಹಿಳಾ ಮಹಾಜನ ಸಂಘ (ರಿ.) ಅಧ್ಯಕ್ಷರಾದ ಶ್ರೀಮತಿ ಕವಿತಾ ಶರತ್ ಸೇರಿದಂತೆ ಸಮಾಜದ ಗಣ್ಯರು ಉಪಸ್ಥಿತರಿರುವರು.

ಮೊಗವೀರ ಸಮಾಜದ ಗೌರವಾನ್ವಿತ ಗುರಿಕಾರರು,
ಸಮಾಜ ಬಾಂಧವರು, ಸಂಯುಕ್ತ ಸಭೆಗಳ ಹಾಗೂ ಗ್ರಾಮ ಸಭೆಗಳ ಪ್ರತಿನಿಧಿಗಳು, ವಿವಿಧ ಮಹಿಳಾ ಸಂಘಗಳ ಸದಸ್ಯೆಯರು, ವಿವಿಧ ಮೀನುಗಾರಿಕಾ ಸಂಘ-ಸಂಸ್ಥೆಗಳ ಸದಸ್ಯರು ಸೇರಿದಂತೆ ಕರಾವಳಿ ಕರ್ನಾಟಕದ ಸರ್ವ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಐತಿಹಾಸಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ (ರಿ.), ಉಚ್ಚಿಲವು ತನ್ನ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದೆ.

Previous Post

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

Next Post

ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

21/09/2026
ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

21/09/2026
ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

21/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026

Recent News

imunify-bot-check