ಕಾರ್ಕಳ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉಳಿತಾಯ ಖಾತೆ ಹೊಂದಿದ್ದ ವ್ಯಕ್ತಿ ಯೊಬ್ಬರಿಗೆ ಸೆಪ್ಟೆಂಬರ್ 15ರಂದು ಮಧ್ಯಾಹ್ನ 12:51ಕ್ಕೆ ಅಪರಿಚಿತರಿಂದ ಕರೆ ಬಂದಿತ್ತು. ಕರೆ ಸ್ವೀಕರಿಸಿದಾಗ ಹತ್ತಿರದ ಬ್ಯಾಂಕ್‌ಗೆ ತೆರಳಿ ವಿಚಾರಿಸುವಂತೆ ತಿಳಿಸಲಾಗಿತ್ತು. ಬಳಿಕ ಮಧ್ಯಾಹ್ನ 2 ಗಂಟೆಗೆ ಮೊಬೈಲ್‌ನಲ್ಲಿರುವ ಫೋನ್‌ಪೇ ಮೂಲಕ ಖಾತೆಯ ಬ್ಯಾಲೆನ್ಸ್ ಪರಿಶೀಲಿಸಿದಾಗ, ಖಾತೆಯಲ್ಲಿದ್ದ ₹96,000 ಹಣ ಕಡಿತಗೊಂಡಿರುವುದು ಗಮನಕ್ಕೆ ಬಂದಿದೆ.
ನಂತರ ಬ್ಯಾಂಕ್‌ಗೆ ತೆರಳಿ ಪರಿಶೀಲಿಸಿದಾಗ ಖಾತೆಯಲ್ಲಿದ್ದ ಸಂಪೂರ್ಣ ಹಣ ಕಡಿತಗೊಂಡಿರುವುದು ತಿಳಿದುಬಂದಿದೆ.
ಅಪರಿಚಿತ ಸೈಬರ್ ವಂಚಕರು ಆನ್‌ಲೈನ್ ಮೂಲಕ ಹಣ ವರ್ಗಾವಣೆ ಮಾಡಿಕೊಂಡಿರುವುದಾಗಿ ನೀಡಿದ ದೂರಿನ ಆಧಾರದ ಮೇಲೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







