ಕೋಟ: ಮೊಳಹಳ್ಳಿ ಗ್ರಾಮದ ಕಾಜಾಡಿ ಮನೆ ಕೂರಾಳದಲ್ಲಿ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದ ಕರುಣಾಕರ ಶೆಟ್ಟಿ (52) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸೆ. 22ರಂದು ಬೆಳಿಗ್ಗೆ 9.30ರಿಂದ 10.30ರ ಮಧ್ಯೆ ಈ ಘಟನೆ ನಡೆದಿದ್ದು, ಕಾಯಿಲೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







