ಬ್ರಹ್ಮಾವರ: ಯಡ್ತಾಡಿ ಗ್ರಾಮದ ಮನೆಯೊಂದರಲ್ಲಿ ವಾಸವಾಗಿದ್ದ ಮಂಗಳಾ (21) ಎಂಬ ಯುವತಿ ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.
ಮನೆಯಲ್ಲಿದ್ದ ಗೋಪಾಲ (48) ಅವರ ಮಗ ಪಂಕಜ್ ಒಂದು ತಿಂಗಳ ಹಿಂದೆ ಜ್ವರದಿಂದ ಮೃತಪಟ್ಟಿದ್ದು, ಈ ಘಟನೆಯಿಂದ ಮಂಗಳಾ ಮನನೊಂದು ಖಿನ್ನತೆಗೆ ಒಳಗಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸೆ. 16ರಂದು ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ವೈದ್ಯರ ಸಲಹೆಯಂತೆ ಸೆ. 19ರಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸೆ. 22ರಂದು ಬೆಳಿಗ್ಗೆ 11.46ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







