ಕಾರ್ಕಳ: ತಾಲೂಕಿನ ಕಸಬ ಗ್ರಾಮದ ಕಲ್ಲೊಟ್ಟೆ–ಪತ್ತೊಂಜಿಕಟ್ಟೆ ಸಾರ್ವಜನಿಕ ರಸ್ತೆ ಬದಿಯ ಗೋಕರ್ಣನಾಥ ಕೋ-ಆಪರೇಟಿವ್ ಸೊಸೈಟಿ ಬಳಿಯ ಕಟ್ಟಡದ ಕೋಣೆಯೊಂದರಲ್ಲಿ ಮಟ್ಕಾ ಜುಗಾರಿ ಆಟಕ್ಕೆ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿ ನಗದು ಹಣ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ದಿನಾಂಕ 23/09/2026ರಂದು ದೊರೆತ ಮಾಹಿತಿಯ ಆಧಾರದ ಮೇಲೆ ಕಾರ್ಕಳ ನಗರ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪೊಲೀಸ್ ಉಪನಿರೀಕ್ಷಕ ಶಿವಕುಮಾರ್ ಅವರು ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಆರೋಪಿ ಸಾಗರ್ ಎಂಬಾತನಿಂದ ಮಟ್ಕಾ ಜುಗಾರಿ ಆಟಕ್ಕೆ ಬಳಸಿದ್ದ ₹3,440 ನಗದು ಹಣ, ಮಟ್ಕಾ ಸಂಖ್ಯೆ ಬರೆದ ಚೀಟಿ ಹಾಗೂ ಪೆನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






