Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

Dhrishya News by Dhrishya News
26/09/2026
in ಸುದ್ದಿಗಳು
0
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!
0
SHARES
3
VIEWS
Share on FacebookShare on Twitter

ಉಡುಪಿ : ದೇಶಕ್ಕಾಗಿ, ಪಕ್ಷದ ಬೆಳವಣಿಗೆಗೋಸ್ಕರ ತನ್ನ ಜೀವನವನ್ನೇ ಸಮರ್ಪಿಸಿದ ದಿವ್ಯ ಚೇತನ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ತ್ಯಾಗ, ಬಲಿದಾನ, ತತ್ವಾದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಭಾರತೀಯ ಜನಸಂಘದ ಸ್ಥಾಪಕರಲ್ಲೋರ್ವರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪಂಡಿತ್ ಜೀ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.

ಇಂದು ನಾವು ಪರ್ವ ಕಾಲದಲ್ಲಿದ್ದೇವೆ. ಇಬ್ಬರು ಮಹಾನ್ ನಾಯಕರಾದ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರು ಬೀಜ ಬಿತ್ತಿದ ಸದುದ್ದೇಶ ಫಲಿಸಿದೆ. ಅವರ ಕನಸು ನನಸಾಗಿದೆ. ಸಂವಿಧಾನದ 370ನೇ ವಿಧಿ ರದ್ಧತಿಯಿಂದಾಗಿ ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ. ಪಂಡಿತ್ ಜೀ ಅವರ ಅಂತ್ಯೋದಯ ಪರಿಕಲ್ಪನೆ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಜನಪರ ಯೋಜನೆಗಳಲ್ಲಿ ಪ್ರತಿಫಲಿಸುತ್ತಿದೆ ಎಂದರು.

ಪಕ್ಷದ ಕಾರ್ಯಕರ್ತರು ಸೇವಾ ಮನೋಭಾವನೆಯಿಂದ ಸೇವೆ ಮಾಡಿದಾಗ ಅದು ಪಕ್ಷ ಕಟ್ಟಲು ಶ್ರಮಿಸಿದ ಹಿರಿಯರಿಗೆ ಸಲ್ಲುವ ಗೌರವ. ಸೇವೆಯ ಹೆಸರಿನಲ್ಲೇ ಜಿಲ್ಲೆಯಾದ್ಯoತ ಸೆ.17ರಂದು ಚಾಲನೆಗೊಂಡಿರುವ ‘ಸೇವಾ ಸಂಕಲ್ಪ ಅಭಿಯಾನ’ ಅ.17ರ ವರೆಗೆ ನಡೆಯಲಿದೆ. ಭಕ್ತಿ, ಶೃದ್ದೆ ಮತ್ತು ಬದ್ಧತೆಯಿಂದ ಪಕ್ಷದ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಪಕ್ಷವನ್ನು ಇನ್ನಷ್ಟು ಸದೃಢವಾಗಿ ಕಟ್ಟಿ ಬೆಳೆಸಲು ಸಂಘಟಿತರಾಗಿ ಶ್ರಮಿಸೋಣ ಎಂದು ಕುತ್ಯಾರು ತಿಳಿಸಿದರು.

ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಅವರು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ತತ್ವಾದರ್ಶಗಳು, ತ್ಯಾಗ, ಬಲಿದಾನದ ಕುರಿತು ವಿಸ್ತ್ರತ ಮಾಹಿತಿಯೊಂದಿಗೆ ಉಪನ್ಯಾಸವನ್ನು ನಡೆಸಿಕೊಟ್ಟರು.

ಬಿಜೆಪಿ ಮಂಗಳೂರು ವಿಭಾಗ ಎಸ್ಐಆರ್ ಸಂಚಾಲಕ ಕೆ.ಉದಯ ಕುಮಾರ್ ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಮಟ್ಟಾರ್ ರತ್ನಾಕರ ಹೆಗ್ಡೆ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು ಸಹಿತ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕಾರಿಣಿ ಹಾಗೂ ಸಮಿತಿ ಸದಸ್ಯರು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಎಂ. ಅಂಚನ್ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿ, ಶ್ರೀಕಾಂತ್ ನಾಯಕ್ ವಂದಿಸಿದರು.

Previous Post

ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಿಗೆ ಕರ್ತವ್ಯಕ್ಕೆ ಅಡ್ಡಿ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ..!

Next Post

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026
ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯರಿಗೆ ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಅಶೋಕ ಹೇಳುವ ವ್ಯಕ್ತಿಯ ಮೇಲೆ ಕ್ರಮ ಯಾವಾಗ ಪೊಲೀಸರೇ. ??  – ಶ್ರೀಮತಿ ರಮಿತಾ ಸೂರ್ಯವಂಶಿ

ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಿಗೆ ಕರ್ತವ್ಯಕ್ಕೆ ಅಡ್ಡಿ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ..!

26/09/2026

Recent News

imunify-bot-check